ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLA K H PuttaswamyGowda: ಎಲ್ಲಾ ಸಮುದಾಯಕ್ಕೂ ಸಮಾನ ಅವಕಾಶ, ನ್ಯಾಯ ಒದಗಿಸುವುದು ನನ್ನ ಕರ್ತವ್ಯ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಈ ಭಾಗದ ಮುಸ್ಲಿಂ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಶಾದಿ ಮಹಲ್ ನಿರ್ಮಾಣಕ್ಕೆ ಇಂದು ಅಡಿಪಾಯ ಹಾಕಲಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಪೂರಕವಾದ ಪುಣ್ಯದ ಕಾರ್ಯ ವಾಗಿದ್ದು, ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸುಸಜ್ಜಿತ ಶಾದಿ ಮಹಲ್ ಅಗತ್ಯವಾಗಿತ್ತು

ಕ್ಷೇತ್ರದ ಎಲ್ಲ ಸಮುದಾಯಗಳಿಗೆ ಸಮಾನ ಅವಕಾಶ ಹಾಗೂ ನ್ಯಾಯ ಒದಗಿಸುವುದು ಜನಪ್ರತಿನಿಧಿಯಾಗಿ ತನ್ನ ಕರ್ತವ್ಯ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಹೇಳಿದರು.

ಗೌರಿಬಿದನೂರು: ಕ್ಷೇತ್ರದ ಎಲ್ಲ ಸಮುದಾಯಗಳಿಗೆ ಸಮಾನ ಅವಕಾಶ ಹಾಗೂ ನ್ಯಾಯ ಒದಗಿಸುವುದು ಜನಪ್ರತಿನಿಧಿಯಾಗಿ ತನ್ನ ಕರ್ತವ್ಯ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ (MLA K H PuttaswamyGowda) ಹೇಳಿದರು.

ತಾಲೂಕಿನ ಹೊಸೂರು ಗ್ರಾಮದಲ್ಲಿ ಶಾದಿ ಮಹಲ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ಹೋಬಳಿ ಮಟ್ಟದ ಮುಸ್ಲಿಂ ಸಮುದಾಯದ ಸಮಾವೇಶ, ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಭಾಗದ ಮುಸ್ಲಿಂ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಶಾದಿ ಮಹಲ್ ನಿರ್ಮಾಣಕ್ಕೆ ಇಂದು ಅಡಿಪಾಯ ಹಾಕಲಾಗುತ್ತಿದೆ. ಇದು ಸಮಾಜದ ಅಭಿವೃದ್ಧಿಗೆ ಪೂರಕವಾದ ಪುಣ್ಯದ ಕಾರ್ಯವಾಗಿದ್ದು, ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಸುಸಜ್ಜಿತ ಶಾದಿ ಮಹಲ್ ಅಗತ್ಯವಾಗಿತ್ತು ಎಂದು ಹೇಳಿದರು.

ಇದನ್ನೂ ಓದಿ: MLA K H PuttaswamyGowda: ಹಕ್ಕುಪತ್ರ ವಿತರಣೆಗೆ ವೇಗ: ಗ್ರಾಮೀಣ ಭಾಗದ ಎಲ್ಲ ಅರ್ಹರಿಗೆ ಹಂತ ಹಂತವಾಗಿ ದಾಖಲೆ: ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ಈ ಯೋಜನೆಗೆ ಡಾ.ನಯಾಜ್ ಹಾಗೂ ಫಿರೋಜ್ ಅಹಮದ್ ಅವರ ಕುಟುಂಬ ನೀಡಿದ ಸಹಕಾರ ಮತ್ತು ಸಮಾಜಸೇವೆಯ ಕಳಕಳಿಯನ್ನು ಮೆಚ್ಚಿ, ತಮ್ಮ ವಿವೇಚನಾ ಕೋಟಾದಡಿ ರೂ.40 ಲಕ್ಷ ಅನುದಾನ ಮಂಜೂರು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣವೇ ಸಮುದಾಯದ ಅಭಿವೃದ್ಧಿಗೆ ಪ್ರಮುಖ ಅಡಿಪಾಯವಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಮೊದಲ ಆದ್ಯತೆ ನೀಡಬೇಕು. ಸಮುದಾಯದ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ತಾವು ಸದಾ ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು.

ಯಾವುದೇ ಸ್ವಾರ್ಥವಿಲ್ಲದೆ ಸೇವಾ ಮನೋಭಾವದಿಂದ ರಾಜಕೀಯ ಪ್ರವೇಶಿಸಿದ್ದು, ಯಾವುದೇ ಸಮಾಜಕ್ಕೆ ಅನ್ಯಾಯವಾಗದಂತೆ ಎಲ್ಲರನ್ನೂ ಸಮಾನವಾಗಿ ಕಾಣುವ ಆಡಳಿತ ನಡೆಸುತ್ತಿದ್ದೇನೆ. ಕ್ಷೇತ್ರದಲ್ಲಿ ಶಾಂತಿ ಮತ್ತು ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 2025-26ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮುದಾ ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಾಮೀಯಾ ಮಸೀದಿ ಕಮಿಟಿ ಅಧ್ಯಕ್ಷ ಶಫಿ ಉಲ್ಲಾ, ಕಾರ್ಯದರ್ಶಿ ನಯಾಜ್ ಮಹಮ್ಮದ್, ಸಿಪಿಐ ಫಿರೋಜ್ ಮಹಮ್ಮದ್, ಮುಖಂಡರಾದ ಅಬ್ದುಲ್ಲಾ, ಬೊಮ್ಮಣ್ಣ, ಕಲೀಂ ಉಲ್ಲಾ, ಆಸೀಫ್, ಇಮ್ರಾನ್, ನಾಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.