ಚಿಕ್ಕಬಳ್ಳಾಪುರ: ಜೈ ಫೌಂಡೇಶನ್ ಮುಖಾಂತರ ಹಲವಾರು ಸಮಾಜಸೇವಾ ಕಾರ್ಯಗಳನ್ನು ಮಾಡುತ್ತ ಬಂದಿರುವ ಸಂಸ್ಥೆಯ ಅಧ್ಯಕ್ಷ ಜಯಕುಮಾರ್ ಅವರು ತಮ್ಮ ಜನ್ಮದಿನವನ್ನು ಇಂದು ಅರ್ಥಪೂರ್ಣವಾಗಿ ಆಚರಿಸಿಕೊಂಡರು.
ಬೆಳಿಗ್ಗೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ನಂದಿ ಗ್ರಾಮದ ಭೋಗನಂದೀಶ್ವರ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಪ್ರಸಾದ ವಿನಿಯೋಗ ನಂತರ ನಗರದ ಮಿಸ್ಕೀನ್ ಶಾ ಸೈಲಾನಿ ದರ್ಗಾ ಹಾಗೂ ಸಂತ ಕ್ಯಾಥೊಲಿಕ್ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಬಳಿಕ ಜೈ ಭೀಮ್ ಹಾಸ್ಟೆಲ್ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಇದಾದ ನಂತರ ಮಾನಸ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವೃದ್ಧರೊಂದಿಗೆ ಸಮಯ ಕಳೆಯುವ ಮೂಲಕ ಅವರ ಆಶೀರ್ವಾದ ಪಡೆದರು.ಬಳಿಕ ನಗರದ ಜೈ ಫೌಂಡೇಶನ್ ಕಚೇರಿಯಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಜನ್ಮದಿನವನ್ನು ಸರಳವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಯಕುಮಾರ್ ಅವರು,ಚಿಕ್ಕಬಳ್ಳಾಪುರದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಯೇ ಜೈ ಫೌಂಡೇಶನ್‌ನ ಮುಖ್ಯ ಗುರಿಯಾಗಿದೆ.
ಕಳೆದ 15 ವರ್ಷಗಳಿಂದ ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದೇನೆ. ಅಧಿಕಾರ ಅಥವಾ ಬೇರೆ ಆಸೆಗಾಗಿ ಅಲ್ಲ, ನನ್ನ ಆದಾಯದ ಒಂದು ಭಾಗವನ್ನು ಸಮಾಜಕ್ಕೆ ನೀಡುವ ಉದ್ದೇಶದಿಂದ ಈ ಸೇವೆಯನ್ನು ಮಾಡುತ್ತ ಬಂದಿದ್ದೇನೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ನೆರವು ನೀಡಲಾಗುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ಅಗತ್ಯವಿರುವವರಿಗೆ ಸಹಾಯ ಮಾಡಲಾಗುತ್ತಿದೆ ಜೊತೆಗೆ ನಗರದ ಪ್ರಾಚೀನ ನಂದೀಶ್ವರ ಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗಿದೆ ದೇವರ ಕಾರ್ಯದಲ್ಲಿ ತೊಡಗಿದರೆ ದೈವಶಕ್ತಿ ಮತ್ತು ರಕ್ಷಣೆ ನಮ್ಮೊಂದಿಗೆ ಇರುತ್ತದೆ ಎಂದರು.
ಇನ್ನೂ ಎಲ್ಲರಿಗೂ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಕೆರೆಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.ಈ ನಿಟ್ಟಿನಲ್ಲಿ ಜಲ ಸಂಕಲ್ಪ ಅಭಿಯಾನದಡಿ ಕೆರೆಗಳ ಸಂರಕ್ಷಣೆಗೆ ಕೈಹಾಕಲಾಗಿದ್ದು,ಅದರ ಲಾಂಛನವನ್ನು ತಮ್ಮ ಜನ್ಮದಿನದಂದೇ ಬಿಡುಗಡೆ ಗೊಳಿಸಲಾಗಿದೆ. ಈ ಅಭಿಯಾನದಲ್ಲಿ ಸಾರ್ವಜನಿಕರು ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಮಹಾಕಾಳಿ ಬಾಬು,ಅಬ್ದುಲ್ ಕಲಾಂ ಫೌಂಡೇಶನ್ ಅಧ್ಯಕ್ಷ ಎಂ.ಎಂ.ಭಾಷಾ, ಅನಿಲ್, ನಗರಸಭೆ ಮಾಜಿ ಅಧ್ಯಕ್ಷ ಮುನಿಕೃಷ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣ ಮೂರ್ತಿ, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಜೆ.ಸಿ.ವೆಂಕಟರವಣಪ್ಪ, ಟಿಎಪಿಸಿಎಂಎಸ್ ಮಾಜಿ ಉಪಾಧ್ಯಕ್ಷ ಈರಚಿನ್ನಪ್ಪ, ಜಿಯಾವುಲ್ಲಾ, ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಇಮ್ತಿಯಾಜ್ ಪಾಷ, ಡಿವೈನ್ ಸಿಟಿ ಯ ರವೀಂದ್ರ ಜೈ ಫೌಂಡೇಶನ್ ಕಾರ್ಯದರ್ಶಿ ಮುಬಾರಕ್ ಸೇರಿದಂತೆ ನೂರಾರು ಅಭಿಮಾನಿಗಳು ಮತ್ತು ಸ್ನೇಹಿತರು ಜಯಕುಮಾರ್ ಅವರಿಗೆ ಜನ್ಮದಿನದ ಶುಭಾಶಯ ಗಳನ್ನು ತಿಳಿಸಿದರು.