Chikkaballapur News: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೈಜೋಡಿಸುವುದು ನಮ್ಮ ಕರ್ತವ್ಯ: ಜಯಕುಮಾರ್
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅವರ ತ್ಯಾಗ ವನ್ನು ಸ್ಮರಿಸುವುದರ ಜತೆಗೆ, ಶಿಕ್ಷಣದ ಮೂಲಕ ಉತ್ತಮ ಸಮಾಜ ನಿರ್ಮಿಸುವ ಸಂಕಲ್ಪ ಮಾಡಬೇಕು. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ದೊರೆತಾಗ ಮಾತ್ರ ದೇಶದ ಭವಿಷ್ಯ ಮತ್ತಷ್ಟು ಉಜ್ವಲ ವಾಗಲಿದೆ ಎಂದರು
-
ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಮಕ್ಕಳ ಶಿಕ್ಷಣಕ್ಕೆ ಅಗತ್ಯ ನೆರವು ನೀಡುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಮಕ್ಕಳ ಶಿಕ್ಷಣಕ್ಕೆ ಬೆಂಬಲ ನೀಡುವ ಮೂಲಕ ಅವರ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು ಎಂದು ಜೈ ಫೌಂಡೇಶನ್ ಅಧ್ಯಕ್ಷ ಜಯಕುಮಾರ್ ಹೇಳಿದರು.
ನಗರದ 11ನೇ ವಾರ್ಡ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ(80th Independence Day) ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜತೆಗೆ, ಶಿಕ್ಷಣದ ಮೂಲಕ ಉತ್ತಮ ಸಮಾಜ ನಿರ್ಮಿಸುವ ಸಂಕಲ್ಪ ಮಾಡಬೇಕು. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ದೊರೆತಾಗ ಮಾತ್ರ ದೇಶದ ಭವಿಷ್ಯ ಮತ್ತಷ್ಟು ಉಜ್ವಲವಾಗಲಿದೆ ಎಂದರು.
ಶಿಕ್ಷಣದಿಂದ ಮಕ್ಕಳು ಜ್ಞಾನ, ಆತ್ಮವಿಶ್ವಾಸ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಾಧ್ಯ. ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ನೆರವಾಗುವುದು ಜೈ ಫೌಂಡೇಶನ್‌ನ ಪ್ರಮುಖ ಉದ್ದೇಶ ಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜೈ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್, ನೋಟ್ ಬುಕ್, ನೀರಿನ ಬಾಟಲಿ ಹಾಗೂ ಪೆನ್ಸಿಲ್ ಕಿಟ್‌ಗಳನ್ನು ವಿತರಿಸಲಾಯಿತು.
ಶಾಲಾ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಸಹಕಾರಕ್ಕೆ ಧನ್ಯವಾದ ತಿಳಿಸಿದ ಜಯ ಕುಮಾರ್, ಮುಂದಿನ ದಿನಗಳಲ್ಲಿಯೂ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು.