ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

JDS MLA B.N.Ravikumar: ಜನರಿಗೆ ಯೋಜನೆಗಳ ಮಾಹಿತಿ ತಲುಪಿಸುವುದು ಮುಖ್ಯ: ಬಿ.ಎನ್. ರವಿಕುಮಾರ್

ಹಿಂದುಳಿದ ವರ್ಗಗಳ ಜನರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವು ಅರ್ಹರಿಗೆ ಸಮರ್ಪಕವಾಗಿ ತಲುಪು ವುದು ಮುಖ್ಯವಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರಿಗೆ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು

ಶಿಡ್ಲಘಟ್ಟ : ಸರ್ಕಾರ ಜಾರಿಗೆ ತರುತ್ತಿರುವ ಕಲ್ಯಾಣ ಯೋಜನೆಗಳು ನಿಜವಾದ ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್(JDS MLA B.N. Ravikumar) ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ವಿವಿಧ ನಿಗಮಗಳ ಮಂಜೂರಾತಿ ಆದೇಶ ಪತ್ರ ವಿತರಣೆ ಹಾಗೂ ಹೋಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದುಳಿದ ವರ್ಗಗಳ ಜನರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವು ಅರ್ಹರಿಗೆ ಸಮರ್ಪಕ ವಾಗಿ ತಲುಪುವುದು ಮುಖ್ಯವಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರಿಗೆ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ:MLA BN Ravikumar: ಕಾನೂನು ರೀತಿಯಲ್ಲಿ ಹೋರಾಟ ಮಾಡೋಣ: ಶಾಸಕ ಬಿ ಎನ್ ರವಿಕುಮಾರ್

ಯುವಕರು ಮತ್ತು ಮಹಿಳೆಯರು ಸ್ವಯಂ ಉದ್ಯೋಗ ಆರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದರಿಂದ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದು ತಿಳಿಸಿದರು.

ಕಾರ್ಯನಿರ್ವಾಹಕ ಅಧಿಕಾರಿ ಆರ್.ಹೇಮಾವತಿ ಮಾತನಾಡಿ, ಹಿಂದುಳಿದ ವರ್ಗಗಳ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ನಿಗಮದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶಿಕ್ಷಣ, ಸ್ವಯಂ ಉದ್ಯೋಗ ಹಾಗೂ ವಸತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಾಯಧನ ಮತ್ತು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮೇಲೂರು ಮಂಜುನಾಥ್, ಬಂಕ್ ಮುನಿಯಪ್ಪ, ರಾಮಣ್ಣ, ಗಂಜಗುಂಟೆ ಮೂರ್ತಿ, ರಮೇಶ್, ನಂದ ಕಿಶನ್,ಸಾಯಕ ಅಭಿವೃದ್ಧಿ ಅಧಿಕಾರಿ ಭೀಮಪ್ಪ ಕೆ, ಶಿವಕುಮಾರ್,ಸೇರಿದಂತೆ ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಫಲಾನು ಭವಿಗಳು ಉಪಸ್ಥಿತರಿದ್ದರು.

ಎಸ್ ಡಿ ಎಲ್ ಎಂ: ಶಿಡ್ಲಘಟ್ಟದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ನಿಗಮಗಳ ಮಂಜೂರಾತಿ ಆದೇಶ ಪತ್ರ ಹಾಗೂ ಹೋಲಿಗೆ ಯಂತ್ರಗಳನ್ನು ಫಲಾನುಭವಿಗಳಿಗೆ ಶಾಸಕ ಬಿ.ಎನ್. ರವಿಕುಮಾರ್ ವಿತರಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.