ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Human Rights: ಪ್ರತಿಯೊಬ್ಬರೂ ಮಾನವ ಹಕ್ಕುಗಳ ಅರಿವು ಹೊಂದ ಬೇಕು: ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ

Human Rights: ಪ್ರತಿಯೊಬ್ಬರೂ ಮಾನವ ಹಕ್ಕುಗಳ ಅರಿವು ಹೊಂದ ಬೇಕು: ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ

ಪ್ರತಿಯೊಬ್ಬರೂ ಮಾನವ ಹಕ್ಕುಗಳ ಅರಿವು ಹೊಂದಬೇಕು: ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ
ಚಿಕ್ಕಬಳ್ಳಾಪುರ : ಪ್ರತಿಯೊಬ್ಬ ಮಾನವರಿಗೂ ಯಾವೆಲ್ಲ ಹಕ್ಕುಗಳಿವೆ ಎಂಬುದರ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ”ಯನ್ನು ಪ್ರತಿ ವರ್ಷ ಮಾಡಲಾಗುತ್ತಿದೆ. ಇಂತಹ ಕಾರ್ಯ ಕ್ರಮದ ಸದುಪಯೋಗವನ್ನು ಪ್ರತಿಯೊಬ್ಬರು ಪಡೆಯಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವಮಾನವ ಹಕ್ಕುಗಳ ದಿನಾ ಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಸಮಾಜದ ನಾಗರೀಕರು ತಮಗಿರುವ ಹಕ್ಕುಗಳು ಯಾವುವು ಎಂಬುದನ್ನು ಅರಿತರೆ ಅವುಗಳನ್ನು ಕಾಪಾಡಿಕೊಳ್ಳು ವುದು ಹೇಗೆ ಎಂಬುದು ಗೊತ್ತಾಗುತ್ತದೆ. ನಮ್ಮ ಹಕ್ಕುಗಳ ಕಾಪಾಡಿಕೊಳ್ಳುವ ಜೊತೆಗೆ ಸಂವಿಧಾನ ನೀಡಿರುವ ಕರ್ತವ್ಯವನ್ನು ಎಲ್ಲರು ಪಾಲಿಸಿದರೆ ಮಾನವ ಹಕ್ಕುಗಳ ಉಲ್ಲಂಘನೆಗಳು ನಿಯಂತ್ರಣ ಆಗಲಿವೆ ಎಂದು ಅಭಿಪ್ರಾಯಪಟ್ಟರು.
ವಿಶ್ವದಲ್ಲಿ ಮಾನವನಾಗಿ ಹುಟ್ಟಿದ ಮೇಲೆ  ಪ್ರತಿಯೊಬ್ಬರಿಗೂ ಸಹಜವಾದ ಮಾನವ ಹಕ್ಕುಗಳಿದ್ದು, ಸಮಾಜದಲ್ಲಿ ಕೆಲವು ವ್ಯಕ್ತಿಗಳ ಬುದ್ದಿವಂತಿಕೆ,ಆರ್ಥಿಕ ಮತ್ತು ಸಾಮಾಜಿಕ ಬಲ,ಪ್ರಭಾವ ಹಾಗೂ ದರ್ಪ, ದಬ್ಬಾಳಿಕೆಗಳಿಂದ ಅಸಹಾಯಕರು,ದುರ್ಬಲರು ಮಾನವ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ಈ ರೀತಿಯ ಪ್ರಕರಣಗಳು ಜಾಗೃತಿಯ ಕೊರತೆಯಿಂದ ಗ್ರಾಮೀಣ ಪ್ರದೇಶಗಳಲ್ಲೇ ಅಧಿಕವಾಗಿ ಕಂಡು ಬರುತ್ತಿವೆ.
