ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Adichunchanagiri Sri: ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ : ಮಂಗಳನಾಥಸ್ವಾಮೀಜಿ ಅಭಿಮತ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಶಿಸ್ತು, ಶ್ರದ್ಧೆ ಹಾಗೂ ಉತ್ತಮ ಸಂಸ್ಕಾರಗಳನ್ನು ರೂಢಿಸಿ ಕೊಳ್ಳಬೇಕು. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕಲ್ಲ, ಉತ್ತಮ ವ್ಯಕ್ತಿಗಳಾಗಿ ಸಮಾಜಕ್ಕೆ ಕೊಡುಗೆ ನೀಡುವುದಕ್ಕೂ ಸಹಕಾರಿಯಾಗಬೇಕು ಎಂದ ಅವರು ಶಿಕ್ಷಣದ ಮೂಲಕ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹಾರೈಸಿದರು.

ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ ರೂಪಿಸುವ ಮಹತ್ವದ ಹಂತವಾಗಿದೆ. ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥಸ್ವಾಮೀಜಿ ಅಭಿಪ್ರಾಯಪಟ್ಟರು.

ಚಿಕ್ಕಬಳ್ಳಾಪುರ: ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ ರೂಪಿಸುವ ಮಹತ್ವದ ಹಂತವಾಗಿದೆ. ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಎಸ್‌ಜೆಸಿಐಟಿ ಕ್ಯಾಂಪಸ್‌ನ ಬಿಜಿಎಸ್ ಆಡಿಟೋರಿಯಂನಲ್ಲಿ ಸೋಮವಾರ ನಡೆದ ಪಾಲಿ ಟೆಕ್ನಿಕ್ ಡಿಪ್ಲೊಮಾ ಪದವಿ ಪ್ರದಾನ-2026 ಹಾಗೂ ಪ್ರಥಮ ಸೆಮಿಸ್ಟರ್ ತರಗತಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Chinthamani News: ಎಸ್‌ಸಿ/ಎಸ್‌ಟಿ ನೌಕರರ ಮೇಲಿನ ದೌರ್ಜನ್ಯ ಮುಂದುವರಿದರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ: ಎಸ್‌ ಪ್ರದೀಪ್‌ ಎಚ್ಚರಿಕೆ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಶಿಸ್ತು, ಶ್ರದ್ಧೆ ಹಾಗೂ ಉತ್ತಮ ಸಂಸ್ಕಾರಗಳನ್ನು ರೂಢಿಸಿ ಕೊಳ್ಳಬೇಕು. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕಲ್ಲ, ಉತ್ತಮ ವ್ಯಕ್ತಿಗಳಾಗಿ ಸಮಾಜಕ್ಕೆ ಕೊಡುಗೆ ನೀಡುವುದಕ್ಕೂ ಸಹಕಾರಿಯಾಗಬೇಕು ಎಂದ ಅವರು ಶಿಕ್ಷಣದ ಮೂಲಕ ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಹಾರೈಸಿದರು.

ಮುಖ್ಯ ಅತಿಥಿ ಕೆ.ಅಮುಲ್ ಚಂದರ್ ಮಾತನಾಡಿ, ಡಿಪ್ಲೊಮಾ ಶಿಕ್ಷಣದ ಮಹತ್ವವನ್ನು ವಿವರಿಸಿ ದರು. ಗುರಿ ಸಾಧನೆಗೆ ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸ ಅಗತ್ಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನದ ದಿಕ್ಕನ್ನು ತಾವೇ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

cbpm4r

ಜಂಟಿ ನಿರ್ದೇಶಕ ಸಂಜೀವ್ ಕುಮಾರ್ ಚವಾಣ್ ಮಾತನಾಡಿ, ವಿದ್ಯಾರ್ಥಿಗಳು ಮೊದಲ ವರ್ಷದ ಇಂಡಕ್ಷನ್ ಕಾರ್ಯಕ್ರಮದಿಂದ ಆರಂಭಿಸಿ ಅಂತಿಮ ವರ್ಷದವರೆಗೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು. ತಾಂತ್ರಿಕ ಶಿಕ್ಷಣವು ಉದ್ಯೋಗಾವಕಾಶಗಳ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತದೆ ಎಂದರು.

ಮುಖ್ಯ ಆಡಳಿತಾಧಿಕಾರಿ ಡಾ. ಎನ್. ಶಿವರಾಮರೆಡ್ಡಿ ಮಾತನಾಡಿ, ಮೂರು ವರ್ಷದ ಡಿಪ್ಲೊಮಾ ಶಿಕ್ಷಣದ ಪ್ರಯೋಜನಗಳನ್ನು ವಿವರಿಸಿದರು. ಆದಿಚುಂಚನಗಿರಿ ಸಂಸ್ಥೆ ಹಾಗೂ ಜಗದ್ಗುರುಗಳ ಮಾರ್ಗದರ್ಶನದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ ದೊರೆಯುತ್ತಿದೆ ಎಂದು ತಿಳಿಸಿದರು.

cbpm4e

ಎಸ್‌ಜೆಸಿಐಟಿ ಪ್ರಾಂಶುಪಾಲ ಡಾ. ಜಿ.ಟಿ. ರಾಜು ಮಾತನಾಡಿ, ಡಿಪ್ಲೊಮಾ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣ ಅವಕಾಶಗಳು ಲಭ್ಯವಿವೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಿ ತಮ್ಮ ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಪಾಲಿಟೆಕ್ನಿಕ್ ಪ್ರಾಂಶುಪಾಲ ಮಂಜುನಾಥ್ ವೈ.ಆರ್. ಸ್ವಾಗತ ಭಾಷಣ ಮಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಉತ್ತಮ ಮೌಲ್ಯ ಗಳನ್ನು ಅಳವಡಿಸಿಕೊಂಡು ಸಮಾಜಮುಖಿ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಇದೇ ವೇಳೆ, ಸ್ವಾಮೀಜಿ ಅವರು ಡಿಪ್ಲೊಮಾ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರಲ್ಲದೆ ನೂತನ ವಿದ್ಯಾರ್ಥಿಗಳಿಗಾಗಿ ಪ್ರಥಮ ಸೆಮಿಸ್ಟರ್ ತರಗತಿಗಳಿಗೆ ಅಧಿಕೃತ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್ ಲೀನ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಸಲಹೆಗಾರ ಕೆ. ಅಮುಲ್ ಚಂದರ್ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು (ಪರೀಕ್ಷೆ) ಮತ್ತು ಕಾರ್ಯದರ್ಶಿ ಸಂಜೀವ್ ಕುಮಾರ್ ಚವಾಣ್ ಭಾಗವಹಿಸಿದ್ದರು. ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಮುಖ್ಯ ಆಡಳಿತಾಧಿಕಾರಿ ಡಾ. ಎನ್. ಶಿವರಾಮರೆಡ್ಡಿ ಹಾಗೂ ಎಸ್‌ಜೆಸಿಐಟಿ ಪ್ರಾಂಶುಪಾಲ ಡಾ. ಜಿ.ಟಿ. ರಾಜು ಸೇರಿದಂತೆ ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.