ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Praja Seve: ಪದವೀಧರ ಕ್ಷೇತ್ರ ಚುನಾವಣೆ ಎಫೆಕ್ಟ್: ಪ್ರಜಾ ಸೇವೆಗೆ ತಾತ್ಕಾಲಿಕ ವಿರಾಮ

ವಿಶೇಷವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲುಗಳು, ಸರ್ವೆ ಇಲಾಖೆ, ಪೋಡಿ, ಪಹಣಿ ತಿದ್ದುಪಡಿ, ಜಮೀನು ಸರ್ವೆ, ರಸ್ತೆ ಒತ್ತುವರಿ ಸೇರಿದಂತೆ ಕಂದಾಯ ಮತ್ತು ಭೂ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಸ್ತಾಪಿಸಿದ್ದರು. ಇದರ ಜೊತೆಗೆ ಕುಡಿಯುವ ನೀರು, ರಸ್ತೆ, ವಿದ್ಯುತ್, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆಯೂ ಅಹವಾಲುಗಳನ್ನು ಸಲ್ಲಿಸಲಾಗಿತ್ತು.

ಶಿಡ್ಲಘಟ್ಟ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ(South East Graduate Constituency Election) ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ(Model Code of Conduct for Elections) ಜಾರಿಯಾಗಿರುವುದರಿಂದ, ಪ್ರತಿ ಶನಿವಾರ ತಾಲ್ಲೂಕಿನ ವಿವಿಧ ಹೋಬಳಿಗಳಲ್ಲಿ ನಡೆಯುತ್ತಿದ್ದ ‘ಪ್ರಜಾ ಸೇವೆ’(Praja Seve) ಕಾರ್ಯಕ್ರಮಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿದೆ.

gaganasindhu

ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಮೂಲಕ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರತಿ ಶನಿವಾರ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿತ್ತು. ಈಗಾಗಲೇ ಸಾದಲಿ, ಬಶೆಟ್ಟಹಳ್ಳಿ, ವೈ.ಹುಣಸೇನಹಳ್ಳಿ ಹಾಗೂ ಜಂಗಮ ಕೋಟೆ ಹೋಬಳಿಗಳಲ್ಲಿ ನಾಲ್ಕು ಹಂತಗಳಲ್ಲಿ ಕಾರ್ಯಕ್ರಮ ನಡೆದಿದ್ದು, ವಿವಿಧ ಇಲಾಖೆಗಳ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗಿತ್ತು.

ಇದನ್ನೂ ಓದಿ: Praja Seva: ಕರ್ತವ್ಯದಲ್ಲಿ ಎಚ್ಚರ ವಹಿಸಿ, ಇಲ್ಲವಾದರೆ ಕ್ರಮ: ಡಿಸಿ ಜಿ. ಪ್ರಭು

ವಿಶೇಷವಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲುಗಳು, ಸರ್ವೆ ಇಲಾಖೆ, ಪೋಡಿ, ಪಹಣಿ ತಿದ್ದುಪಡಿ, ಜಮೀನು ಸರ್ವೆ, ರಸ್ತೆ ಒತ್ತುವರಿ ಸೇರಿದಂತೆ ಕಂದಾಯ ಮತ್ತು ಭೂ ದಾಖಲೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಸ್ತಾಪಿಸಿದ್ದರು. ಇದರ ಜೊತೆಗೆ ಕುಡಿಯುವ ನೀರು, ರಸ್ತೆ, ವಿದ್ಯುತ್, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆಯೂ ಅಹವಾಲುಗಳನ್ನು ಸಲ್ಲಿಸಲಾಗಿತ್ತು.

ತಾಲ್ಲೂಕಿನ ಇನ್ನೂ ಹಲವು ಗ್ರಾಮಗಳು ಹಾಗೂ ಶಿಡ್ಲಘಟ್ಟ ನಗರದಲ್ಲಿ ಪ್ರಜಾ ಸೇವೆ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವ ಉದ್ದೇಶವಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಂತದ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

image

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರತಿ ಶನಿವಾರ ನಡೆಯುತ್ತಿದ್ದ ‘ಪ್ರಜಾ ಸೇವೆ’ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಕ್ಟೋಬರ್ ತಿಂಗಳು ಮುಗಿದ ಬಳಿಕ ಪರಿಸ್ಥಿತಿಯನ್ನು ಗಮನಿಸಿ ಕಾರ್ಯಕ್ರಮವನ್ನು ಪುನರಾರಂಭಿಸಲಾಗುವುದು. ಪುನರಾ ರಂಭದ ದಿನಾಂಕವನ್ನು ಮುಂಚಿತವಾಗಿ ತಿಳಿಸಲಾಗುವುದು ಎಂದರು.

— ಗಗನ ಸಿಂಧು, ತಹಶೀಲ್ದಾರ್