ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಯಾದವ ಸಮುದಾಯವನ್ನು ಸಂಘಟಿಸಿ ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯುವೆ: ಕೆ.ಎಂ. ಮುನೇಗೌಡ

ಸಮುದಾಯದ ಪ್ರಗತಿಗೆ ಒಗ್ಗಟ್ಟು ಮತ್ತು ಸಂಘಟಿತ ಪ್ರಯತ್ನಗಳು ಅತ್ಯಗತ್ಯ ಎಂದರು. ಸರ್ಕಾರದಿಂದ ದೊರೆಯುವ ವಿವಿಧ ಇಲಾಖೆಗಳ ಸೌಲಭ್ಯಗಳು ಹಾಗೂ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ಸಮರ್ಪಕ ಅರಿವಿಲ್ಲದಿರುವುದು ಕಂಡುಬಂದಿದೆ. ಈ ಕೊರತೆಯನ್ನು ನಿವಾರಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಸಂಘದ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು

ಯಾದವ ಸಮುದಾಯ ಸಂಘಟಿಸಿ ಅಭಿವೃದ್ಧಿಯ ಅಧ್ಯಾಯ ಬರೆಯುವೆ

-

Profile
Ashok Nayak Oct 23, 2026 2:51 PM

ಚಿಕ್ಕಬಳ್ಳಾಪುರ: ಯಾದವ ಸಮುದಾಯವನ್ನು ಸಂಘಟಿಸಿ, ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲಗೊಳಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವುದೇ ತಮ್ಮ ಪ್ರಮುಖ ಗುರಿಯಾಗಿದೆ ಎಂದು ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷ ಕೆ.ಎಂ.ಮುನೇಗೌಡ ತಿಳಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮುದಾಯದ ಪ್ರಗತಿಗೆ ಒಗ್ಗಟ್ಟು ಮತ್ತು ಸಂಘಟಿತ ಪ್ರಯತ್ನಗಳು ಅತ್ಯಗತ್ಯ ಎಂದರು. ಸರ್ಕಾರದಿಂದ ದೊರೆಯುವ ವಿವಿಧ ಇಲಾಖೆಗಳ ಸೌಲಭ್ಯಗಳು ಹಾಗೂ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ಸಮರ್ಪಕ ಅರಿವಿಲ್ಲದಿರುವುದು ಕಂಡುಬಂದಿದೆ. ಈ ಕೊರತೆಯನ್ನು ನಿವಾರಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಸಂಘದ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಇದನ್ನೂ ಓದಿ: Chikkaballapur News: ತಹಶೀಲ್ದಾರ್ ರಶ್ಮಿ ಅವರಿಂದ ಪೂಜೆ, ಬಿಲ್ಲಿಗೆ ಹೆದೆಯೇರಿಸಿ ಬಾಣ ಪ್ರಯೋಗ; ಬನ್ನಿ ಎಲೆಗಳಿಗಾಗಿ ಭಕ್ತರ ನೂಕುನುಗ್ಗಲು

ಚಿಕ್ಕಬಳ್ಳಾಪುರ ಜಿಲ್ಲೆಯ ಎಂಟು ತಾಲ್ಲೂಕುಗಳ ಗ್ರಾಮೀಣ ಹಾಗೂ ಕುಗ್ರಾಮ ಪ್ರದೇಶಗಳಲ್ಲಿ ವಾಸಿಸುವ ಯಾದವ ಸಮುದಾಯದ ಬಾಂಧವರನ್ನು ಗುರುತಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಕಾನೂನುಬದ್ಧವಾಗಿ ದೊರೆಯಬೇಕಾದ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಶ್ರಮಿಸಲಾಗುವುದು.

ಸಮುದಾಯದ ಅಭಿವೃದ್ಧಿ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಂದು ಕುಟುಂಬದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ತರುವಂತೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಯುವಜನರ ಶೈಕ್ಷಣಿಕ ಪ್ರಗತಿ: ಉದ್ಯೋಗಾವಕಾಶಗಳು ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕೆ ವಿಶೇಷ ಆದ್ಯತೆ ನೀಡಲಾಗುವುದು. ಯುವಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಅಗತ್ಯ ಮಾರ್ಗದರ್ಶನ ನೀಡುವ ಮೂಲಕ ಅವರ ಪ್ರತಿಭೆ ಮತ್ತು ಸಾಮರ್ಥ್ಯಕ್ಕೆ ಸೂಕ್ತ ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗುವುದು. ಸಮುದಾಯದ ಹಕ್ಕುಗಳ ಕುರಿತು ಅರಿವು ಮೂಡಿಸಿ, ಎಲ್ಲರನ್ನೂ ಒಗ್ಗೂಡಿಸಿ ಅಭಿವೃದ್ಧಿಯತ್ತ ಮುನ್ನಡೆಸುವುದು ಸಂಘದ ಉದ್ದೇಶವಾಗಿದೆ ಎಂದು ಮುನೇಗೌಡ ತಿಳಿಸಿದರು.

ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಸಂಘಟನೆಯೇ ಬಲವಾಗಿದ್ದು, ಶಿಕ್ಷಣ ಮತ್ತು ಸ್ವಾವಲಂಬನೆಯ ಮೂಲಕ ಯಾದವ ಸಮುದಾಯವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.