ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ದತ್ತು ಮಾಸಾಚರಣೆ

ಎಲ್ಲಾ ಮಕ್ಕಳಿಗೂ ಕುಟುಂಬದ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜದಲ್ಲಿ ದತ್ತು ಕುರಿತು ಸಕಾರಾತ್ಮಕ ಅರಿವು ಮೂಡಿಸುವುದು, ಶಿಶುಗಳಿಗೆ ಪ್ರೀತಿಯುತ ಮತ್ತು ಭದ್ರವಾದ ಮನೆಗಳನ್ನು ಒದಗಿಸುವ ಮಹತ್ವವನ್ನು ಜನರಿಗೆ ತಲುಪಿಸಬೇಕು.

ಚಿಕ್ಕಬಳ್ಳಾಪುರ : ಜಿಲ್ಲೆಯಾದ್ಯಂತ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜದಲ್ಲಿ ದತ್ತು ಕುರಿತು ಸಕಾರಾತ್ಮಕ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಬಾಲ ಸಂರಕ್ಷಣಾ ಘಟಕ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ, ಅಂತರಾಷ್ಟ್ರೀಯ ದತ್ತು ಮಾಸಾ ಚರಣೆ ಅಂಗವಾಗಿ ನವಜಾತ ಮಗುವನ್ನು ತೊಟ್ಟಿಲಿನಲ್ಲಿ ಇರಿಸುವ ಮೂಲಕ “ಮಮತೆಯ ತೊಟ್ಟಿಲು” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Chikkaballapur News: ನ.೫ಕ್ಕೆ ಕನ್ನಡ ಭವನದಲ್ಲಿ ವಿ.ಕೃಷ್ಣರಾವ್ ಶತಮಾನೋತ್ಸವ ಕಾರ್ಯಕ್ರಮ : ಲಾಯರ್ ನಾರಾಯಣಸ್ವಾಮಿ

ಎಲ್ಲಾ ಮಕ್ಕಳಿಗೂ ಕುಟುಂಬದ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಮಾಜದಲ್ಲಿ ದತ್ತು ಕುರಿತು ಸಕಾರಾತ್ಮಕ ಅರಿವು ಮೂಡಿಸುವುದು, ಶಿಶುಗಳಿಗೆ ಪ್ರೀತಿಯುತ ಮತ್ತು ಭದ್ರವಾದ ಮನೆ ಗಳನ್ನು ಒದಗಿಸುವ ಮಹತ್ವವನ್ನು ಜನರಿಗೆ ತಲುಪಿಸಬೇಕು. ವಿವಿಧ ಜಾಗೃತಿ ಕಾರ್ಯಕ್ರಮಗಳು ಮತ್ತು ಚರ್ಚಾ ಸಭೆಗಳು ಜಿಲ್ಲೆಯಾದ್ಯಂತ ಆಯೋಜಿಸಲಾಗುವುದು ಹಾಗೂ “ಪ್ರತಿಯೊಬ್ಬ ಶಿಶುವಿಗೂ ಪ್ರೀತಿ ಮತ್ತು ಆರೈಕೆಯ ಹಕ್ಕಿದೆ. ದತ್ತು ಮೂಲಕ ಅನೇಕ ಮಕ್ಕಳು ಹೊಸ ಜೀವನದ ಅವಕಾಶ ಪಡೆಯುತ್ತಿದ್ದಾರೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೌರವಾನ್ವಿತ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಳಾದ ಬಿ.ಶಿಲ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್. ವೆಂಕಟೇಶರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ.ನೌತಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾ ತನಿಖಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.