ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಜಾವೆಲಿನ್ ಥ್ರೋನಲ್ಲಿ ರಾಜ್ಯಮಟ್ಟಕ್ಕೆ ಆದರ್ಶ ಆಯ್ಕೆ; ಹಲವು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಅರ್ಹತೆ

ತಾಲೂಕಿನ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಕ್ರೀಡಾ ಸ್ಪರ್ಧೆ ಗಳಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಕೆಜಿಬಿವಿ ಶಾಲೆ ಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ, ವಿಜ್ಞಾನ ನಾಟಕ, ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸೃಜನಾತ್ಮಕ ಬರವಣಿಗೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಗಳಿಸಿದ್ದಾರೆ.

ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಮಾಚಹಳ್ಳಿ ಶಾಲೆ ವಿದ್ಯಾರ್ಥಿಗಳ ಸಾಧನೆ

-

Profile
Ashok Nayak Nov 11, 2026 10:52 AM

ಗುಡಿಬಂಡೆ: ತಾಲೂಕಿನ ಮಾಚಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಕೆಜಿಬಿವಿ ಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ, ವಿಜ್ಞಾನ ನಾಟಕ, ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸೃಜನಾತ್ಮಕ ಬರವಣಿಗೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಗಳಿಸಿದ್ದಾರೆ.

ಪ್ರಾಚ್ಯ ಪ್ರಜ್ಞೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಅಭಿಷೇಕ್ ಎನ್.ಬಿ. ಮತ್ತು ಪುನೀತ್ ಎನ್. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ಬೇಬಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬೇಬಿ ಮತ್ತು ನಂದಿನಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಅರ್ಹತೆ ಗಳಿಸಿದ್ದಾರೆ. ವಿಜ್ಞಾನ ನಾಟಕದಲ್ಲಿ 9ನೇ ತರಗತಿಯ ಚೇತನ್ ಕುಮಾರ್ ತಂಡ ತೃತೀಯ ಸ್ಥಾನ ಪಡೆದಿದೆ. ಸೃಜನಾತ್ಮಕ ಬರವಣಿಗೆಯ ಕವನ ರಚನೆಯಲ್ಲಿ ತನುಶ್ರೀ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ತನುಷ್ ಕುಮಾರ್ ತೃತೀಯ ಸ್ಥಾನ ಗಳಿಸಿದ್ದಾರೆ.

ಇದನ್ನೂ ಓದಿ: Gudibande News: 30 ವರ್ಷ ದಾಟಿದರೂ ಮದುವೆಯಾಗದೆ ಉಳಿಯುತ್ತಿರುವ ಯುವಕರು, ಪ್ರಜಾಸೇವಾ ಆಂದೋಲನದಲ್ಲಿ ರೈತ ಮುಖಂಡರ ಅಳಲು

ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿಯೂ ಶಾಲೆಯ 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 10ನೇ ತರಗತಿಯ ಆದರ್ಶ ಎನ್. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದೆ.

ವಿಜೇತ ವಿದ್ಯಾರ್ಥಿಗಳು ಹಾಗೂ ಮಾರ್ಗದರ್ಶನ ನೀಡಿದ ಶಿಕ್ಷಕರನ್ನು ಶಾಲೆ ಮತ್ತು ಎಸ್‌ಡಿಎಂಸಿ ವತಿಯಿಂದ ಅಭಿನಂದಿಸಲಾಯಿತು. ಮುಖ್ಯ ಶಿಕ್ಷಕ ಮಂಜುನಾಯಕ್ ಮಾತನಾಡಿ, ವಿದ್ಯಾರ್ಥಿಗಳ ಸಾಧನೆ ಶಾಲೆ ಹಾಗೂ ತಾಲೂಕಿಗೆ ಹೆಮ್ಮೆ ತಂದಿದ್ದು, ಎಲ್ಲರೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಜಯಮ್ಮ ಎ., ರಾಧಾ, ಚಂದ್ರಶೇಖರ್ ಎಲ್.ವಿ., ಸೋಮಶೇಖರ್ ವೈ.ಎಲ್., ರಾಜಾರೆಡ್ಡಿ, ದ್ವಿತೀಯ ದರ್ಜೆ ಸಹಾಯಕ ಶಾಮ್ ಸುಂದರ್ ಜಿ.ಎಸ್. ಹಾಗೂ ಅಡುಗೆ ಸಿಬ್ಬಂದಿ ಸಂಜೀವಮ್ಮ, ಪುಷ್ಪಮ್ಮ ಉಪಸ್ಥಿತರಿದ್ದರು.