ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಕೆಗೆ ಸೂಕ್ತವಾಗಿ ಮಾಹಿತಿ ಕಲೆ ಹಾಕಿ ನೀಡಬೇಕು: ಜಿಲ್ಲಾಧಿಕಾರಿ ಜಿ.ಪ್ರಭು
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಠಿ ಯೋಜನೆ-2031ರ ವರದಿಯನ್ನು ಈ ವರ್ಷದ ಜುಲೈ ಮಾಹೆಯ ಒಳಗೆ ಬಿಡುಗಡೆಗೊಳಿಸಬೇಕಿದೆ. ಈ ಪ್ರಕ್ರಿಯೆಯ ಭಾಗವಾಗಿ ಇಲಾಖೆ ವಾರು ಮಾಹಿತಿ ಕಲೆ ಹಾಕುವಿಕೆ, ದತ್ತಾಂಶ ಕ್ರೋಢೀಕರಣ, ಪ್ರಸ್ತುತ ಸ್ಥಿತಿಯ ವಿಶ್ಲೇಷಣೆ ಹಾಗೂ ಮುಂದಿನ ಗುರಿಗಳನ್ನು ಅಂತಿಮಗೊಳಿಸುವ ಕಾರ್ಯಗಳ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಿದೆ.
ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಕೆಗೆ ಸೂಕ್ತವಾಗಿ ಮಾಹಿತಿ ಕಲೆಹಾಕಿ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ ನೀಡಿದರು. -
ಚಿಕ್ಕಬಳ್ಳಾಪುರ: ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿರುವ “ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025ನ್ನು ಸಿದ್ದಪಡಿಸಲು ಸರ್ಕಾರ ನಿಗದಿ ಮಾಡಿರುವ ಸೂಚ್ಯಂಕಗಳ ಬಗ್ಗೆ ನೈಜ, ನಿಖರ ಮತ್ತು ಗುಣಮಟ್ಟದ ಮಾಹಿತಿಯನ್ನು ಹಾಗೂ ದತ್ತಾಂಶಗಳನ್ನು ಸಂಗ್ರಹಣೆ ಮಾಡಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಪ್ರಭು ಸಂಬಂಧಪಟ್ಟ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ನಗರ ಹೊರವಲಯ ಜಿಲ್ಲಾ ಪಂಚಾಯತ್ ನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಬುಧವಾರ ನಡೆದ “ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025” ಅನ್ನು ಸಿದ್ದಪಡಿಸುವ ಪೂರ್ವಭಾವಿ ಸಿದ್ದತಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ದರು.
ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಠಿ ಯೋಜನೆ-2031ರ ವರದಿಯನ್ನು ಈ ವರ್ಷದ ಜುಲೈ ಮಾಹೆಯ ಒಳಗೆ ಬಿಡುಗಡೆಗೊಳಿಸಬೇಕಿದೆ. ಈ ಪ್ರಕ್ರಿಯೆಯ ಭಾಗವಾಗಿ ಇಲಾಖೆ ವಾರು ಮಾಹಿತಿ ಕಲೆ ಹಾಕುವಿಕೆ, ದತ್ತಾಂಶ ಕ್ರೋಢೀಕರಣ, ಪ್ರಸ್ತುತ ಸ್ಥಿತಿಯ ವಿಶ್ಲೇಷಣೆ ಹಾಗೂ ಮುಂದಿನ ಗುರಿಗಳನ್ನು ಅಂತಿಮಗೊಳಿಸುವ ಕಾರ್ಯಗಳ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಿದೆ.
ಇದನ್ನೂ ಓದಿ: Raghavendra Chitravani: ರಾಘವೇಂದ್ರ ಚಿತ್ರವಾಣಿಗೆ 50ರ ಸಡಗರ; ಲೋಗೋ ಲಾಂಚ್
ಆ ನಿಟ್ಟಿನಲ್ಲಿ ಇಂದು ಆಯೋಜಿಸಿರುವ ತರಬೇತಿ ಕಾರ್ಯಾಗಾರವು ಸಹಕಾರಿಯಾಗಿದ್ದು, ಪ್ರತಿಯೊಬ್ಬರು ತರಬೇತಿಯಲ್ಲಿ ನೀಡುವ ಸಲಹೆ ಸೂಚನೆಗಳನ್ನು ಸರಿಯಾಗಿ ಗ್ರಹಿಸಿ ಮಾಹಿತಿ ಕಲೆ ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ವೈ.ನವೀನ್ ಭಟ್ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿಯು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಮಾಹಿತಿಯನ್ನು ಕೊಡುವ ವರದಿ,ಇದು ಅತ್ಯಂತ ಮೌಲ್ಯಯುತ ವರದಿಯಾಗಿದ್ದು, ಜಿಲ್ಲೆಯ ಬಗ್ಗೆ ಸಂಶೋಧನೆ ಮತ್ತು ಅಧ್ಯಯನ ಮಾಡಲು, ಸರ್ಕಾರಿ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಅರ್ಹರಿಗೆ ಸಮರ್ಪಕವಾಗಿ ತಲುಪಿಸಲು ಕಾರ್ಯತಂತ್ರ ರೂಪಿಸಲು ಸಹಕಾರಿ ಆಗಲಿದೆ ಎಂದರು.
ಜಿಲ್ಲೆಯಲ್ಲಿನ ಸಮಸ್ಯೆಗಳ ಮಾಹಿತಿಯನ್ನು ಸರ್ಕಾರ ನೀಡಿರುವ ನಿಗದಿತ ನಮೂನೆ ಹಾಗೂ ಮಾದರಿಯಲ್ಲಿ ನಿಗದಿತ ವೇಳೆಗೆ ನೀಡಬೇಕು. ಯಾವ ಯಾವ ಅಂಶಗಳಿಗೆ ಹಾಗೂ ಸೂಚ್ಯಂಕಗಳಿಗೆ ಯಾವ ಇಲಾಖೆಯಿಂದ ಮಾಹಿತಿಯನ್ನು ಕಲೆ ಹಾಕಿ ವರದಿ ನೀಡಬೇಕು ಎನ್ನುವುದನ್ನು ತರಬೇತಿಯಲ್ಲಿ ನೀಡಲಾಗುತ್ತದೆ. ಅದರಂತೆ ಎಲ್ಲ ಅಧಿಕಾರಿಗಳು ಕ್ರಮ ವಹಿಸಬೇಕು. ಈ ಸಂಬAಧ ಜಿಲ್ಲಾ ಮಟ್ಟದ ವಲಯವಾರು ಉಪಸಮಿತಿಗಳನ್ನು ಹಾಗೂ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸಿದ್ದು, ಆ ಸಮಿತಿಗಳ ಮುಖ್ಯಸ್ಥರ ನೇತೃತ್ವದಲ್ಲಿ ಕರಾರುವಕ್ಕಾಗಿ ಮಾಹಿತಿಯನ್ನು ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಮಾನವ ವರದಿಗೆ ಸಂಬಂಧಿಸಿದ ರಾಜ್ಯ ಮಟ್ಟದ ತಾಂತ್ರಿಕ ಸಂಪಾದಕೀಯ ಮತ್ತು ಗುಣಮಟ್ಟದ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಕೆಂಪಯ್ಯ, ಜಿಲ್ಲಾ ಪಂಚಾ ಯತ್ ಉಪ ಕಾರ್ಯದರ್ಶಿ ಅತಿಕ್ ಪಾಷ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.