ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಮಾರಂಭವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಅಧಿಕಾರಿಗಳಿಗೆ ಸೂಚನೆ: ಕನ್ನಡ ರಾಜ್ಯೋತ್ಸವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯಗಳನ್ನು ವೀಕ್ಷಿಸಿದ ಅವರು, ರಾಜ್ಯೋ ತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳು ವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸಮಾರಂಭದ ವೇದಿಕೆ ನಿರ್ಮಾಣ, ಧ್ವಜಾ ರೋಹಣ, ಆಸನ ವ್ಯವಸ್ಥೆ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಗಳ ಕುರಿತು ಪರಿಶೀಲನೆ ನಡೆಸಿದರು.

ಚಿಕ್ಕಬಳ್ಳಾಪುರ: ನವೆಂಬರ್ 1ರಂದು ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ಅದ್ಧೂರಿಯಾಗಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಜಿ. ಪ್ರಭು ಗುರುವಾರ ಪರಿಶೀಲಿಸಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯಗಳನ್ನು ವೀಕ್ಷಿಸಿದ ಅವರು, ರಾಜ್ಯೋ ತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸಮಾರಂಭದ ವೇದಿಕೆ ನಿರ್ಮಾಣ, ಧ್ವಜಾರೋಹಣ, ಆಸನ ವ್ಯವಸ್ಥೆ, ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಾಜ್ಯೋತ್ಸವ ಆಚರಣೆ ನಡೆಸಲು ಎಲ್ಲ ಸಿದ್ಧತೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ: Chikkaballapur News: ಸಮುದಾಯದ ಏಳಿಗೆಯ ಗುರಿಯೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಅಭಿವೃದ್ಧಿ ಟ್ರಸ್ಟ್ ಸ್ಥಾಪನೆ: ಉಪಾಧ್ಯಕ್ಷ ಶಿವಕುಮಾರ್

ಒಳಾಂಗಣ ಕ್ರೀಡಾಂಗಣದ ಬ್ಯಾಡ್ಮಿಂಟನ್ ಕೋರ್ಟ್‌ಗೆ ಮೆಚ್ಚುಗೆ

ಇದೇ ವೇಳೆ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ. ಪ್ರಭು, ನವೀಕರಣ ಗೊಂಡಿರುವ ಸುಸಜ್ಜಿತ ಬ್ಯಾಡ್ಮಿಂಟನ್ ಕೋರ್ಟ್ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸಿರುವ ಸೌಲಭ್ಯಗಳನ್ನು ವೀಕ್ಷಿಸಿದರು.

ಈಜುಕೊಳವನ್ನು ಶೀಘ್ರ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಸೂಚನೆ

ಜಿಲ್ಲಾ ಈಜುಕೊಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿನ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿ, ಸ್ಥಳದಲ್ಲಿದ್ದ ಕ್ರೀಡಾ ಇಲಾಖೆಯ ಪ್ರಭಾರ ಅಧಿಕಾರಿ ಮಹೇಶ್ ಪತ್ರಿ ಹಾಗೂ ಸಿಬ್ಬಂದಿಯಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

1454731 DC

ಈಜುಕೊಳದಲ್ಲಿನ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಈಜುಕೊಳದ ನಿರ್ವಹಣೆಗೆ ನಗರಸಭೆಯಿಂದ ಅಗತ್ಯ ಅನುದಾನ ಒದಗಿಸುವಂತೆಯೂ ಮೌಖಿಕವಾಗಿ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ, ಅಪರ ಜಿಲ್ಲಾಧಿಕಾರಿ ಡಾ. ಭಾಸ್ಕರ್, ನಗರಸಭೆ ಆಯುಕ್ತ ಮನ್ಸೂರಲ್ಲಿ ಖಾನ್, ತಹಶೀಲ್ದಾರ್ ರಶ್ಮಿ, ಪ್ರಭಾರ ಕ್ರೀಡಾಧಿಕಾರಿ ಮಹೇಶ್ ಪತ್ರಿ, ಡಿಡಿಪಿಐ ರಮೇಶ್, ನೂತನ ಉಪವಿಭಾಗಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.