ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Chinthamani News: ಮುಂದಿನ ಪೀಳಿಗೆಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಉದ್ಯೋಗ ಸಿಗುವುದು ಅನುಮಾನ : ಇ ಒ ಆನಂದ್

ಸರ್ಕಾರಿ ಶಾಲೆಗಳ ಶಿಕ್ಷಕರು ಮಕ್ಕಳಿಗೆ ಉತ್ತಮ ರೀತಿಯ ವಿದ್ಯೆ ನೀಡುತ್ತಿದ್ದರು. ಈಗಿನ ಕಾಲದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಹಿಂದೇಟು ಹಾಕುತ್ತಿರುವ ಕಾರಣ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಂಠಿತ ಗೊಳ್ಳುತ್ತಿದೆ. ಇಂತಹ ಪರಿಸ್ಥಿತಿ ಇದ್ದರೆ ಮುಂದಿನ ದಿನಗಳಲ್ಲಿ ಶಿಕ್ಷಕರಿಗೆ ಉದ್ಯೋಗ ಸರ್ಕಾರಿ ಶಾಲೆಗಳಲ್ಲಿ ಸಿಗುವುದೇ ಸಂಶಯವಾಗಿದೆ ಯಾಕಂದರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳೇ ಇರುವುದಿಲ್ಲ

ಚಿಂತಾಮಣಿ: ಹಿಂದಿನ ಕಾಲದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಜಾಸ್ತಿಯಾಗಿದ್ದು ಜಾಗದ ಕೊರತೆ ಕಾಣುತ್ತಿತ್ತು,ಈಗಿನ ಕಾಲದಲ್ಲಿ ಸರ್ಕಾರಿ ಶಾಲೆಗಳು ಅತಿ ಹೆಚ್ಚಾಗಿ ಅಭಿವೃದ್ಧಿಯಾಗಿದ್ದರು ಮಕ್ಕಳ ಸಂಖ್ಯೆ ಕಡಿಮೆಯಾಗಿರುವುದು ಬೇಸರದ ಸಂಗತಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ ಆನಂದ್ ತಿಳಿಸಿದರು.

ಚಿಂತಾಮಣಿ ತಾಲ್ಲೂಕಿನ ಕೊಡದವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ದಲ್ಲಿ ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ 1 ಲಕ್ಷ 10 ಸಾವಿರಾರು ವೆಚ್ಚದಲ್ಲಿ ನಿರ್ಮಾಣ ಮಾಡ ಲಾಗಿರುವ ಮಕ್ಕಳು ಓದುವ ಕುಟೀರ ಉದ್ಘಾಟನೆ ಹಾಗೂ ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಸರ್ಕಾರಿ ಶಾಲೆಗಳ ಶಿಕ್ಷಕರು ಮಕ್ಕಳಿಗೆ ಉತ್ತಮ ರೀತಿಯ ವಿದ್ಯೆ ನೀಡುತ್ತಿದ್ದರು.

ಇದನ್ನೂ ಓದಿ: Chinthamani News: ಎಫ್ ಸಿ ಇಲ್ಲದ ಶಾಲಾ ವಾಹನಗಳಿಗೆ ಎಫ್ ಸಿ ಮಾಡಿಕೊಳ್ಳಲು ಖಡಕ್ ವಾರ್ನಿಂಗ್

ಈಗಿನ ಕಾಲದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಹಿಂದೇಟು ಹಾಕುತ್ತಿರುವ ಕಾರಣ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಂಠಿತ ಗೊಳ್ಳುತ್ತಿದೆ. ಇಂತಹ ಪರಿಸ್ಥಿತಿ ಇದ್ದರೆ ಮುಂದಿನ ದಿನಗಳಲ್ಲಿ ಶಿಕ್ಷಕರಿಗೆ ಉದ್ಯೋಗ ಸರ್ಕಾರಿ ಶಾಲೆಗಳಲ್ಲಿ ಸಿಗುವುದೇ ಸಂಶಯವಾಗಿದೆ ಯಾಕಂದರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳೇ ಇರುವುದಿಲ್ಲ ಎಂದು ವಿವರಿಸಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಶ್ರೀನಿವಾಸನ್ ಎಸ್ ವಿ,ಸಿ ಆರ್ ಪಿ,ಎಂ ಎ ಪ್ರಕಾಶ್  ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಬರಿ ಜನಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಬಡಗವಾರಹಳ್ಳಿ ಶಬರೀಶ್, ಮಾಲೂರು ಉಪನೊಂದನಾಧಿಕಾರಿಗಳಾದ ಬೈರಾ ರೆಡ್ಡಿ, ನಾರಾಯಣರೆಡ್ಡಿ, ಮುಖ್ಯ ಶಿಕ್ಷಕರಾದ ಎಂ ಚೌಡರೆಡ್ಡಿ, ಸಹಶಿಕ್ಷಕಿ ಎಂಎಲ್ ಶಂಕರಮ್ಮ, ಶಿಕ್ಷಕಿ ಆಶಾ ಕೆ, ಶಬರಿ ಸೇವಾ ಟ್ರಸ್ಟ್ ನ ಟ್ರಸ್ಟಿಗಳಾದ ಮುಕೇಶ್, ಮಂಜುನಾಥ ಸೇರಿದಂತೆ ಮತ್ತಿತರರು ಇದ್ದರು.