ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲ್ಲೂಕಿನಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುವ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಕನಿಶೆಟ್ಟಿಹಳ್ಳಿ ಗ್ರಾಮದಲ್ಲಿ ಪರಿಸರ ಸಾರ್ವಜನಿಕ ಆಲಿಕೆ ಸಭೆ ನಡೆಸಿ ರೈತರು ಹಾಗೂ ಸಾರ್ವಜನಿಕರ ಅಭಿಪ್ರಾಯ, ಮನವಿ ಮತ್ತು ಅಹವಾಲುಗಳನ್ನು ಆಲಿಸಿದರು.
ಇದನ್ನೂ ಓದಿ: Chikkaballapur News: ಸಾದಲಿ ಪಶು ಆಹಾರ ಘಟಕದ ವಿರುದ್ಧ ಕೋಲಾರ, ಚಿಕ್ಕಬಳ್ಳಾಪುರ ರೈತರಿಂದ ಅ.17ರಂದು ಬೃಹತ್ ಪ್ರತಿಭಟನೆ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆದ ಸಭೆಯಲ್ಲಿ ಬಡಗವಾರ ಹಳ್ಳಿ, ಮೈಕಳಸೊನ್ನೆನಹಳ್ಳಿ, ಕೊಂಗತಿಮ್ಮನಹಳ್ಳಿ, ಕಾಗತಿ ಹಾಗೂ ಕನಿಶೆಟ್ಟಿಹಳ್ಳಿ ಗ್ರಾಮಗಳ ವ್ಯಾಪ್ತಿಯ ರೈತರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
ಕೆಐಎಡಿಬಿ ಜಂಟಿ ನಿರ್ದೇಶಕ ಶಿವಲಿಂಗಯ್ಯ, ಜಿಲ್ಲಾ ಪರಿಸರ ಅಧಿಕಾರಿ ಮೀನಾಕ್ಷಮ್ಮ, ತಹಶೀಲ್ದಾರ್ ಸುದರ್ಶನ್ ಯಾದವ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು