ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bagepally News: ಭಾರತ ಪ್ರಪಂಚದಾದ್ಯಂತ ರಾಷ್ಟ್ರೀಯ ಐಕ್ಯತೆ ಸಾರಿದ ದೇಶ: ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ

ರಾಷ್ಟ್ರೀಯ ಐಕ್ಯತಾ ದಿನಾಚರಣೆ ಅಂಗವಾಗಿ ಸ್ವಾತಂತ್ರ‍್ಯ ಹೋರಾಟಗಾರ, ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ೧೫೦ನೇ ಜನ್ಮ ದಿನದ ವಾರ್ಷಿಕೋತ್ಸವದ ನಿಮಿತ್ತ ಸಾರ್ವ ಜನಿಕರಲ್ಲಿ ನಾಗರಿಕರ ಸುರಕ್ಷತೆ ಮತ್ತು ಜವಾ ಬ್ದಾರಿಗಳ ಕುರಿತು ಅರಿವು ಮೂಡಿಸಲು  ಪೊಲೀಸ್ ಇಲಾಖೆ ವತಿಯಿಂದ ಪಟ್ಟಣದಲ್ಲಿ ಏಕತೆಗಾಗಿ ಓಟಕ್ಕೆ ನೆಡೆಯುತ್ತದೆ

ಭಾರತ ಪ್ರಪಂಚದಾದ್ಯAತ ರಾಷ್ಟ್ರೀಯ ಐಕ್ಯತೆ ಸಾರಿದ ದೇಶ

ಭಾರತವು ವೈವಿಧ್ಯತೆಯಲ್ಲಿ ಏಕತೆ ಸಾಧಿಸಿದ ದೇಶವಾಗಿದ್ದು ಪ್ರಪಂಚದಾದ್ಯAತ ರಾಷ್ಟ್ರೀಯ ಐಕ್ಯತೆ ಸಾರಿದೆ ಎಂದು ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ ತಿಳಿಸಿದರು. -

Ashok Nayak Ashok Nayak Nov 1, 2025 3:18 PM

ಬಾಗೇಪಲ್ಲಿ: ಭಾರತವು ವೈವಿಧ್ಯತೆಯಲ್ಲಿ ಏಕತೆ ಸಾಧಿಸಿದ ದೇಶವಾಗಿದ್ದು ಪ್ರಪಂಚದಾದ್ಯಂತ ರಾಷ್ಟ್ರೀಯ ಐಕ್ಯತೆ ಸಾರಿದೆ ಎಂದು ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ ತಿಳಿಸಿದರು.

ದೇಶದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜನ್ಮದಿನ ಪ್ರಯುಕ್ತ ಪಟ್ಟಣದ ತಾಲ್ಲೂಕು ಪೊಲೀಸ್ ಇಲಾಖೆ ವಿವಿಧ ಸಂಘಟನೆಗಳ ವತಿಯಿಂದ ಶುಕ್ರವಾರ ಬೆಳಿಗ್ಗೆ ಹಮ್ಮಿಕೊಳ್ಳಲಾದ ಏಕತಾ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಏಕತಾ ಓಟದಲ್ಲಿ ಪೋಲಿಸ್ ಸಿಬ್ಬಂದಿ, ನೂರಾರು ಶಾಲಾ, ಕಾಲೇಜು ವಿದ್ಯಾರ್ಥಿಗಳು, ಎನ್.ಸಿ.ಸಿ.ಕೆಡೆಟೆ ಗಳು, ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಉತ್ಸಾಹದಿಂದ ಹೆಜ್ಜೆ ಹಾಕಿದರು.

ಇದನ್ನೂ ಓದಿ: Chikkaballapur (Chinthamani) News: ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ

ಈ ವೇಳೆ ಮಾತನಾಡಿದ ಅವರು ರಾಷ್ಟ್ರೀಯ ಐಕ್ಯತಾ ದಿನಾಚರಣೆ ಅಂಗವಾಗಿ ಸ್ವಾತಂತ್ರ‍್ಯ ಹೋರಾಟಗಾರ, ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ೧೫೦ನೇ ಜನ್ಮ ದಿನದ ವಾರ್ಷಿಕೋತ್ಸವದ ನಿಮಿತ್ತ ಸಾರ್ವಜನಿಕರಲ್ಲಿ ನಾಗರಿಕರ ಸುರಕ್ಷತೆ ಮತ್ತು ಜವಾ ಬ್ದಾರಿಗಳ ಕುರಿತು ಅರಿವು ಮೂಡಿಸಲು  ಪೊಲೀಸ್ ಇಲಾಖೆ ವತಿಯಿಂದ ಪಟ್ಟಣದಲ್ಲಿ ಏಕತೆಗಾಗಿ ಓಟಕ್ಕೆ ನೆಡೆಯುತ್ತದೆ ಎಂದು ಹೇಳಿದರು.

ಅಖಂಡ ಭಾರತ ಒಗ್ಗೂಡುವಿಕೆಗೆ ಕಾರಣೀಭೂತರಾದ `ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸೇವೆ ಸದಾ ಸ್ಮರಣೀಯ. ಭಾರತದ ಸ್ವಾತಂತ್ರ‍್ಯದ ನಂತರ ಎಲ್ಲಾ ರಾಜ್ಯಗಳನ್ನು ವಿಲೀನಗೊಳಿಸಲು ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಒಟ್ಟುಗೂಡಿಸಲು ಸಾಕಷ್ಟು ಶ್ರಮಿಸಿದ್ದರು ಎಂದರು.

ಈ ಸಂದರ್ಭದಲ್ಲಿ ಪಟ್ಟಣದ ಪೋಲಿಸ್ ಠಾಣೆಯಿಂದ ನ್ಯಾಷನಲ್ ಕಾಲೇಜು ವರಿಗೆ ಏಕತಾ ಓಟ ನಡೆಯಿತು.ಇದರಲ್ಲಿ ಅನೇಕ ಶಾಲಾ ಕಾಲೇಜು ವಿಧ್ಯಾರ್ಥಿಗಳು, ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.