ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ASHA workers: ನ.17ರಿಂದ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15 ಸಾವಿರ ಗೌರವಧನ ನೀಡಬೇಕು. ಮೊಬೈಲ್ ಆಧಾರಿತ ಕೆಲಸಗಳಿಗಾಗಿ ಅನಗತ್ಯ ಒತ್ತಡ ಹೇರುವುದನ್ನು ನಿಲ್ಲಿಸಬೇಕು. ಕೇಂದ್ರದ ನಿರ್ದೇಶನದಂತೆ ರಾಜ್ಯದಲ್ಲಿ ಬಾಕಿ ಇರುವ ಎನ್‌ಐಒಎಸ್ ತರಬೇತಿಯನ್ನು ಪೂರ್ಣಗೊಳಿಸಿದ ಆಶಾ ಕಾರ್ಯಕರ್ತೆ ಯರು ಹಾಗೂ ಆಶಾ ಸುಗಮಕಾರರಿಗೆ ಪ್ರತಿ ತರಬೇತಿಗೆ 5 ಸಾವಿರ ವಿಶೇಷ ಪ್ರೋತ್ಸಾಹಧನ ನೀಡಬೇಕು ಎಂದು ಒತ್ತಾಯಿಸಿದರು.

ಚಿಕ್ಕಬಳ್ಳಾಪುರ : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಸುಮಾರು 20 ಸಾವಿರ ಆಶಾ ಕಾರ್ಯಕರ್ತೆ(Asha Worker)ಯರು ನ.17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ (Freedom Park)ನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಹೋರಾಟ ನಡೆಸಲು ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷ ಹನುಮೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15 ಸಾವಿರ ಗೌರವಧನ ನೀಡಬೇಕು. ಮೊಬೈಲ್ ಆಧಾರಿತ ಕೆಲಸಗಳಿಗಾಗಿ ಅನಗತ್ಯ ಒತ್ತಡ ಹೇರುವುದನ್ನು ನಿಲ್ಲಿಸಬೇಕು. ಕೇಂದ್ರದ ನಿರ್ದೇಶನದಂತೆ ರಾಜ್ಯದಲ್ಲಿ ಬಾಕಿ ಇರುವ ಎನ್‌ಐಒಎಸ್ ತರಬೇತಿಯನ್ನು ಪೂರ್ಣಗೊಳಿಸಿದ ಆಶಾ ಕಾರ್ಯಕರ್ತೆ ಯರು ಹಾಗೂ ಆಶಾ ಸುಗಮಕಾರರಿಗೆ ಪ್ರತಿ ತರಬೇತಿಗೆ 5 ಸಾವಿರ ವಿಶೇಷ ಪ್ರೋತ್ಸಾಹಧನ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ASHA workers: ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಗೌರವಧನ 1000 ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ನಿವೃತ್ತರಾಗುವ ಆಶಾ ಕಾರ್ಯಕರ್ತೆಯರಿಗೆ 5 ಲಕ್ಷ ಇಡಿಗಂಟು ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಎರಡು ವರ್ಷ ಕಳೆದರೂ ಈವರೆಗೆ ಹಣ ಬಿಡುಗಡೆ ಮಾಡಿಲ್ಲ. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಬರಬೇಕಿರುವ ಇಡಿಗಂಟಿನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬುದು ಸಂಘದ ಪ್ರಮುಖ ಬೇಡಿಕೆಯಾಗಿದೆ ಎಂದರು.

ಈ ಬೇಡಿಕೆಗಳ ಈಡೇರಿಕೆಗಾಗಿ ಹಲವು ಬಾರಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರಗಳು ಭರವಸೆ ನೀಡುವುದಕ್ಕೆ ಸೀಮಿತವಾಗಿದ್ದು, ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Asha karyakarta

ಸೇವೆಗೆ ತಕ್ಕ ಗೌರವಧನ ನೀಡಲಿ: ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅವರು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ವಿಶೇಷವಾಗಿ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೊರೊನಾ ವಾರಿಯರ್ಸ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಇಷ್ಟೆಲ್ಲಾ ಸೇವೆ ಸಲ್ಲಿಸುತ್ತಿದ್ದರೂ ಅವರ ಶ್ರಮಕ್ಕೆ ತಕ್ಕ ಗೌರವಧನ ಹಾಗೂ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಸರಸ್ವತಮ್ಮ, ಕಾರ್ಯದರ್ಶಿ ರೇಷ್ಮೆ, ಮಂಜುಳ, ಲಕ್ಷ್ಮಿ, ಪಾರ್ವತಮ್ಮ, ಗಾಯತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.