ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ಮಹನೀಯರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಕರ್ತವ್ಯ: ಶ್ರೀಕಾಂತ್

ನಗರದ ಶ್ರೀ ಸರಸ್ವತಿ ಕಾರ್ಮೆಂಟ್ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಗಾಂಧೀಜಿ ಹಾಗೂ ಶಾಸ್ತ್ರಿ ಅವರು ದೇಶಕ್ಕಾಗಿ ಸಲ್ಲಿಸಿದ ಸೇವೆ ಮತ್ತು ಮಾಡಿದ ತ್ಯಾಗವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.

ಶಿಡ್ಲಘಟ್ಟ: ಮಹಾತ್ಮ ಗಾಂಧೀಜಿ(Mahatma Gandhi) ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ(Lal Bahaddur Shastri) ಅವರ ತ್ಯಾಗ, ಸರಳತೆ, ಪ್ರಾಮಾಣಿಕತೆ ಮತ್ತು ದೇಶಭಕ್ತಿಯ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಸರಸ್ವತಿ ಕಾರ್ಮೆಂಟ್ ಶಾಲೆಯ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಹೇಳಿದರು.

ನಗರದ ಶ್ರೀ ಸರಸ್ವತಿ ಕಾರ್ಮೆಂಟ್ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಗಾಂಧೀಜಿ ಹಾಗೂ ಶಾಸ್ತ್ರಿ ಅವರು ದೇಶಕ್ಕಾಗಿ ಸಲ್ಲಿಸಿದ ಸೇವೆ ಮತ್ತು ಮಾಡಿದ ತ್ಯಾಗವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.

ಇದನ್ನೂ ಓದಿ: Shidlaghatta News: ಗುರುವಿನ ಮಾರ್ಗದರ್ಶನವೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ: ಬಿ.ಎನ್. ಕೃಷ್ಣಪ್ಪ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಶಿಸ್ತು, ಮಾನವೀಯತೆ ಹಾಗೂ ದೇಶದ ಬಗ್ಗೆ ಜವಾಬ್ದಾರಿ ಯುತ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಮಹನೀಯರ ಜೀವನ, ಹೋರಾಟ ಹಾಗೂ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬಳಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸಿಹಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮಿ, ರುಕ್ಮಿಣಿ, ಅಶ್ವಥ್ ನಾರಾಯಣ ರೆಡ್ಡಿ, ವೆಂಕಟರೆಡ್ಡಿ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.