ಚಿಕ್ಕಬಳ್ಳಾಪುರ : ಜೂ12ರಂದು ನಗರದ ಪಂಚಗಿರಿ ಬೋಧನಾ ಪ್ರೌಢ ಶಾಲೆ ಆವರಣದಲ್ಲಿ ವಿಶ್ವ ಬಾಲ ಕಾರ್ಮಿಕ ದಿನಾಚರಣೆ(World Day Against Child Labor) ಆಯೋಜಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಕೂಡ ಏರ್ಪಡಿಸಲಾಗಿದೆ.
ಇದನ್ನೂ ಓದಿ: Chikkaballapur News: ಸಾಮಾಜಿಕ ಸಂಬಂಧಗಳಿಂದಲೇ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ : ಡಾ.ಲೋಕನಾಥ್
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಪಿ. ರಾಮಲಿಂಗೇಗೌಡ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳು ಹಾಗೂ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ರಾದ ಜಿ. ಪ್ರಭು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ ಶಿಲ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸದಸ್ಯ ಕಾರ್ಯದರ್ಶಿ ಗಳಾದ ಶಬಾನಾ ಆಜ್ಮಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಕೆ ವಿ ಅಭಿಲಾಷ್, ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಎಂ. ವೆಂಕಟೇಶ್ ಭಾಗವಹಿಸಲಿದ್ದಾರೆ.