ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿದ್ಯಾರ್ಥಿನಿಗೆ ಅಸಮರ್ಪಕ ಸ್ಪರ್ಶ ಆರೋಪ: ಪ್ರಭಾರ ಪ್ರಾಂಶುಪಾಲ ಅಮಾನತು

ಈ ಕುರಿತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿ ಮತ್ತು ಶಿಕ್ಷಕರಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಹಾಗೂ ಪ್ರಭಾರ ಪ್ರಾಂಶುಪಾಲ ಈಶ್ವರ್ ರೆಡ್ಡಿ ಬಿ. ಅವರನ್ನು ವಿದ್ಯಾರ್ಥಿನಿಯೊಂದಿಗೆ ಅಸಮರ್ಪಕವಾಗಿ ಸ್ಪರ್ಶಿಸಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಸೆ.28ರಂದು POCSO ಕಾಯ್ದೆಯಡಿ ಪ್ರಕರಣ ಸಂಖ್ಯೆ 139/2026 ದಾಖಲಾದ ಹಿನ್ನೆಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Chikkaballapur News: ಕಾಂಗ್ರೆಸ್‌ನಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು: ಮಂಜುನಾಥ್

2026ರ ಸೆ.26ರಂದು ಮಧ್ಯಾಹ್ನ ಸುಮಾರು 2.30ರ ವೇಳೆಗೆ ಶಾಲೆಯ ಮೊದಲ ಮಹಡಿಯ ಪ್ರಥಮ ಚಿಕಿತ್ಸೆ ಕೊಠಡಿಯಲ್ಲಿ ಪ್ರಭಾರ ಪ್ರಾಂಶುಪಾಲರು ಅಸಮರ್ಪಕವಾಗಿ ಸ್ಪರ್ಶಿಸಿದ್ದಾರೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿ ಮತ್ತು ಶಿಕ್ಷಕರಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದ ಕುರಿತು ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳುವಂತೆ ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಸರ್ಕಾರಿ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ-1957ರ ನಿಯಮ 10(1)(ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ನಿಯಮ ಗಳು-2025ರ ಅನ್ವಯ ಈಶ್ವರ್ ರೆಡ್ಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡಬಾರದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.