ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chinthamani News: ಕಾಂಗ್ರೆಸ್ ಅಭ್ಯರ್ಥಿಗಳ ಭರ್ಜರಿ ಗೆಲುವು: ಚಿಂತಾಮಣಿಯಲ್ಲಿ ಕೈ ಕಾರ್ಯಕರ್ತರಿಂದ ಸಂಭ್ರಮ

ರಾಜ್ಯದಲ್ಲಿ ನಡೆದ ಉಪ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ.ಈ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಂತಾಮಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಆಫೀಸ್ ಮುಂಭಾಗ ಪಟಾಕಿ ತಿಳಿಸಿ ಸಿಹಿ ಹಂಚಿ ಸಂಭ್ರಮ ಮಾಡಿದರು.

ಚಿಂತಾಮಣಿ: ರಾಜ್ಯದಲ್ಲಿ ನಡೆದ ಉಪ ಚುನಾವಣಾ ಫಲಿತಾಂಶ(By-election result)ದ ಹಿನ್ನೆಲೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಈ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಂತಾಮಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಆಫೀಸ್ ಮುಂಭಾಗ ಪಟಾಕಿ ತಿಳಿಸಿ ಸಿಹಿ ಹಂಚಿ ಸಂಭ್ರಮ ಮಾಡಿದರು.

ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಬೆನ್ನಲ್ಲೇ ಚಿಂತಾಮಣಿ ಯ ರಸ್ತೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ (Dr M C Sudhakar)ಅವರ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹಿಡಿದ ಕಾರ್ಯಕರ್ತರು, ಪಕ್ಷದ ಬಾವುಟಗಳನ್ನು ಬೀಸುತ್ತಾ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: Davanagere South By-Election Results: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು

ಗೆಲುವಿನ ಕುರಿತು ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುರುಗುಮಲ್ಲ ಲಕ್ಷ್ಮೀನಾರಾ ಯಣ ರೆಡ್ಡಿ, ಮುಖಂಡರಾದ ಶೇಕ್ ಸಾಧಿಕ್ ರಜ್ವಿ ಇದು ಜನರ ಗೆಲುವು ಮತ್ತು ಪಕ್ಷದ ಸಂಘಟಿತ ಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿದರು.

2028 ರಲ್ಲಿ ಬರುವ ಚುನಾವಣೆಯಲ್ಲಿ ಚಿಂತಾಮಣಿ ವಿಧಾನಸಭಾ ಕ್ಷೇತ್ರದಿಂದ ಡಾ.ಎಂ.ಸಿ. ಸುಧಾಕರ್ ಅವರು ಭಾರಿ ಬಹುಮತದೊಂದಿಗೆ ಜಯಗಳಿಸುವುದು ನಿಶ್ಚಿತ ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿ ಮತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳ ಮೇಲೆ ಜನರಿಗೆ ನಂಬಿಕೆಯಿದೆ ಡಾ. ಸುಧಾಕರ್ ಅವರ ನೇತೃತ್ವದಲ್ಲಿ ಕ್ಷೇತ್ರವು ಹೊಸ ಆಯಾಮ ಪಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಅಧ್ಯಕ್ಷರಾದ ಶ್ರೀನಾಥ್ ಬಾಬು, ಕಾಂಗ್ರೆಸ್ ಮುಖಂಡರಾದ ರೇಖಾ ಉಮೇಶ್, ಸಿ ಕೆ ಎಲ್ ಚಾಂದ್ ಪಾಷ, ಅಂಜನಪ್ಪ, ಆರ್ ಎಂ ಜೆ ಶ್ರೀನಿವಾಸ್, ಮಾದ ಮಂಗಲ ಚಂದ್ರಪ್ಪ, ಶ್ರೀನಿವಾಸ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.