ಸಮಾಜದಲ್ಲಿ ಪ್ರತಿಯೊಬ್ಬರೂ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ ಮತ್ತು ಕೇಳುತ್ತಾರೆಯೇ ಹೊರತು ಬಹುತೇಕರು ತಮ್ಮ ನಾಗರೀಕ ಕರ್ತವ್ಯಗಳನ್ನು ಮರೆಯುತ್ತಾರೆ.  ಭೂಮಿಯ ಮೇಲೆ ಜನಿಸಿದ ಮೇಲೆ ಪ್ರತಿಯೊಬ್ಬರಿಗೂ ಸಹಜ ವಾಗಿ ಸಮಾನ ಮಾನವ ಹಕ್ಕುಗಳಿವೆ. ಕೆಲವರು ಇನ್ನೊಬ್ನರ ಹಕ್ಕುಗಳನ್ನು ಬುದ್ದಿವಂತಿಕೆ ಮತ್ತು ಶಕ್ತಿ,ಪ್ರಭಾವ ಗಳಿಂದ ಕಸಿದು ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಾರೆ. ಯಾರ ಹಕ್ಕುಗಳನ್ನು ಯಾರೂ ಕಸಿಯುವಂತಿಲ್ಲ. ಪ್ರತಿ ವ್ಯಕ್ತಿಯೂ ಮಾನವನಾಗಿ ತನಗಿರುವ ಹಕ್ಕುಗಳನ್ನು ಅರಿತುಕೊಂಡಾಗ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಡಿಮೆಯಾಗುತ್ತವೆ. ಮಾನವ ಹಕ್ಕುಗಳ ಬಗ್ಗೆ ಗ್ರಾಮೀಣ ಪ್ರದೇಶಗಳೂ ಸೇರಿದಂತೆ ಎಲ್ಲೆಡೆ ವಿವಿಧ ಕಾರ್ಯಕ್ರಮ,ಶಿಬಿರ ಮತ್ತು ಕಾರ್ಯಾಗಾರಗಳ ಮುಖಾಂತರ ಹೆಚ್ಚಿನ ಅರಿವು ಮೂಡಿಸಬೇಕು. ಈ ಬಗ್ಗೆ ವಿವಿಧ ಇಲಾಖೆಗಳೊಂದಿಗೆ  ಸಂಘಸAಸ್ಥೆಗಳು ಮತ್ತು ಸಾರ್ವಜನಿಕರು ಸಕಾರಾತ್ಮಕವಾಗಿ ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗೂ ಬದುಕುವ ಹಕ್ಕಿನ ಜೊತೆಗೆ ಒಂದಿಷ್ಟು ಮೂಲಭೂತ ಹಕ್ಕುಗಳಿವೆ. ಪ್ರತಿಯೊಬ್ಬ ರಿಗೂ ಅರ್ಹವಾಗಿರುವ ಮೂಲಭೂತ ಸ್ವಾತಂತ್ರ‍್ಯಗಳು ಹಾಗೂ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ೨೦೨೪ರ ಮಾನವ ಹಕ್ಕುಗಳ ದಿನದ ಘೋಷವಾಕ್ಯವಾಗಿದೆ. ಅದರಂತೆ ಎಲ್ಲರೂ ಜಾಗೃತರಾಗಿ ಸಂಕಲ್ಪ ಮಾಡೋಣ, ಯಾವುದೇ ತಾರತಮ್ಯವಿಲ್ಲದೆ ಎಲ್ಲ ಮಾನವ ಜೀವಿಗಳ ಹಕ್ಕುಗಳನ್ನು ಗೌರವಿಸೋಣ, ನಮ್ಮ ವಿಚಾರಗಳಿಂದ, ಮಾತುಗಳಿಂದ ಹಾಗೂ ನಡವಳಿಕೆಗಳಿಂದ ಬೇರೆಯವರ ಹಕ್ಕುಗಳು