Bidadi Township: ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ರಣಕಹಳೆ; ನಿಖಿಲ್ ನೇತೃತ್ವದಲ್ಲಿ ಪಾದಯಾತ್ರೆ : ಮುಕ್ತ ಮುನಿಯಪ್ಪ
ರೈತರ ಭೂಮಿ ಮತ್ತು ಹಕ್ಕುಗಳ ರಕ್ಷಣೆಯ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧವಾಗಿ ಜೆಡಿಎಸ್ ಇದೀಗ ಸರ್ಕಾರದ ವಿರುದ್ಧ ರಾಜಕೀಯ ಸಮರಕ್ಕೆ ಸಜ್ಜಾಗಿದೆ. ಆ.9ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡ ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ರಣಕಹಳೆ ಮೊಳಗಿಸಿದ್ದು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಭಾನುವಾರ ಬಿಡದಿ ಬೈರಮಂಗಲದಿAದ ಪಾದಯಾತ್ರೆ ನಡೆಯಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಹೇಳಿದರು. -
ಚಿಕ್ಕಬಳ್ಳಾಪುರ: ಜಾತ್ಯಾತೀತ ಜನತಾದಳ(JDS)ದ ರಾಜ್ಯ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ(Nikhil Kumaraswamy) ನೇತೃತ್ವದಲ್ಲಿ ಆ.9ರಂದು ಬೈರಮಂಗಲದ ಬಿಡದಿ ಟೌನ್‌ಶಿಪ್(Bidadi Township)ನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಪಾದಯಾತ್ರೆ ನಡೆಯಲಿದ್ದು, ಆ.11ರಂದು ನಡೆಯಲಿರುವ ಬೃಹತ್ ಬಹಿರಂಗ ಸಭೆಯ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲಕುಂಟಹಳ್ಳಿ ಮುಕ್ತ ಮುನಿಯಪ್ಪ ತಿಳಿಸಿದರು.
ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರೈತರ ಭೂಮಿಗೆ ಕೈಹಾಕುವ ಯಾವುದೇ ಕ್ರಮವನ್ನು ಸಹಿಸುವು ದಿಲ್ಲ. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯೋಜನೆಯ ವಿರುದ್ಧ ಜಿಲ್ಲೆಯ ಜನತೆ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.
ರೈತರ ಭೂಮಿ ಮತ್ತು ಹಕ್ಕುಗಳ ರಕ್ಷಣೆಯ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧವಾಗಿ ಜೆಡಿಎಸ್ ಇದೀಗ ಸರ್ಕಾರದ ವಿರುದ್ಧ ರಾಜಕೀಯ ಸಮರಕ್ಕೆ ಸಜ್ಜಾಗಿದೆ. ಆ.9ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ(H D Devegowda) ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ(H D Kumaraswamy) ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ: Bidadi Township: ಬಿಡದಿ ಟೌನ್‌ಶಿಪ್ ಯೋಜನೆ; ಭೂಸ್ವಾಧೀನಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್
ಬಿಡದಿ ಟೌನ್‌ಶಿಪ್ ಯೋಜನೆಯಿಂದ ರೈತರ ಮೇಲೆ ಉಂಟಾಗಬಹುದಾದ ಪರಿಣಾಮಗಳು ಹಾಗೂ ಭೂಮಿ, ಬದುಕು ಮತ್ತು ಹಕ್ಕುಗಳ ರಕ್ಷಣೆಯ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುವುದು ಎಂದರು.
ಆ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಬಹಿರಂಗ ಸಭೆ ನಡೆಯಲಿದ್ದು, ಈ ಮೂಲಕ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲಾಗುವುದು ಎಂದು ಮುಕ್ತ ಮುನಿಯಪ್ಪ ಹೇಳಿದರು.
ರೈತರ ಪರ ನಡೆಯುತ್ತಿರುವ ಹೋರಾಟಕ್ಕೆ ಜಿಲ್ಲೆಯಿಂದ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಶಾಂತಮೂರ್ತಿ, ಸ್ಟುಡಿಯೋ ಮಂಜುನಾಥ್, ಶ್ರೀರಾಮಣ್ಣ, ಎಂ.ಜಿ.ಮAಜುನಾಥ್, ಹರೀಶ್ ಗೌಡ, ಕೆ.ಮಂಜುನಾಥ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.