ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA K.H.Puttaswamy Gowda: ನನ್ನ ಅವಧಿಯಲ್ಲಿಯೇ ಅಂಗನವಾಡಿಗಳಗೆ ಸ್ವಂತ ಕಟ್ಟಡ ಒದಗಿಸುವೆ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ತಾಲೂಕಿನ ನಗರಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾ ಟಿಸಿ ಮಾತನಾಡುತ್ತಾ, ಅಂಗನವಾಡಿ ಕೇಂದ್ರ ಮಕ್ಕಳ ಬೆಳವಣಿಗೆ, ಲಾಲನೆ ಪಾಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ,ಅಂಗನವಾಡಿ ಸಹಾಯಕಿಯರು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು, ಮನೆಯಲ್ಲಿ ತಾಯಿ ಬಿಟ್ಟರೆ ಮಕ್ಕಳು ಹೆಚ್ಚು ಸಮಯವನ್ನು ಅಂಗನವಾಡಿ ಕೇಂದ್ರ ಗಳಲ್ಲಿ ಕಳೆಯು ತ್ತಾರೆ.

ನನ್ನ ಅವಧಿಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಕಲ್ಪಿಸಲು ಶ್ರಮಿಸುತ್ತೇನೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಹೇಳಿದರು.

ಗೌರಿಬಿದನೂರು: ನನ್ನ ಅವಧಿಯಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಕಲ್ಪಿಸಲು ಶ್ರಮಿಸುತ್ತೇನೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ (MLA K.H. Puttaswamy Gowda)ಹೇಳಿದರು.

ತಾಲೂಕಿನ ನಗರಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಾ, ಅಂಗನವಾಡಿ ಕೇಂದ್ರ ಮಕ್ಕಳ ಬೆಳವಣಿಗೆ, ಲಾಲನೆ ಪಾಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ,ಅಂಗನವಾಡಿ ಸಹಾಯಕಿಯರು ಮಕ್ಕಳನ್ನು ಚೆನ್ನಾಗಿ ನೋಡಿ ಕೊಳ್ಳಬೇಕು, ಮನೆಯಲ್ಲಿ ತಾಯಿ ಬಿಟ್ಟರೆ ಮಕ್ಕಳು ಹೆಚ್ಚು ಸಮಯವನ್ನು ಅಂಗನವಾಡಿ ಕೇಂದ್ರ ಗಳಲ್ಲಿ ಕಳೆಯುತ್ತಾರೆ.

ಇದನ್ನೂ ಓದಿ: MLA K.H. Puttaswamy Gowda: ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡರಿಂದ ಮಲ್ಲೇನಹಳ್ಳಿ ಗ್ರಾಮಸ್ಥರಿಗೆ ಅಭಯ

ಮಕ್ಕಳಿಗೆ ಪೌಷ್ಟಿಕ ಆಹಾರದ ಜತೆಗೆ ಉತ್ತಮ ಪರಿಸರ ಮತ್ತು ಶಿಕ್ಷಣ ಪ್ರಾಥಮಿಕ ಶಿಕ್ಷಣ ಕೊಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು ಎಂದ ಅವರು ಅಗತ್ಯವಿರುವ ಕಡೆ ಅಂಗನವಾಡಿ ಕೇಂದ್ರವನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿದಲ್ಲಿ ಮಂಜೂರು ಮಾಡಿಸುವ ಕೆಲಸ ಮಾಡುತ್ತೇನೆ ಎಂದರು.

ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿ ಮಾತನಾಡಿ, ಅಂಗನವಾಡಿ ಕೇಂದ್ರಗಳು ಮಕ್ಕಳಿಗೆ ಶಿಕ್ಷಣದ ಪ್ರಾಥಮಿಕ ಮೆಟ್ಟಿಲು. ಆದ್ದರಿಂದ ಅವುಗಳನ್ನು ಸುಸ್ಥಿತಿಯಲ್ಲಿ ಹೋಗಬೇಕು. ಮಕ್ಕಳನ್ನು ಶಿಕ್ಷಣದ ಕಡೆಗೆ ಆಕರ್ಷಿಸುವ ವಾತಾವರಣ ಉಳಿಸಿಕೊಳ್ಳಬೇಕು ಎಂದರು.

ಮುಖಂಡರಾದ ನಾಗೇಂದ್ರ,ಆರ್.ಆರ್.ರೆಡ್ಡಿ, ಪವನ್ ರೆಡ್ಡಿ, ಶ್ರೀನಿವಾಸಗೌಡ, ಗಂಗಾಧರಪ್ಪ, ಮುನಿಯಪ್ಪ, ನಾಗಾರ್ಜುನ ಸೇರಿದಂತೆ ಅಂಗನವಾಡಿ ಕೇಂದ್ರದ ಸಹಾಯಕಿಯರು, ಗ್ರಾಮದ ಮಹಿಳೆಯರು ಭಾಗವಹಿಸಿದ್ದರು.