ಉಲ್ಲಂಘನೆಯಾಗದAತೆ ನಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಮಾತನಾಡಿ ನಮ್ಮ ಬದುಕನ್ನು ಅರ್ಥಪೂರ್ಣವನ್ನಾಗಿಸಿ ತೃಪ್ತಿದಾಯಕ ವಾಗುವಂತೆ ಮಾಡುವಂತಹ ಮೂಲಭೂತ ಅರ್ಹತೆಗಳು ಹಾಗೂ ಸ್ವಾತಂತ್ರ‍್ಯಗಳನ್ನು ಮಾನವ ಹಕ್ಕುಗಳೆಂದು ಕರೆಯಲಾಗುತ್ತದೆ. ನಿರ್ಭೀತಿಯಿಂದಿರುವುದು. ಕಸಿದುಕೊಳ್ಳುವುದರಿಂದ ಮುಕ್ತಿ ಪಡೆಯುವುದು ಹಾಗೂ ನಮ್ಮ ಎಲ್ಲ ಸಾಮರ್ಥ್ಯಗಳ ಉಪಯೋಗ ಮಾಡಿಕೊಳ್ಳುವುದಕ್ಕೆ ಅವಕಾಶವನ್ನು ಪಡೆಯುವುದು ಮನುಷ್ಯನ ಮೂಲಭೂತ ಆಕಾಂಕ್ಷೆಯಾಗಿದೆ. ಆದ ಕಾರಣದಿಂದಲೇ ಮಾನವ ಹಕ್ಕುಗಳನ್ನು ಕೆಲವೊಮ್ಮೆ 'ಸಹಜವಾದ ಹಕ್ಕುಗಳು' ಎಂದು ಕರೆಯಲಾಗುತ್ತವೆ ಎಂದರು.
ಜೀವಿಸುವ ಹಕ್ಕಿನಲ್ಲಿ ಘನತೆಯಿಂದ ಜೀವಿಸುವ ಹಕ್ಕೂ ಸೇರಿದ್ದು, ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವ ಹಕ್ಕು, ಚಿತ್ರಹಿಂಸೆಯಿAದ ಬಿಡುಗಡೆ, ಬಲವಂತದಿoದ ಕೆಲಸ ಮಾಡಿಸುವುದರಿಂದ ಬಿಡುಗಡೆ, ತಪ್ಪಾಗಿ ಬಂಧಿಸುವುದರಿAದ ಸ್ವಾತಂತ್ರ‍್ಯ, ಮುಕ್ತವಾದ ವಿಚಾರಣೆಯ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಆಲೋಚಿಸುವ, ಮನಸ್ಸಾಕ್ಷಿಯ, ಧರ್ಮದ, ಏಕಾಂತತೆಯ ಹಕ್ಕುಗಳು, ಮುಕ್ತವಾಗಿ ಮಾತನಾಡುವ ಮತ್ತು ವ್ಯಕ್ತಪಡಿಸುವ ಹಕ್ಕು, ಇತರರೊಡನೆ ಸಹವರ್ತಿಯಾಗಿ, ಸರ್ಕಾರದೊಡನೆ, ಸಾರ್ವಜನಿಕ ಹಾಗೂ ಸಮುದಾಯದ ವಿಷಯಗಳಲ್ಲಿ ಭಾಗವಹಿಸುವ ಹಕ್ಕು, ಊಟ, ವಸತಿ, ಆರೋಗ್ಯ, ಶುದ್ಧವಾದ ಪರಿಸರ, ಶಿಕ್ಷಣ, ಕೆಲಸ ಮಾಡುವ, ಸಮಾನ ಕೆಲಸಕ್ಕೆ ಸಮಾನ ವೇತನ, ಮುಷ್ಕರ ಮತ್ತು ಒಬ್ಬನ ಸಂಸ್ಕೃತಿಯನ್ನು ಹಾಗೂ ಬದುಕುವ ರೀತಿಯನ್ನು ಕಾಪಾಡುವ ಹಕ್ಕುಗಳು ಸಹ ಮಾನವ ಹಕ್ಕುಗಳಲ್ಲಿ ಸೇರುತ್ತವೆ  ಎಂದು ಅಭಿಪ್ರಾಯಪಟ್ಟರು.
