ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ಶಿಡ್ಲಘಟ್ಟದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಎಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ

ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಕಾರ್ಯಕರ್ತರು, ಆಸ್ಪತ್ರೆಯ ಒಳ ಹಾಗೂ ಹೊರರೋಗಿ ಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿ, ಕುಮಾರಣ್ಣ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಕಷ್ಟವನ್ನರಿತು ರೈತರ ಸಾಲ ಮನ್ನಾ ಮಾಡಿದ ಧೀಮಂತ ನಾಯಕ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಮಗೆ ತುಂಬಾ ಹೆಮ್ಮೆಯಾಗಿದೆ. ಅವರು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ ಮೂರನೇ ಬಾರಿ 2028ಕ್ಕೆ ಮುಖ್ಯಮಂತ್ರಿಯಾಗಲಿ ಎಂದು ಹರ್ಷ ವ್ಯಕ್ತ ಪಡಿಸಿದರು

ಶಿಡ್ಲಘಟ್ಟ : ರಾಜ್ಯ ರೈತರ ಅಭಿವೃದ್ಧಿಗೆ ದುಡಿಯುತ್ತಿರುವ ನಮ್ಮ ನಾಯಕರಾದ ಎಚ್.ಡಿ ಕುಮಾರಸ್ವಾಮಿ(HD Kumaraswamy) ಅವರ ಹುಟ್ಟುಹಬ್ಬ ಆಚರಿಸುವುದು ನಮ್ಮೆಲ್ಲರ ಕರ್ತವ್ಯ. ಎಚ್ಡಿಕೆ ಅವರಿಗೆ ದೇವರು ಶಕ್ತಿ ನೀಡಿ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ನೋಡಲು ರಾಜ್ಯದ ಜನತೆ ಕಾತುರರಾಗಿದ್ದಾರೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬಿಎನ್ ರವಿಕುಮಾರ್ ಅವರು ಮಂತ್ರಿ ಆಗೋದು ಖಚಿತ ಎಂದು ಜೆಡಿಎಸ್ ಮುಖಂಡ ನಂದ ಕಿಶನ್ ವಿಶ್ವಾಸ ವ್ಯಕ್ತಪಡಿಸಿದರು

ನಗರದ ಆಶಾಕಿರಣ ಅಂಧ ಮಕ್ಕಳಿಂದ ಕೇಕ್ ಕತ್ತರಿಸಿ ಮಕ್ಕಳಿಗೆ ಕೇಕ್ ತಿನ್ನಿಸಿ ಸಿಹಿ ಹಂಚಿ, ಅವರ ಶಿಕ್ಷಣ ಹಾಗೂ ಭವಿಷ್ಯಕ್ಕೆ ಶುಭ ಹಾರೈಸಿದರು. 

ನಂತರ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಕಾರ್ಯಕರ್ತರು, ಆಸ್ಪತ್ರೆಯ ಒಳ ಹಾಗೂ ಹೊರರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿ, ಕುಮಾರಣ್ಣ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಕಷ್ಟವನ್ನರಿತು ರೈತರ ಸಾಲ ಮನ್ನಾ ಮಾಡಿದ ಧೀಮಂತ ನಾಯಕ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಮಗೆ ತುಂಬಾ ಹೆಮ್ಮೆಯಾಗಿದೆ. ಅವರು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ ಮೂರನೇ ಬಾರಿ 2028ಕ್ಕೆ ಮುಖ್ಯಮಂತ್ರಿಯಾಗಲಿ ಎಂದು ಹರ್ಷ ವ್ಯಕ್ತ ಪಡಿಸಿದರು. 

ಇದನ್ನೂ ಓದಿ: Shidlaghatta News: ರಥೋತ್ಸವದಂತಹ ಧಾರ್ಮಿಕ ಆಚರಣೆಗಳು ಗ್ರಾಮೀಣರಲ್ಲಿ ಒಗ್ಗಟ್ಟಿಗೆ ಕಾರಣವಾಗಲಿದೆ : ಕಾಂಗ್ರೆಸ್ ಮುಖಂಡ ರಾಜೀವ್ ಗೌಡ

ಜೆಡಿಎಸ್ ಯುವ ಮುಖಂಡ ಎಸ್ ಎಂ ರಮೇಶ್ ಮಾತನಾಡಿ ಮಾಜಿ ಮುಖ್ಯಮಂತ್ರಿ ಹಾಗೂ ದೇಶದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆಡಳಿತಾವಧಿ ಯಲ್ಲಿ ಜನಪರ ಕಾರ್ಯಕ್ರಮಗಳು, ರೈತಪರ ನಿಲುವುಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿ, ರಾಜ್ಯಕ್ಕೆ ಮತ್ತೊಮ್ಮೆ ಸಮರ್ಥ ನಾಯಕತ್ವ ಅಗತ್ಯವಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗಬೇಕೆಂಬ ದೃಢ ಸಂಕಲ್ಪ ವನ್ನು ಹೊಂದಿದ್ದೇವೆ ಎಂದು ಹೇಳಿದ್ದರು.

ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ವೆಂಕಟಸ್ವಾಮಿ, ಜೆಡಿಎಸ್ ಮುಖಂಡರಾದ ಬಿ ನಾರಾಯಣಸ್ವಾಮಿ, ಚಿನ್ನಿ,ಹನುಮಂತಪುರ ವಿಜಿ, ಲಕ್ಷ್ಮಿನಾರಾಯಣ (ಲಚ್ಚಿ), ಶ್ರೀನಾಥ್, ಮಂಜುನಾಥ್ , ಬಾಲಕೃಷ್ಣ,ಕುಮಾರ್, ಮನೋಹರ್,ಮಧು,ದೀಪು,

ಹಾಗೂ ಜೆಡಿಎಸ್ ಕಾರ್ಯಕರ್ತರು,ಮುಖಂಡರು ಮತ್ತು ಕುಮಾರಸ್ವಾಮಿ ಅಭಿಮಾನಿಗಳು ಹಾಜರಿದ್ದರು.