Dr B R Ambedkar: ಅಂಬೇಡ್ಕರ್ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ದೇಶದ ಎಲ್ಲ ಜನರಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ಬಂಧುತ್ವದ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ಹಾಗೂ ಸಂವಿಧಾನ ಶಿಲ್ಪಿಯಾಗಿದ್ದಾರೆ. ಅವರನ್ನು ಜಾತಿಯ ಎಲ್ಲೆಗಳನ್ನು ಮೀರಿ ಪ್ರತಿಯೊಬ್ಬರೂ ಗೌರವಿಸಬೇಕು.
-
ಗುಡಿಬಂಡೆ: ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಸೂತ್ರಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ಸಾಧನೆ ಮಾಡಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ಡಾ.ಕೆ.ಎಂ. ನಯಾಜ್ ಅಹ್ಮದ್ ಸಲಹೆ ನೀಡಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಕ್ಕಬಳ್ಳಾಪುರ, ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದಲ್ಲಿ ಆಯೋಜಿಸಿದ್ದ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಓದು’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ: Gudibande News: ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಆಂದೋಲನ: ತಹಶೀಲ್ದಾರ್ ಸಿಗ್ಬತ್ ಉಲ್ಲಾ
ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ದೇಶದ ಎಲ್ಲ ಜನರಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ಬಂಧುತ್ವದ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ಹಾಗೂ ಸಂವಿಧಾನ ಶಿಲ್ಪಿಯಾಗಿದ್ದಾರೆ. ಅವರನ್ನು ಜಾತಿಯ ಎಲ್ಲೆಗಳನ್ನು ಮೀರಿ ಪ್ರತಿಯೊಬ್ಬರೂ ಗೌರವಿಸಬೇಕು. ಅವರ ಶಿಕ್ಷಣ, ಸಂಘಟನೆ ಮತ್ತು ಹೋರಾಟ ದ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಅವುಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ.ಅಫ್ಜಲ್ ಬಿಜಲಿ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಾಧನೆಗಳ ಕುರಿತು ಮಾತನಾಡಿದರು. ಗೌತಮ ಬುದ್ಧ ಕಲಾತಂಡದ ಪ್ರಸನ್ನ ಮತ್ತು ಚಂದ್ರಶೇಖರ್ ಗೀತ ಗಾಯನದ ಮೂಲಕ ಅಂಬೇಡ್ಕರ್ ಚಿಂತನೆ ಹಾಗೂ ಮೂಢನಂಬಿಕೆ ವಿರೋಧಿ ಸಂದೇಶಗಳನ್ನು ಪರಿಚಯಿಸಿದರು. ಸಂವಿಧಾನ ಕುರಿತ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶ್ರೀನಾಥ್ ಎಸ್.ಎಲ್., ಶ್ರೀನಿವಾಸ್, ಅಶ್ವತ್ಥಪ್ಪ, ಕೀರ್ತನ, ನಂದಿನಿ, ಅಸ್ಮಾಬಾನು, ಗಂಗರಾಜು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಮಂಜುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.