ಗುಡಿಬಂಡೆ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ(International Day of Democracy Celebration)ಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಲಾಯಿತು. ನಂತರ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.
ಇದನ್ನೂ ಓದಿ: Gudibande News: ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಆಂದೋಲನ: ತಹಶೀಲ್ದಾರ್ ಸಿಗ್ಬತ್ ಉಲ್ಲಾ
ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಕೀಲರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿ ಗಳು, ಚುನಾಯಿತ ಪ್ರತಿನಿಧಿಗಳು, ಪಟ್ಟಣ ಪಂಚಾಯಿತಿ ಸದಸ್ಯರು, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ದ್ದರು.
ದಲಿತ, ವಾಲ್ಮೀಕಿ, ಹಿಂದುಳಿದ, ಅಲ್ಪಸಂಖ್ಯಾತ, ಪ್ರಗತಿಪರ, ಕನ್ನಡಪರ ಹಾಗೂ ರೈತಪರ ಸಂಘಟನೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ನೌಕರರ ಸಂಘಗಳ ಪ್ರತಿನಿಧಿಗಳು ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನದ ಆಶಯಗಳು, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ನಾಗರಿಕರ ಹಕ್ಕುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.