Chikkaballapur News: ಜಾನಪದ ಕಲೆ, ಸಂಸ್ಕೃತಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ: ಜಿಲ್ಲಾಧಿಕಾರಿ ಜಿ. ಪ್ರಭು
ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಕಲಾ ಪ್ರತಿಭೋತ್ಸವಗಳು ಕರ್ನಾಟಕದ ಸೃಜನಶೀಲತೆ ಮತ್ತು ಶ್ರೀಮಂತ ಜನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವೇದಿಕೆಗಳಾಗಿವೆ. ವಿವಿಧ ಕಾಲಘಟ್ಟ ಗಳಲ್ಲಿ ಬೆಳೆದು ಬಂದಿರುವ ಜನರ ಜೀವನಶೈಲಿ, ಮೌಲ್ಯಗಳು, ಸಂಪ್ರದಾಯಗಳು ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಬೇಕು.
-
ಚಿಕ್ಕಬಳ್ಳಾಪುರ: ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜಾನಪದ ಕಲಾಪ್ರಕಾರಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪೂರ್ವಜ ರಿಂದ ಬಳುವಳಿಯಾಗಿ ಬಂದಿರುವ ಕಲೆಗಳನ್ನು ಸಂರಕ್ಷಿಸಿ ಬೆಳೆಸುವ ಮೂಲಕ ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಜೀವಂತವಾಗಿಡಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ತಿಳಿಸಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಶನಿವಾರ ನಗರದ ಕನ್ನಡ ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.
ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಕಲಾ ಪ್ರತಿಭೋತ್ಸವಗಳು ಕರ್ನಾಟಕದ ಸೃಜನಶೀಲತೆ ಮತ್ತು ಶ್ರೀಮಂತ ಜನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವೇದಿಕೆಗಳಾಗಿವೆ. ವಿವಿಧ ಕಾಲಘಟ್ಟ ಗಳಲ್ಲಿ ಬೆಳೆದು ಬಂದಿರುವ ಜನರ ಜೀವನಶೈಲಿ, ಮೌಲ್ಯಗಳು, ಸಂಪ್ರದಾಯಗಳು ಹಾಗೂ ಸಾಂಸ್ಕೃ ತಿಕ ವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ರೈತರು ಕೃಷಿ ಚಟುವಟಿಕೆಗಳೊಂದಿಗೆ ಅನೇಕ ಜಾನಪದ ಕಲಾಪ್ರಕಾರಗಳನ್ನು ಜೀವಂತವಾಗಿರಿಸಿ ಕೊಂಡು ಬಂದಿದ್ದಾರೆ. ಇಂತಹ ಕಲೆಗಳನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.
ಇದನ್ನೂ ಓದಿ: Chikkaballapur News: ಸಂವಿಧಾನದ ಮೌಲ್ಯಗಳು ಪ್ರಜಾಪ್ರಭುತ್ವದ ಬಲಿಷ್ಠ ಅಡಿಪಾಯ: ಸೀಕಲ್ ರಾಮಚಂದ್ರಗೌಡ
ಪ್ರತಿಯೊಬ್ಬರಲ್ಲಿಯೂ ಒಂದೊಂದು ವಿಶಿಷ್ಟ ಪ್ರತಿಭೆ ಅಡಗಿರುತ್ತದೆ. ಉತ್ತಮ ಗುರುಗಳ ಮಾರ್ಗ ದರ್ಶನ ಹಾಗೂ ಸ್ವಂತ ಪರಿಶ್ರಮದಿಂದ ಆ ಪ್ರತಿಭೆಯನ್ನು ಗುರುತಿಸಿ ಬೆಳೆಸಿಕೊಂಡಾಗ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ಸದುಪಯೋಗಪಡಿಸಿ ಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಡಾ. ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಇಂದು ನಾವು ನಮ್ಮತನವನ್ನು ಮರೆತು ನಮ್ಮದಲ್ಲದ ಲೋಕದಲ್ಲಿ ವಿಹರಿಸುತ್ತಿದ್ದೇವೆ. ವೈದ್ಯರು, ಎಂಜಿನಿಯರ್ಗಳು ಸೇರಿದಂತೆ ಯಾವುದೇ ಉನ್ನತ ಸ್ಥಾನದಲ್ಲಿರು ವವರಿಗೂ ಮೊದಲು ಮಾನವರಾಗುವುದು ಮುಖ್ಯ. ರಾಷ್ಟ್ರಕವಿ ಕುವೆಂಪು(National Poet Kuvempu) ಅವರ ಆಶಯದಂತೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು, ನಮ್ಮತನ ವನ್ನು ಉಳಿಸಿಕೊಂಡು ಬದುಕಬೇಕು ಎಂದರು.
ಸಂಸ್ಕೃತಿಗೆ ಧಕ್ಕೆಯಾದರೆ ಅದು ಮನುಕುಲದ ಅಸ್ತಿತ್ವಕ್ಕೇ ಅಪಾಯ ತಂದೊಡ್ಡುತ್ತದೆ. ಪ್ರತಿ ಯೊಬ್ಬರೂ ಪರಸ್ಪರ ಪ್ರೀತಿಸಿ, ಮಾನವ ಬಂಧುತ್ವವನ್ನು ಗಟ್ಟಿಗೊಳಿಸಬೇಕು. ಕಲಾ ಪ್ರತಿಭೋತ್ಸವ ದ ಮೂಲಕ ಬಾಲ, ಕಿಶೋರ ಹಾಗೂ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿಹಿಡಿಯುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಮಾತನಾಡಿ, ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವದಲ್ಲಿ ಪ್ರಥಮ ಸ್ಥಾನ ಪಡೆಯುವ ಪ್ರತಿ ವಿಭಾಗದ ವಿಜೇತ ರನ್ನು ಬೆಂಗಳೂರು ವಲಯ ಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು. ಕಲೆ ಮತ್ತು ಸಂಸ್ಕೃತಿಯನ್ನು ಜೀವಂತವಾಗಿರಿಸುವ ಉದ್ದೇಶದಿಂದ ಇಲಾಖೆ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.
ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 500 ಬಾಲ, ಕಿಶೋರ ಹಾಗೂ ಯುವ ಸ್ಪರ್ಧಿಗಳು ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಒಟ್ಟು 71 ವಿಜೇತರಿಗೆ ಪ್ರಶಸ್ತಿ ಫಲಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತೀರ್ಪುಗಾರರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು.