ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Eshwar Khandre: ತಾಲೂಕು ಕೇಂದ್ರಗಳಲ್ಲಿ ಪಂಚಾಯಿತಿ ಭವನ, ಸಾಮರ್ಥ್ಯಸೌಧ ಅಗತ್ಯ: ಈಶ್ವರ ಖಂಡ್ರೆ

ಚಿಂತಾಮಣಿ ನಗರದಲ್ಲಿ ನಿರ್ಮಿಸಲಾಗಿರುವ ಸಾಮರ್ಥ್ಯಸೌಧ ಹಾಗೂ ಪಂಚಾಯಿತಿ ಭವನವನ್ನು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿ ಗಳು ಸಭೆ ನಡೆಸಲು ಅಗತ್ಯ ಸೌಲಭ್ಯಗಳನ್ನು ಒಳಗೊಂಡಿರುವ ಇಂತಹ ಕಟ್ಟಡಗಳು ಆಡಳಿತಕ್ಕೆ ಹೆಚ್ಚಿನ ಬಲ ನೀಡಲಿವೆ

ಚಿಂತಾಮಣಿ: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಪ್ರತಿ ತಾಲೂಕು ಕೇಂದ್ರದಲ್ಲೂ ಪಂಚಾಯಿತಿ ಭವನ ಹಾಗೂ ಸಾಮರ್ಥ್ಯಸೌಧ ನಿರ್ಮಾಣದ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ(Eshwar Khandre) ಹೇಳಿದರು.

ಚಿಂತಾಮಣಿ ನಗರದಲ್ಲಿ ನಿರ್ಮಿಸಲಾಗಿರುವ ಸಾಮರ್ಥ್ಯಸೌಧ ಹಾಗೂ ಪಂಚಾಯಿತಿ ಭವನವನ್ನು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್(Dr G Parameshwar) ಅವರೊಂದಿಗೆ ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿ ಗಳು ಸಭೆ ನಡೆಸಲು ಅಗತ್ಯ ಸೌಲಭ್ಯಗಳನ್ನು ಒಳಗೊಂಡಿರುವ ಇಂತಹ ಕಟ್ಟಡಗಳು ಆಡಳಿತಕ್ಕೆ ಹೆಚ್ಚಿನ ಬಲ ನೀಡಲಿವೆ ಎಂದರು.

ಇದನ್ನೂ ಓದಿ: Eshwar Khandre: ಪರಿಸರ ಸ್ನೇಹಿ ಗಣಪತಿ ಮೂರ್ತಿ ಪೂಜೆಗೆ ಪ್ರೇರೇಪಿಸಿ: ಈಶ್ವರ ಖಂಡ್ರೆ

ಚಿಂತಾಮಣಿಯಲ್ಲಿ ನಿರ್ಮಿಸಿರುವ ಸಾಮರ್ಥ್ಯಸೌಧ ಹಾಗೂ ಪಂಚಾಯಿತಿ ಭವನ ಮಾದರಿ ಯಾಗಿದೆ. ಎರಡೂ ಕಟ್ಟಡಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಸಮರ್ಥವಾಗಿ ಅಳವಡಿಸಿರುವುದು ಶ್ಲಾಘನೀಯ. ಇಂದಿನ ದಿನಗಳಲ್ಲಿ ವಿಡಿಯೋ ಸಂವಾದದ ಮೂಲಕವೇ ಹಲವು ಸಭೆಗಳನ್ನು ನಡೆಸಲು ಸಾಧ್ಯವಾಗಿರುವುದರಿಂದ ಪ್ರತಿ ತಾಲೂಕು ಕೇಂದ್ರದಲ್ಲೂ ಇಂತಹ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ತಂತ್ರಜ್ಞಾನವನ್ನು ಆಡಳಿತದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರಿಂದ ಸಮಯ ಹಾಗೂ ಸಂಪನ್ಮೂಲಗಳ ಉಳಿತಾಯವಾಗಲಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆಯುವುದರ ಜೊತೆಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವಿನ ಸಮನ್ವಯವೂ ಮತ್ತಷ್ಟು ಸುಧಾರಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ(Dr M C Mahadevappa), ಡಾ.ಎಂ.ಸಿ.ಸುಧಾಕರ್(Dr M C Mahadevappa), ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.