ಎಐ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಜಿಲ್ಲಾ ಪೊಲೀಸ್ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿರುವುದು ಸಂತೋಷದ ವಿಚಾರ
ಅಪರಾಧ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾ ಪೊಲೀಸ್ ಪ್ರಾಮಾಣಿಕವಾಗಿ ಶ್ರಮಿಸು ತ್ತಿದ್ದಾರೆ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚಿದಂತೆ ಅಪರಾಧ ಪ್ರಕರಣಗಳನ್ನು ಮಟ್ಟಹಾಕಲು ಜಿಲ್ಲೆಯಲ್ಲಿ 120 ಕ್ಕೂ ಹೆಚ್ಚು ಎಐ ಕ್ಯಾಮೆರಾಗಳು ಅಳವಡಿಸಲಾಗಿದೆ. ಸಾರ್ವಜನಿಕರು ಕೂಡ ಕಾನೂನಿಗೆ ಬದ್ಧವಾಗಿ ನಡೆದು ಕೊಳ್ಳುವುದನ್ನು ರೂಢಿಸಿಕೊಳ್ಳಬೇಕು.ಆಗ ಮಾತ್ರ ದಂಡದಿಂದ ಪಾರಾಗಬಹುದು ಎಂದರು

ಜಿಲ್ಲೆಯಲ್ಲಿ ನಾಗರೀಕ ಸುರಕ್ಷತೆ ಮತ್ತು ಸುಭದ್ರತೆಗಾಗಿ ೧೨೦ಕ್ಕೂ ಹೆಚ್ಚು ಎಐ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಜಿಲ್ಲಾ ಪೊಲೀಸ್ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿರುವುದು ಸಂತೋಷದ ವಿಚಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ನಾಗರೀಕ ಸುರಕ್ಷತೆ ಮತ್ತು ಸುಭದ್ರತೆಗಾಗಿ 120ಕ್ಕೂ ಹೆಚ್ಚು ಎಐ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ಜಿಲ್ಲಾ ಪೊಲೀಸ್ ಮತ್ತೊಂದು ಮಹತ್ವ ದ ಹೆಜ್ಜೆಯಿಟ್ಟಿರುವುದು ಸಂತೋಷದ ವಿಚಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸ್ಥಾಪಿಸಿರುವ ಜಿಲ್ಲಾ ಸಿಸಿಟಿವಿ ಕಮಾಂಡ್ ಸೆಂಟರ್ "ದೃಷ್ಟಿ" ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ: Chikkaballapur Crime: ಹಬ್ಬದ ದಿನವೇ ಆದಿಯೋಗಿ ದರ್ಶನಕ್ಕೆ ಬಂದ ಇಬ್ಬರು ಯುವಕರು ಅಪಘಾತಕ್ಕೆ ಬಲಿ
ಅಪರಾಧ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾ ಪೊಲೀಸ್ ಪ್ರಾಮಾಣಿಕವಾಗಿ ಶ್ರಮಿಸು ತ್ತಿದ್ದಾರೆ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚಿದಂತೆ ಅಪರಾಧ ಪ್ರಕರಣಗಳನ್ನು ಮಟ್ಟಹಾಕಲು ಜಿಲ್ಲೆಯಲ್ಲಿ 120 ಕ್ಕೂ ಹೆಚ್ಚು ಎಐ ಕ್ಯಾಮೆರಾಗಳು ಅಳವಡಿಸಲಾಗಿದೆ. ಸಾರ್ವಜನಿಕರು ಕೂಡ ಕಾನೂನಿಗೆ ಬದ್ಧವಾಗಿ ನಡೆದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು.ಆಗ ಮಾತ್ರ ದಂಡದಿಂದ ಪಾರಾಗಬಹುದು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಕುಶಲ್ ಚೌಕ್ಸೆ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.