Chikkaballapur News: ಆಯುಷ್ ಆಸ್ಪತ್ರೆ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ
ಚಿಕ್ಕಬಳ್ಳಾಪುರ ತಾಲ್ಲೂಕಿನ ವರಮಲ್ಲೇನಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಯುಷ್ ಆಸ್ಪತ್ರೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮುಂದಿನ ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಕಟ್ಟಡವನ್ನು ಸಾರ್ವಜನಿಕರ ಸೇವೆಗೆ ಸಿದ್ಧಪಡಿಸಬೇಕು ಎಂದು ಅಧಿಕಾರಿ ಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು
-
ಚಿಕ್ಕಬಳ್ಳಾಪುರ: ಜಿಲ್ಲೆಯ ಜನರಿಗೆ ಉತ್ತಮ ಆಯುಷ್(Ayush) ವೈದ್ಯಕೀಯ ಸೇವೆ ಒದಗಿಸುವ ಉದ್ದೇಶ ದಿಂದ ನಿರ್ಮಾಣವಾಗುತ್ತಿರುವ ಜಿಲ್ಲಾ ಆಯುಷ್ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ನಿಗದಿತ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ವೈ. ಭಾ. ಆ. ಸೇ. ಅವರು ಗುತ್ತಿಗೆದಾರರಿಗೆ ಸೂಚಿಸಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ ವರಮಲ್ಲೇನಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಯುಷ್ ಆಸ್ಪತ್ರೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮುಂದಿನ ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಕಟ್ಟಡವನ್ನು ಸಾರ್ವಜನಿಕರ ಸೇವೆಗೆ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ: Chikkaballapur News: ಪಾಲಿಹೌಸ್‌ಗಳಿಗೆ ಭೇಟಿ ನೀಡಿ ಕೃಷಿ ಯೋಜನೆಗಳ ಪ್ರಗತಿ ಪರಿಶೀಲನೆ
ಕಾಮಗಾರಿಯ ಪ್ರಗತಿ, ಕಟ್ಟಡದ ವಿನ್ಯಾಸ ಹಾಗೂ ಕೈಗೊಳ್ಳಬೇಕಿರುವ ವಿವಿಧ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಬಾರದು. ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರು.
ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದರ ಜೊತೆಗೆ, ನಿರ್ಮಾಣದ ಪ್ರತಿಯೊಂದು ಹಂತದಲ್ಲೂ ಗುಣಮಟ್ಟವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ತಬೀಬ ಭಾನು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.