ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chikkaballapur News: ಸರ್ಕಾರದ ಯೋಜನೆಗಳನ್ನು ಮತದಾರರಿಗೆ ತಿಳಿಸಿ: ಪದವೀಧರ ಮತದಾರರಿಗೆ ಸರ್ಕಾರದ ಜನಪರ ಯೋಜನೆಗಳ ಅರಿವು ಮೂಡಿಸಲು ಕರೆ

ಕಾಂಗ್ರೆಸ್ ಪಕ್ಷ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ನಗರ ಪ್ರದೇಶದ ಪ್ರತಿಯೊಂದು ವಾರ್ಡ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪ್ರಚಾರ ನಡೆಸಬೇಕು. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮತದಾರರಿಗೆ ಮನವರಿಕೆ ಮಾಡಿ ಕೊಟ್ಟು ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಚುನಾವಣೆಯನ್ನು ಹಗುರವಾಗಿ ಪರಿಗಣಿಸದೆ ಗಂಭೀರವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಶಶಿ ಹುಲಿಕುಂಟೆಮಠ್ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಿ: ಯಲುವಳ್ಳಿ ರಮೇಶ್

-

Profile
Ashok Nayak Oct 17, 2026 10:08 PM

ಚಿಕ್ಕಬಳ್ಳಾಪುರ: ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್(Shashi Hulikuntemath) ಅವರ ಗೆಲುವಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ರಾಜ್ಯ ಸರ್ಕಾರದ ಜನಪರ ಯೋಜನೆಗಳ ಕುರಿತು ಪದವೀಧರ ಮತದಾರರಿಗೆ ಅರಿವು ಮೂಡಿಸಿ ಮತಯಾಚನೆ ಮಾಡಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ಕರೆ ನೀಡಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡ ರು ಹಾಗೂ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪದವೀಧರ ಯುವಕರಿಗೆ ನೆರವಾಗುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಯುವನಿಧಿ ಯೋಜನೆ ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಪದವೀಧರ ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಕಾಂಗ್ರೆಸ್ ಪಕ್ಷ ಸೂಕ್ತ ಹಾಗೂ ಅರ್ಹ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ನಗರ ಪ್ರದೇಶದ ಪ್ರತಿ ಯೊಂದು ವಾರ್ಡ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮುಖಂಡರು ಮತ್ತು ಕಾರ್ಯ ಕರ್ತರು ಸಕ್ರಿಯವಾಗಿ ಪ್ರಚಾರ ನಡೆಸಬೇಕು. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಚುನಾವಣೆ ಯನ್ನು ಹಗುರವಾಗಿ ಪರಿಗಣಿಸದೆ ಗಂಭೀರವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Chikkaballapur News: ಎಸ್.ಎಸ್. ಸೂಪರ್ ಫುಡ್ಸ್ ಘಟಕದ ನಿರ್ವಹಣೆ ವಾಪಸ್ ಪಡೆಯಲು ಆಗ್ರಹ; ಒಂದು ತಿಂಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಕೆಎಂಎಫ್ ಎಂಡಿ ಭರವಸೆ

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಟ್ರೇನಹಳ್ಳಿ ಕೃಷ್ಣ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರು ವಿದ್ಯಾವಂತರು, ವಿಚಾರವಂತರು ಹಾಗೂ ಉತ್ತಮ ಶೈಕ್ಷಣಿಕ ಹಿನ್ನೆಲೆ ಹೊಂದಿದ್ದಾರೆ. ತುಮಕೂರಿನಲ್ಲಿ ಯುವ ಕಾಂಗ್ರೆಸ್ ಮೂಲಕ ಕಾರ್ಯನಿರ್ವಹಿಸಿದ ಅನುಭವವೂ ಅವರಿಗಿದೆ. ಆಯ್ಕೆಯಾದರೆ ವಿಧಾನ ಪರಿಷತ್ತಿನಲ್ಲಿ ಪದವೀಧರರ ಸಮಸ್ಯೆಗಳ ಕುರಿತು ಧ್ವನಿ ಎತ್ತಿ, ಯುವಕರಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಶ್ರಮಿಸಲಿದ್ದಾರೆ. ಆದ್ದರಿಂದ ಜಿಲ್ಲೆಯ ಪದವೀಧರರು ಅವರಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಡಾನ್ಸ್ ಶ್ರೀನಿವಾಸ್ ಮಾತನಾಡಿ, ಪಕ್ಷವು ಪ್ರತಿಭಾವಂತ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅವರ ಗೆಲುವಿಗೆ ಎಲ್ಲರೂ ಜವಾಬ್ದಾರಿಯುತವಾಗಿ ಶ್ರಮಿಸಬೇಕು. ಶಾಸಕ ಪ್ರದೀಪ್ ಈಶ್ವರ್(MLA Pradeep Eshwar) ಅವರು ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯದಲ್ಲಿ ತೊಡಗಿ ದ್ದಾರೆ. ಪದವೀಧರರ ನಿರುದ್ಯೋಗ ಸೇರಿದಂತೆ ವಿವಿಧ ಸಮಸ್ಯೆಗಳನ್ನು ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪಿಸಿ ಪರಿಹಾರಕ್ಕಾಗಿ ಹೋರಾಡಲು ಶಶಿ ಹುಲಿಕುಂಟೆಮಠ್ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಮಾಜಿ ಶಾಸಕಿ ಅನುಸೂಯಮ್ಮ(EX MLA Anusuyamma), ಮಂಡಿಕಲ್, ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ರೆಡ್ಡಿ ಮಾತನಾಡಿ, ಚುನಾವಣೆಯಲ್ಲಿ ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಪ್ರತಿ ಹಂತದಲ್ಲೂ ಪ್ರಚಾರ ನಡೆಸ ಬೇಕು. ಪದವೀಧರ ಮತದಾರರಿಗೆ ಮತದಾನ ಪ್ರಕ್ರಿಯೆ ಹಾಗೂ ಮತ ಚಲಾಯಿಸುವ ವಿಧಾನದ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ನಾಯನಹಳ್ಳಿ ನಾರಾಯಣಸ್ವಾಮಿ, ಸದಸ್ಯ ವಿ. ಶ್ರೀನಿವಾಸ್, ವಕೀಲ ಮುನೇಗೌಡ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ್, ಅಣ್ಣಮ್ಮ, ಮಂಚೇನಹಳ್ಳಿ ಮಸ್ತಾನ್, ಮೋಹನ್, ತಿಪ್ಪೇನಹಳ್ಳಿ ನಾರಾಯಣ, ಬಾಬಾ ಜಾನ್, ಮೋಲ್ಡ್ ವೆಂಕಟೇಶ್, ವೆಂಕಟರತ್ನಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.