ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

S N Subbareddy: ಶಿಕ್ಷಣದ ಜತೆಗೆ ಶಿಸ್ತನ್ನು ಕಲಿಸಿಕೊಡಿ: ಶಾಸಕ ಸುಬ್ಬಾರೆಡ್ಡಿ

ಮಕ್ಕಳು ತಮ್ಮ ಸುತ್ತಮುತ್ತಲಿನವರ ನಡವಳಿಕೆಯನ್ನು ಗಮನಿಸಿ ಅನುಸರಿಸುವುದರಿಂದ ಶಿಕ್ಷಕರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಹಿಂದುಳಿದ ಹಾಗೂ ಬರಪೀಡಿತ ಗುಡಿಬಂಡೆ ತಾಲೂಕಿ ನಲ್ಲಿ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಬಡ ಕುಟುಂಬಗಳ ಅನೇಕ ಮಕ್ಕಳು ಸರ್ಕಾರಿ ಶಾಲೆಗಳನ್ನು ಅವಲಂಬಿಸಿದ್ದು, ಶಿಕ್ಷಕರು ಅವರನ್ನು ತಮ್ಮ ಮಕ್ಕಳಂತೆ ಭಾವಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು

ಗುಡಿಬಂಡೆ: ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಸ್ಕಾರ ಹಾಗೂ ಉತ್ತಮ ನಡವಳಿಕೆ ಬೆಳೆಸಲು ಶಿಕ್ಷಕರು ಆದ್ಯತೆ ನೀಡಬೇಕು. ತಮ್ಮ ನಡವಳಿಕೆ ಮತ್ತು ಕರ್ತವ್ಯದ ಮೂಲಕ ಶಿಕ್ಷಕರು ಮಕ್ಕಳಿಗೆ ಮಾದರಿಯಾಗಬೇಕು ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ(MLA S N Subbareddy) ಹೇಳಿದರು.

ಪಟ್ಟಣದ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ತಮ್ಮ ಸುತ್ತಮುತ್ತಲಿನವರ ನಡವಳಿಕೆಯನ್ನು ಗಮನಿಸಿ ಅನುಸರಿಸುವುದರಿಂದ ಶಿಕ್ಷಕರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಹಿಂದುಳಿದ ಹಾಗೂ ಬರಪೀಡಿತ ಗುಡಿಬಂಡೆ ತಾಲೂಕಿ ನಲ್ಲಿ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಬಡ ಕುಟುಂಬಗಳ ಅನೇಕ ಮಕ್ಕಳು ಸರ್ಕಾರಿ ಶಾಲೆಗಳನ್ನು ಅವಲಂಬಿಸಿದ್ದು, ಶಿಕ್ಷಕರು ಅವರನ್ನು ತಮ್ಮ ಮಕ್ಕಳಂತೆ ಭಾವಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.

ಇದನ್ನೂ ಓದಿ: Chinthamani News: ಅಂಬೇಡ್ಕರ್ ಪ್ರತಿಮೆಗೆ ಪೂಜೆಗಿಂತ ಆಶಯಗಳ ಅಳವಡಿಕೆಯೇ ನಿಜವಾದ ಗೌರವ: ಇಒ ಆನಂದ್

ಉತ್ತಮ ಅಂಕ ಗಳಿಸುವಂತೆ ಮಾಡುವುದಷ್ಟೇ ಶಿಕ್ಷಕರ ಜವಾಬ್ದಾರಿಯಲ್ಲ. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಸ್ಕಾರ ಮತ್ತು ಉತ್ತಮ ನಡವಳಿಕೆ ಬೆಳೆಸುವುದೂ ಅವರ ಹೊಣೆಗಾರಿಕೆಯಾಗಿದೆ. ಶಿಸ್ತಿನ ಕೊರತೆ ಯಿದ್ದರೆ ಉತ್ತಮ ಅಂಕಗಳಿಸಿದರೂ ಶಿಕ್ಷಣದ ಉದ್ದೇಶ ಸಂಪೂರ್ಣವಾಗುವುದಿಲ್ಲ ಎಂದು ಹೇಳಿದರು.

ತಾಲೂಕಿನ ಯಾವುದೇ ಶಾಲೆ ಶೇ.100ರಷ್ಟು ಫಲಿತಾಂಶ ದಾಖಲಿಸಿದರೆ ತಲಾ ಒಂದು ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದು, ಅರ್ಹ ಶಾಲೆಗಳನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಪ್ರೋತ್ಸಾಹಧನ ವಿತರಿಸಲಾಗುವುದು ಎಂದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್. ಸಂಪಂಗಿ ಮಾತನಾಡಿದರು. ನಿವೃತ್ತ ಶಿಕ್ಷಕರು ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ತಹಸೀಲ್ದಾರ್ ಸಿಗ್ಬತ್ತುಲ್ಲಾ, ತಾಪಂ ಇಒ ನಾಗಮಣಿ, ಪಪಂ ಅಧ್ಯಕ್ಷ ವಿಕಾಸ್, ಬಿಇಒ ಕಾಳೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.