ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chinthamani News: ಇರಗಂಪಲ್ಲಿ ಗ್ರಾಮ ಸಭೆ: ಮೂಲ ಸೌಕರ್ಯಗಳ ಕೊರತೆ ಹಿನ್ನೆಲೆ ಸಾರ್ವಜನಿಕರ ಆಕ್ರೋಶ

ಸಭೆಯಲ್ಲಿ ಮುಖ್ಯವಾಗಿ ಗ್ರಾಮಗಳ ಚರಂಡಿ ವ್ಯವಸ್ಥೆ, ಸ್ವಚ್ಛತೆ ಹಾಗೂ ಮನೆ ಮತ್ತು ನಿವೇಶನ ರಹಿತರ ಸಮಸ್ಯೆಗಳು ಮುನ್ನೆಲೆಗೆ ಬಂದವು. ಸಾರ್ವಜನಿಕರೊಬ್ಬರು ಮಾತನಾಡಿ, "ಗ್ರಾಮದಲ್ಲಿ ಚರಂಡಿಗಳನ್ನು ಸರಿಯಾಗಿ ಸ್ವಚ್ಛಗೊಳಿಸುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು

ಚಿಂತಾಮಣಿ: ತಾಲೂಕಿನ ಇರಗಂಪಲ್ಲಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳ ಲಾಗಿದ್ದ ಗ್ರಾಮ ಸಭೆ/ವಾರ್ಡ್ ಸಭೆಯಲ್ಲಿ ಸಾರ್ವಜನಿಕರು ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ದೂರುಗಳ ಸುರಿಮಳೆಯನ್ನೇ ಹರಿಸಿದ್ದಾರೆ.

ಸಭೆಯಲ್ಲಿ ಮುಖ್ಯವಾಗಿ ಗ್ರಾಮಗಳ ಚರಂಡಿ ವ್ಯವಸ್ಥೆ, ಸ್ವಚ್ಛತೆ ಹಾಗೂ ಮನೆ ಮತ್ತು ನಿವೇಶನ ರಹಿತರ ಸಮಸ್ಯೆಗಳು ಮುನ್ನೆಲೆಗೆ ಬಂದವು.

ಇದನ್ನೂ ಓದಿ: Chinthamani News: ಎಸ್‌ಸಿ/ಎಸ್‌ಟಿ ನೌಕರರ ಮೇಲಿನ ದೌರ್ಜನ್ಯ ಮುಂದುವರಿದರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ: ಎಸ್‌ ಪ್ರದೀಪ್‌ ಎಚ್ಚರಿಕೆ

ಸಾರ್ವಜನಿಕರೊಬ್ಬರು ಮಾತನಾಡಿ, "ಗ್ರಾಮದಲ್ಲಿ ಚರಂಡಿಗಳನ್ನು ಸರಿಯಾಗಿ ಸ್ವಚ್ಛಗೊಳಿಸು ತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು.

ಇದಕ್ಕೆ ಉತ್ತರಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಂದ್ರ,ಕಳೆದ ಬಾರಿ ಜೆಸಿಬಿ ಬಳಸಿ ಚರಂಡಿ ಸ್ವಚ್ಛಗೊಳಿಸಲಾಗಿತ್ತು. ಮತ್ತೊಮ್ಮೆ ಪರಿಶೀಲಿಸಿ ಬಾಕಿ ಇರುವ ಕಡೆಗಳಲ್ಲಿ ಶೀಘ್ರದಲ್ಲೇ ಚರಂಡಿ ಕ್ಲೀನ್ ಮಾಡಿಸಲಾಗುವುದು ಎಂದು ಭರವಸೆ ನೀಡಿದರು. ಸಭೆಯಲ್ಲಿ ಸಾರ್ವಜನಿಕರು ಗ್ರಾಮಸ್ಥರು ಉಪಸ್ಥಿತರಿದ್ದರು.