ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಬೆಂಗಳೂರಿಗೆ ವರ್ಗಾವಣೆಯಾಗಿರುವ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು, ಚಿಂತಾಮಣಿ ಉಪವಿಭಾಗದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾರ್ವಜನಿಕರು, ಮಾಧ್ಯಮದವರು ಹಾಗೂ ಪೊಲೀಸ್ ಇಲಾಖೆಯ ಸಹೋದ್ಯೋಗಿಗಳು ನೀಡಿದ ಪ್ರೀತಿ, ವಿಶ್ವಾಸ ಮತ್ತು ಸಹಕಾರವನ್ನು ಜೀವನಪೂರ್ತಿ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ವರ್ಗಾವಣೆಯ ಹಿನ್ನೆಲೆಯಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಎಪಿಎಂಸಿ ವ್ಯಾಪಾರಸ್ಥ ಎಂ.ವಿ.ಎಸ್.ಶಂಕರ್ ಹಾಗೂ ಸ್ನೇಹಿತರು ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಇದನ್ನೂ ಓದಿ: Chinthamani News: ಮಡಿವಾಳ ಸಮುದಾಯವನ್ನು ಎಸ್‌ಸಿಗೆ ಸೇರಿಸಲು ಒತ್ತಾಯ: ಸೆ.9ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ
ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳಿಗೆ ಬೀಳ್ಕೊಡುಗೆ ನೀಡುವುದು ಸಹಜ. ಆದರೆ ಚಿಂತಾಮಣಿ ಯ ಸಾರ್ವಜನಿಕರು ಹಾಗೂ ಸ್ನೇಹಿತರು ಸ್ವಯಂಪ್ರೇರಿತರಾಗಿ ತಮ್ಮನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿರುವುದು ಅತ್ಯಂತ ಸಂತಸ ತಂದಿದೆ. ತಮ್ಮ ಕರ್ತವ್ಯದ ಅವಧಿಯಲ್ಲಿ ಜನರಿಂದ ದೊರೆತ ಸಹಕಾರ ಹಾಗೂ ಪ್ರೀತಿ ಸದಾ ಸ್ಮರಣೀಯವಾಗಿರಲಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಎಂ.ವಿ.ಎಸ್. ಶಂಕರ್, ನೇಹಾ ಎಸ್., ಅನ್ವರ್, ವೆಂಕಟರೌಣಪ್ಪ, ಮುನಿರಾಜು, ಸತ್ಯನಾರಾಯಣ, ಯಾಮಣ್ಣ, ನಾಗರಾಜ್, ನಂದೀಶ್, ವೆಂಕಟೇಶ್, ಕುಮಾರ್, ಸಂಘರ್ಷ, ಆದಿನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.