ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶ್ರೀ ಶಶಿಧರ್ ಕೋಸಂಬೆ ಅವರಿಂದ ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆ

ಚಿಕ್ಕಬಳ್ಳಾಪುರ ತಾಲ್ಲೂಕಿನ ಗಿಡ್ನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಧ್ಯಾ ಹ್ನದ ಬಿಸಿ ಊಟ ತಯಾರಿಸಲು ಬಳಸುವಂತಹ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿ, ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ನಿಯಮಿತವಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಸುಚಿ ಮತ್ತು ರುಚಿಯಾಗಿ ನೀಡಲು ಮತ್ತು ಸುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಲು ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಿದರು

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಮಕ್ಕಳ   ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಕಳೆದ ಬುಧವಾರ (24.12.2025ರಂದು) ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಕಡೆ ಪ್ರವಾಸ ಕೈಗೊಂಡಿದ್ದು, ನಗರದ ಅರ್ವಿನ್ ಸ್ಕ್ಯಾನಿಂಗ್ ಸೆಂಟರ್ ಹಾಗೂ ಜೈನ್ ಮಿಷನ್ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸ್ಕ್ಯಾನಿಂಗ್ ತೆಗೆಯುವ ಸಂದರ್ಭದಲ್ಲಿ ಆಧಾರ್ ಕಾರ್ಡ್ಗಳನ್ನಷ್ಟೇ ಅಲ್ಲದೇ ಅವರ ಜನನ ಪ್ರಮಾಣ ಪತ್ರ, ಶಾಲಾ ದಾಖಲಾತಿ ಹಾಗೂ ಅಂಕಪಟ್ಟಿಗಳಲ್ಲಿನ ಜನ್ಮ ದಿನಾಂಕಗಳನ್ನು ಪರಿಶೀಲಿಸುವಂತೆ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ವೇಳೆ ಸೂಚಿಸಿದರು.

ಇದನ್ನೂ ಓದಿ: Chikkaballapur News: ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಾಲನೆ

ನಂತರ ಚಿಕ್ಕಬಳ್ಳಾಪುರ ತಾಲ್ಲೂಕಿನ ಗಿಡ್ನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಧ್ಯಾ ಹ್ನದ ಬಿಸಿ ಊಟ ತಯಾರಿಸಲು ಬಳಸುವಂತಹ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿ, ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ನಿಯಮಿತವಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಸುಚಿ ಮತ್ತು ರುಚಿಯಾಗಿ ನೀಡಲು ಮತ್ತು ಸುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಲು ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಿದರು.

25cbpm12h

ಈ ವೇಳೆ ಆಯೋಗದ ಅಧ್ಯಕ್ಷರು ಶಾಲೆಯ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿ ಊಟವನ್ನು ಸೇವಿಸಿ ದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ರಮೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್ ಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಶ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಮುನಿನಾರಾಯಣ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುಖನ್ಯ ಹಾಗೂ  ಇತರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.