ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ಮಹಿಳೆಯರ ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸುವುದು ಅಗತ್ಯ: ಹೇಮಾವತಿ

ಮೇಳದಲ್ಲಿ ಮಹಿಳಾ ಸಂಘಗಳ ಸದಸ್ಯರು ತಯಾರಿಸಿರುವ ಆಹಾರ ಪದಾರ್ಥಗಳು, ಕರಕುಶಲ ವಸ್ತು ಗಳು ಹಾಗೂ ವಿವಿಧ ಗೃಹೋಪಯೋಗಿ ಉತ್ಪನ್ನಗಳನ್ನು ಮಾರಾಟಕ್ಕೆ ಇಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಭೇಟಿ ನೀಡಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರನ್ನು ಪ್ರೋತ್ಸಾಹಿಸಬೇಕು

ಶಿಡ್ಲಘಟ್ಟ: ಮಹಿಳೆಯರು ತಯಾರಿಸುವ ಗುಣಮಟ್ಟದ ಉತ್ಪನ್ನಗಳಿಗೆ ಸ್ಥಳೀಯವಾಗಿಯೇ ಉತ್ತಮ ಮಾರುಕಟ್ಟೆ ದೊರೆತರೆ ಅವರ ಆದಾಯ ಹೆಚ್ಚುವುದರ ಜತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಆರ್. ಹೇಳಿದರು.

ನಗರದ ಸಂತೆ ಮೈದಾನದಲ್ಲಿ ವರಮಹಾಲಕ್ಷ್ಮಿ ಹಬ್ಬ(Varamahalakshmi Fest)ದ ಅಂಗವಾಗಿ ಆಯೋಜಿಸಿದ್ದ ‘ಸಂಜೀವಿನಿ ಸಂಭ್ರಮ’ ನೇರ ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸುವ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲು ಈ ಮೇಳ ಉತ್ತಮ ವೇದಿಕೆಯಾಗಿದೆ ಎಂದರು.

ಮೇಳದಲ್ಲಿ ಮಹಿಳಾ ಸಂಘಗಳ ಸದಸ್ಯರು ತಯಾರಿಸಿರುವ ಆಹಾರ ಪದಾರ್ಥಗಳು, ಕರಕುಶಲ ವಸ್ತುಗಳು ಹಾಗೂ ವಿವಿಧ ಗೃಹೋಪಯೋಗಿ ಉತ್ಪನ್ನಗಳನ್ನು ಮಾರಾಟಕ್ಕೆ ಇಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಭೇಟಿ ನೀಡಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರನ್ನು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯ ಸಹಯೋಗದಲ್ಲಿ ಮೇಳ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯವಸ್ಥಾಪಕ (ಕೌಶಲ್ಯ) ಮುನಿರಾಜು, ಪೌರಾಯುಕ್ತ ಅಮೃತಗೌಡ, ಟಿ.ಪಿ.ಎಂ. ವಿಜಯ್ ಕುಮಾರ್, ಬಾಲರಾಜು, ನರಸಿಂಹ, ಅಮರಾವತಿ, ದ್ಯಾವಮ್ಮ, ನಾಗವೇಣಿ ಸೇರಿದಂತೆ ವಿವಿಧ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.