ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bagepally News: ಡಿಸೆಂಬರ್ 1 ರಿಂದ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ಧರಣಿ

ಎಫ್‌ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡ ಬೇಕಾದ ಕೇಂದ್ರ ಸರ್ಕಾರ ಎಫ್‌ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆ? ಎಂದು ದೂರಿದರು.

ಬಾಗೇಪಲ್ಲಿ: ರಾಜ್ಯ. ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಡಿಸೆಂಬರ್ 1 ರಿಂದ 10 ತಾರೀಖುನ ವರೆಗೆ 10 ದಿನಗಳ ಕಾಲ ಕೇಂದ್ರ ಸಚಿವರ ಮನೆ ಮುಂದೆ ಅನಿರ್ದಿಷ್ಟ ದರಣಿ ಮಾಡಲಾಗಿದೆ ಎಂದು ತಾಲ್ಲೂಕು ಅಂಗನವಾಡಿ ನೌಕರರ ಅದ್ಯಕ್ಷೆ ರತ್ನಮ್ಮ ಹೇಳಿದರು.

ಪಟ್ಟಣದ ಹೊರವಲಯದ ದೇವರಗುಡಿಪಲ್ಲಿ ಅರ್ಯ ವೈಶ್ಯ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಎಫ್‌ಆರ್‌ಎಸ್‌ ರದ್ದು ಮಾಡಿ ಐಸಿಡಿಎಸ್ ಯೋಜನೆ ಕಾಯಂ ಮಾಡಬೇಕು. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ‘ಸಿ’ ಮತ್ತು ‘ಡಿ’ ಗುಂಪಿನ ನೌಕರರೆಂದು ಪರಿಗಣಿಸಬೇಕು. 2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಿ, ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

‘ಮನವಿಗೆ ಸ್ಪಂದಿಸದಿದ್ದರೆ  ಡಿಸೆಂಬರ್‌ನಲ್ಲಿ ಕೇಂದ್ರ ಸಚಿವರ ಮನೆಯ ಮುಂದೆ ಅನಿರ್ದಿಷ್ಟ ಅವಧಿಯ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.

ಇದನ್ನೂ ಓದಿ: Bagepally News: ಆರ್‌ಎಸ್‌ಎಸ್ ಪಥಸಂಚಲನ: ನೂರಾರು ಮಂದಿ ಗಣವೇಷಧಾರಿಗಳು ಭಾಗಿ

ಎಫ್‌ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆ ಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‌ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆ? ಎಂದು ದೂರಿದರು.

ಕಾರ್ಯಕರ್ತರಿಗೆ 2018 ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷೆ ಲಕ್ಷ್ಮೀದೇವಮ್ಮ, ತಾಲ್ಲೂಕು ಕಾರ್ಯದರ್ಶಿ ಕೆ.ಗೀತಾ, ಖಜಾಂಚಿ ಶಿಲ್ಪ, ಗಂಗರತ್ನಮ್ಮ ವಿಮಲಾ, ರವಣಮ್ಮ, ಅಲವೇಲಮ್ಮ ಹಾಗೂ ಇತರೆ ಅಂಗನವಾಡಿ ನೌಕರರು ಹಾಜರಿದ್ದರು.