ಗುಡಿಬಂಡೆಯ ಉನ್ನತಿ ಮಾನವ ಹಕ್ಕುಗಳ ರಕ್ಷಣ ಸಂಘದ ಸಂಸ್ಥಾಪಕ ಅಧ್ಯಕ್ಷ ಜಿ.ವಿ. ವಿಶ್ವನಾಥ್ ಮಾತನಾಡಿ ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಿ ಮಾತನಾಡುತ್ತಾ, ಮಾನವ ಹಕ್ಕುಗಳ ಪರಧಿ ವ್ಯಾಪಕ ಸ್ವರೂಪದ್ದಾಗಿದೆ. ಶೋಷಣೆ ರಹಿತ ಆರೋಗ್ಯ ಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು ಪ್ರತಿಯೊಬ್ಬ ಪ್ರಜೆಗೂ ಇರುವಂತಹದ್ದು. ಇಂತಹ ಹಕ್ಕುಗಳನ್ನು ರಕ್ಷಿಸುವುದು ಆಡಳಿತ ಯಂತ್ರದ ಕರ್ತವ್ಯವಾಗಿರುತ್ತದೆ. ಯಾವುದೇ ಸಕ್ಷಮ ಕಚೇರಿಯಿಂದಾಗಲಿ ಅಥವಾ ಸಂಸ್ಥೆಯಿAದಾಗಲಿ ಮಾನವ ಹಕ್ಕುಗಳ ರಕ್ಷಣಾ ಕಾರ್ಯ ವಿಫಲವಾದ ಸಂದರ್ಭಗಳಲ್ಲಿ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಬಹುದು ಎಂದರು.
“ಮಾನವ ಹಕ್ಕುಗಳ ರಕ್ಷಣೆ” ಎಂಬ ಮೊಬೈಲ್ ಆಪ್‌ನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ ಲೋಡ್ ಮಾಡಿ ಕೊಂಡು ಆನ್ ಲೈನ್ ಮೂಲಕ ದೂರು ನೀಡಬಹುದು. ಅಲ್ಲದೇ ವೆಬ್‌ಸೈಟ್‌ನಲ್ಲೂ ಆಯೋಗ ನಿಗದಿಪಡಿಸಿದ ಸರಳ ನಮೂನೆಯಲ್ಲಿ ವಿವರಗಳನ್ನು ಸ್ಪಷ್ಟವಾಗಿ ನಮೂದಿಸಿ ದೂರು ಸಲ್ಲಿಸಬಹುದು. ಜೊತೆಗೆ ೧೮೦೦- ೪೨೫೨-೩೩೩೩ ಸಹಾಯವಾಣಿಗೆ ಕರೆ ಮಾಡಿ ಯಾವುದೇ ಖರ್ಚಿಲ್ಲದೆ ಆಯೋಗಕ್ಕೆ ದೂರು ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮಾನ್ಯ ನ್ಯಾಯಾಧೀಶರು ಮಾನವ ಹಕ್ಕುಗಳ ಜಾಗೃತಿ ಕುರಿತು ರಾಜ್ಯ ಮಾನವ ಹಕ್ಕುಗಳ ಆಯೋಗ ಹೊರತಂದಿರುವ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿದರು. ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ಮಾನವ ಹಕ್ಕುಗಳ ದಿನಾಚರಣೆಯ ಮಹತ್ವವನ್ನು ಸಾರುವ ಪ್ರತಿಜ್ಞಾವಿಧಿಯನ್ನು ಸಭಿಕರಿಗೆ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಉಪ ವಿಭಾಗಧಿಕಾರಿ ಡಿ.ಹೆಚ್.ಅಶ್ವಿನ್,   ಜಿಲ್ಲಾ ವಾರ್ತಾಧಿಕಾರಿ ಎಂ.ಜುAಜಣ್ಣ, ರಾಷ್ಟಿçÃಯ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿಗಳ ಸಂಘ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಟಿ.ಆರ್. ಕೃಷ್ಣಪ್ಪ, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.