ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Shidlaghatta News: ತಾಲ್ಲೂಕು ಕಚೇರಿಯಲ್ಲಿ ಜಗಜೀವನ ರಾಮ್ ಜಯಂತಿ ಆಚರಣೆ

ಡಾ. ಬಾಬು ಜಗಜೀವನ ರಾಮ್ ಅವರು ದೇಶದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರು ಎಂದು ಹೇಳಿದರು. ಎಲ್ಲಾ ಸಮುದಾಯಗಳ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಸದಾ ಸ್ಮರಣೀಯವಾಗಿದ್ದು, ಅವರ ಆದರ್ಶ ಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

ಶಿಡ್ಲಘಟ್ಟ: ತಾಲ್ಲೂಕು ಕಚೇರಿಯಲ್ಲಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜನ್ಮದಿನಾಚರಣೆಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಸಮಾರಂಭವು ಶಾಂತ ಹಾಗೂ ಗೌರವಪೂರ್ಣವಾಗಿ ನೆರವೇರಿತು.

ಕಾರ್ಯಕ್ರಮವನ್ನು ಶಾಸಕ ಬಿ.ಎನ್. ರವಿಕುಮಾರ್(MLA B.N. Ravikumar) ಉದ್ಘಾಟಿಸಿ ಮಾತನಾಡಿ, ಡಾ. ಬಾಬು ಜಗಜೀವನ ರಾಮ್ ಅವರು ದೇಶದ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರು ಎಂದು ಹೇಳಿದರು. ಎಲ್ಲಾ ಸಮುದಾಯಗಳ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಸದಾ ಸ್ಮರಣೀಯವಾಗಿದ್ದು, ಅವರ ಆದರ್ಶ ಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Shidlaghatta News: ಜನಗಣತಿ ಪ್ರಕ್ರಿಯೆ ಸುಗಮಗೊಳಿಸಲು ಶಿಕ್ಷಕರಿಗೆ ವಿಶೇಷ ತರಬೇತಿ

ತಹಶೀಲ್ದಾರ್ ಗಗನ್ ಸಿಂಧು ಮಾತನಾಡಿ, ಡಾ. ಬಾಬು ಜಗಜೀವನ ರಾಮ್ ಅವರ ಜೀವನ ವು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪ್ರತೀಕವಾಗಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅವರು ಸಲ್ಲಿಸಿದ ಸೇವೆ ಅಮೂಲ್ಯವಾಗಿದೆ. ಅವರ ಆದರ್ಶಗಳನ್ನು ಅನುಸರಿಸುವ ಮೂಲಕ ಸಮಾನತೆಪೂರ್ಣ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರು.

ಈ ಸಂದರ್ಭದಲ್ಲಿ ಪೌರಾಯುಕ್ತೆ ಅಮೃತ ಜಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಹೇಮಾವತಿ ಆರ್, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್, ಮೇಲೂರು ಮಂಜುನಾಥ್, ಬ್ಯಾಂಕ್ ಮುನಿಯಪ್ಪ, ರಾಮಯ್ಯ, ನಾಗ ನರಸಿಂಹ, ಚಲಪತಿ, ಕೆ. ನಾರಾಯಣಸ್ವಾಮಿ, ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮುಖಂಡರು ಉಪಸ್ಥಿತರಿದ್ದರು.