ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಬಾಗೇಪಲ್ಲಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಇಂದಿರಾ ಕ್ಯಾಂಟೀನ್‌ನಲ್ಲಿ ಬಡವರು, ಶ್ರಮಿಕರು ಹೀಗೆ ಎಲ್ಲರೂ ಕಡಿಮೆ ದರದಲ್ಲಿ ಉಪಹಾರ, ಊಟ ದೊರೆಯಲಿದೆ. ಯಾರೂ ಸಹ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ಇಂದಿರಾ ಕ್ಯಾಂಟೀನ್ ಮಹಾತ್ವಾಕಾಂಕ್ಷೆ ಕಾರ್ಯಕ್ರಮವನ್ನು ಜಾರಿಗೊಳಿಸಿದೆ

ಬಾಗೇಪಲ್ಲಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಹಸಿವು ಮುಕ್ತ ಕರ್ನಾಟಕದ ಗುರಿಯ 'ಇಂದಿರಾ ಕ್ಯಾಂಟೀನ್'ನ್ನು ಬಾಗೇಪಲ್ಲಿ ಪಟ್ಟಣದ ಡಿ.ವಿ.ಜಿ ಮುಖ್ಯ ರಸ್ತೆಯಲ್ಲಿ ಇಂದು ಶುಕ್ರವಾರ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹಾಗೂ ಗಣ್ಯರಿಂದ ಉದ್ಘಾಟಿಸಲಿದ್ದಾರೆ.

Profile Ashok Nayak May 16, 2025 1:00 PM

ಬಾಗೇಪಲ್ಲಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಹಸಿವು ಮುಕ್ತ ಕರ್ನಾಟಕದ ಗುರಿಯ ‘ಇಂದಿರಾ ಕ್ಯಾಂಟೀನ್’ನ್ನು ಬಾಗೇಪಲ್ಲಿ ಪಟ್ಟಣದ ಡಿ.ವಿ.ಜಿ ಮುಖ್ಯ ರಸ್ತೆಯಲ್ಲಿ ಇಂದು ಶುಕ್ರವಾರ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಹಾಗೂ ಗಣ್ಯರಿಂದ ಉದ್ಘಾಟಿಸ ಲಿದ್ದಾರೆ. ಪಟ್ಟಣದ ಲೋಕೋಪಯೋಗಿ ಇಲಾಖೆ ಕಛೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಶಾಸಕ ಹಾಗೂ ಗಣ್ಯರಿಂದ ಉದ್ಘಾಟನೆಯಾಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿ ಇಂದಿರಾ ಕ್ಯಾಂಟೀನ್‌ನಲ್ಲಿ ಬಡವರು, ಶ್ರಮಿಕರು ಹೀಗೆ ಎಲ್ಲರೂ ಕಡಿಮೆ ದರದಲ್ಲಿ ಉಪಹಾರ, ಊಟ ದೊರೆಯಲಿದೆ. ಯಾರೂ ಸಹ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ಇಂದಿರಾ ಕ್ಯಾಂಟೀನ್ ಮಹಾತ್ವಾಕಾಂಕ್ಷೆ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur News: ಭಗೀರಥರ ಪ್ರಯತ್ನದ ಮಾದರಿಯನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಿ : ಅಪರ ಜಿಲ್ಲಾಧಿಕಾರಿ ಡಾ.ಎನ್ ಭಾಸ್ಕರ್

ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸುವ ಮೂಲಕ ಎಲ್ಲಾ ಜನರ ಹಸಿವು ನೀಗಿಸಲು ಪ್ರಯತ್ನಿಸಿದೆ. ಹಾಗೆಯೇ  ಪಟ್ಟಣ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವ ಮೂಲಕ ಇಲ್ಲಿನ ಜನರಿಗೆ ಅನುಕೂಲವಾಗಲಿದೆ ಎಂದು ನುಡಿದರು.

ಇದು ಅತ್ಯಂತ ಮಹತ್ವಾಕಾಂಕ್ಷೆಯ ಮತ್ತು ಜನಪರವಾದ ಯೋಜನೆಯಾಗಿದ್ದು, ಇಂದಿನ ದುಬಾರಿ ಬೆಲೆಯ ದಿನಗಳಲ್ಲಿ ಶ್ರಮಿಕ ವರ್ಗ ಹಾಗೂ ಬಡವರಿಗೆ ಹೆಚ್ಚು ಸಹಕಾರಿಯಾಗಿದೆ ಎಂದು ಪುರಸಭೆ ಅದ್ಯಕ್ಷ ಎ.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.