ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Five Guarantee Scheme: ಜನವರಿಯಿಂದ ಫಲಾನುಭವಿಗಳಿಗೆ ‘ಇಂದಿರಾ ಕಿಟ್’ ವಿತರಣೆ: ಯಲುವಳ್ಳಿ ಎನ್. ರಮೇಶ್

ಯುವನಿಧಿ ಯೋಜನೆಯಡಿ ಅರ್ಹ ಪದವೀಧರರಿಗೆ ಸೌಲಭ್ಯ ತಲುಪಿಸುವಲ್ಲಿ ಜಿಲ್ಲೆ ಮುಂಚೂಣಿ ಯಲ್ಲಿದೆ. ಯೋಜನೆಯ ಕುರಿತು ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಾಗಾರಗಳನ್ನು ಆಯೋಜಿಸಿ, ವಿದ್ಯಾರ್ಥಿಗಳಿಗೆ ಯೋಜನೆಯ ಉದ್ದೇಶ, ಅರ್ಹತೆ ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ಯುವನಿಧಿ ಅನುಷ್ಠಾನ: ಚಿಕ್ಕಬಳ್ಳಾಪುರ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ

-

Profile
Ashok Nayak Nov 6, 2026 11:50 PM

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ(Five Guarantee Scheme)ಗಳ ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಉತ್ತಮ ಸಾಧನೆ ಮಾಡಿದ್ದು, ಯುವನಿಧಿ ಯೋಜನೆಯ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಕಾಯ್ದು ಕೊಂಡಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲಿಗೆ ಬೇಳೆ, ಅಡುಗೆ ಎಣ್ಣೆ, ಉಪ್ಪು ಸೇರಿದಂತೆ ಅಗತ್ಯ ದಿನಸಿ ಪದಾರ್ಥಗಳನ್ನು ಒಳಗೊಂಡ ‘ಇಂದಿರಾ ಕಿಟ್’ ವಿತರಣೆಯನ್ನು ಮುಂದಿನ ಜನವರಿಯಿಂದ ಆರಂಭಿಸಲು ಸರ್ಕಾರ ಉದ್ದೇಶಿಸಿದೆ.

ಇದನ್ನೂ ಓದಿ: Chinthamani News: ಧರ್ಮ, ಜಾತಿ ಭೇದ ಮರೆತು ಎಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಳ್ಳುವುದು ಮಾದರಿ: ವೇಣುಗೋಪಾಲ್

ಯುವನಿಧಿ ಯೋಜನೆಯಡಿ ಅರ್ಹ ಪದವೀಧರರಿಗೆ ಸೌಲಭ್ಯ ತಲುಪಿಸುವಲ್ಲಿ ಜಿಲ್ಲೆ ಮುಂಚೂಣಿ ಯಲ್ಲಿದೆ. ಯೋಜನೆಯ ಕುರಿತು ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಾಗಾರ ಗಳನ್ನು ಆಯೋಜಿಸಿ, ವಿದ್ಯಾರ್ಥಿಗಳಿಗೆ ಯೋಜನೆಯ ಉದ್ದೇಶ, ಅರ್ಹತೆ ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. 

2023ನೇ ಸಾಲಿನಿಂದ ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸುವ ಮೂಲಕ ಸೌಲಭ್ಯ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ವಿತರಿಸಲಾಗುತ್ತಿರುವ ಅಕ್ಕಿಯ ಬದಲಿಗೆ ಅಕ್ಕಿಯೊಂದಿಗೆ ಬೇಳೆ, ಅಡುಗೆ ಎಣ್ಣೆ, ಉಪ್ಪು ಸೇರಿದಂತೆ ವಿವಿಧ ಅಗತ್ಯ ದಿನಸಿ ಪದಾರ್ಥಗಳನ್ನು ಸೇರಿಸಿ ಒಟ್ಟು 10 ಕೆ.ಜಿ. ತೂಕದ ಕಿಟ್ ವಿತರಿಸಲು ಸರ್ಕಾರ ಯೋಜಿಸಿದೆ. ಇದಕ್ಕೆ ‘ಇಂದಿರಾ ಕಿಟ್’ ಎಂದು ಹೆಸರಿಡಲಾಗಿದ್ದು, ಜನವರಿಯಿಂದ ವಿತರಣೆ ಆರಂಭಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಶೇ.97, ಯುವನಿಧಿ ಯೋಜನೆಯಡಿ ಶೇ.92 ಹಾಗೂ ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಗಳಡಿ ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಗೃಹಜ್ಯೋತಿ ಯೋಜನೆಯಡಿ ತಾಲೂಕಿನಲ್ಲಿ 3,47,310 ಗ್ರಾಹಕರು ನೋಂದಾಯಿಸಿಕೊಂಡಿದ್ದು, ಈ ಪೈಕಿ 3,27,756 ಗ್ರಾಹಕರು ಸೌಲಭ್ಯ ಪಡೆಯುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ಆರ್ಥಿಕ ಹೊರೆ ಕಡಿಮೆಯಾಗುತ್ತಿದೆ. 

ಅನಿವಾರ್ಯ ಕಾರಣಗಳಿಂದ ಈವರೆಗೆ ಸೌಲಭ್ಯ ಪಡೆಯದ ಅರ್ಹರನ್ನು ಗುರುತಿಸಿ ಯೋಜನೆಗಳ ವ್ಯಾಪ್ತಿಗೆ ತರಲು ವಿಶೇಷ ಪ್ರಯತ್ನ ನಡೆಸಲಾಗುತ್ತಿದೆ. ಯಾವುದೇ ಅರ್ಹ ಫಲಾನುಭವಿ ಸೌಲಭ್ಯ ದಿಂದ ವಂಚಿತರಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥಗೌಡ, ಪ್ರಾಧಿಕಾರದ ಸದಸ್ಯರಾದ ಗುಂಡ್ಲಮಂಡಿಕಲ್ ಶ್ರೀರಾಮರೆಡ್ಡಿ, ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.