ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA K.H. Puttaswamygowda: ನೂತನ ಅಂಗನವಾಡಿ ಕಟ್ಟಡದ ಲೋಕಾರ್ಪಣೆ

ಮಕ್ಕಳ ಸಮಗ್ರ ಬೆಳವಣಿಗೆ ಜೊತೆಗೆ ವ್ಯಕ್ತಿತ್ವ ವಿಕಸನ, ಪೌಷ್ಟಿಕ ಆಹಾರ, ಪ್ರಾಥಮಿಕ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷಿತ ಆರೈಕೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರ ಗಳು ಇಂದಿನ ದಿನಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ, ಗರ್ಭಿಣಿ ಮತ್ತು ಬಾಣಂತಿಯರ ಬಗ್ಗೆ ವಿಶೇಷ ಕಾಳಜಿ ವಹಿಸಿ ನಿರಂತರವಾಗಿ ಅವರುಗಳ ಆರೋಗ್ಯದ ಮೇಲೆ ನಿಗಾ ವಹಿಸಲಿವೆ ಇದರಿಂದ ಪಾಲಕರಿಗೆ ಸಹಾಯವಾಗುವ ಜೊತೆಗೆ ಸಮುದಾಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ

ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೇರಿಸುವುದರಿಂದ 'ಅವರ ಸಮಗ್ರ ಬೆಳವಣಿಗೆಯನ್ನು ಕಾಣಬಹುದು ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡರು ಹೇಳಿದರು.

ಗೌರಿಬಿದನೂರು : ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೇರಿಸುವುದರಿಂದ 'ಅವರ ಸಮಗ್ರ ಬೆಳವಣಿಗೆಯನ್ನು ಕಾಣಬಹುದು ಎಂದು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ( MLA K.H. Puttaswamygowda) ರು ಹೇಳಿದರು. ತಾಲೂಕಿನ ಇಡಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಸಮಗ್ರ ಬೆಳವಣಿಗೆ ಜೊತೆಗೆ ವ್ಯಕ್ತಿತ್ವ ವಿಕಸನ, ಪೌಷ್ಟಿಕ ಆಹಾರ, ಪ್ರಾಥಮಿಕ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷಿತ ಆರೈಕೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರ ಗಳು ಇಂದಿನ ದಿನಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ, ಗರ್ಭಿಣಿ ಮತ್ತು ಬಾಣಂತಿಯರ ಬಗ್ಗೆ ವಿಶೇಷ ಕಾಳಜಿ ವಹಿಸಿ ನಿರಂತರವಾಗಿ ಅವರುಗಳ ಆರೋಗ್ಯದ ಮೇಲೆ ನಿಗಾ ವಹಿಸಲಿವೆ. ಇದರಿಂದ ಪಾಲಕರಿಗೆ ಸಹಾಯವಾಗುವ ಜೊತೆಗೆ ಸಮುದಾಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿವೆ.

ಇದನ್ನೂ ಓದಿ: Gauribidabur News: ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಯೋಜನೆಯನ್ನು ಪರಿಣಾಮಕಾರಿ ಯಾಗಿ ಜಾರಿಗೆ ತಂದಿದೆ, ಅಂಗನವಾಡಿ ಕೇಂದ್ರದ ಸಹಾಯಕರು ಕಾರ್ಯಕರ್ತೆಯರು ತಮ್ಮ ಜವಾಬ್ದಾರಿ ಮತ್ತು ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಮೂಲಕ ಯೋಜನೆಯ ಘನತೆಯನ್ನು ಕಾಪಾಡಬೇಕು ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿ ಮಾತನಾಡಿ, ಅಂಗನವಾಡಿ ಕೇಂದ್ರಗಳು ಪ್ರಾಥ ಮಿಕ ಶಿಕ್ಷಣದ ಮೆಟ್ಟಿಲುಗಳಿದ್ದಂತೆ, ಮಕ್ಕಳಿಗೆ ಚಿಕ್ಕಂದಿನಿಂದಲೇ ಶಿಕ್ಷಣದ ಬಗ್ಗೆ ಆಸಕ್ತಿ ಬೆಳೆಸಿ ಬೌದ್ಧಿಕ ಬೆಳವಣಿಗೆಗೆ ಕಾರಣವಾಗಲಿವೆ.

ಆದ್ದರಿಂದ ಪಾಲಕರು ತಪ್ಪದೆ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೇರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಭಾರತಿ, ಸಹಾಯಕಿ ಪಾರಿಜಾತಮ್ಮ, ಮುಖಂಡ ಬೀಮನಹಳ್ಳಿ ಮಂಜುನಾಥ್, ಬಸವರಾಜು, ನಂಜುಂಡಪ್ಪ, ಶ್ರೀಧರ್, ನಾಗರಾಜು,ಆನಂದಪ್ಪ, ವಿಶ್ವನಾಥ್, ನರಸಿಂಹಯ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.