ಚಿಂತಾಮಣಿ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್ಡಿಎ(NDA) ಅಭ್ಯರ್ಥಿ ಕೆ.ಎಂ.ಸುರೇಶ್(K M Suresh) ಪರ ಮಾಜಿ ಶಾಸಕ ಹಾಗೂ ಜೆಡಿಎಸ್(JDS) ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ(J K Krishna Reddy) ಅವರು ಚಿಂತಾಮಣಿ ನ್ಯಾಯಾಲಯದಲ್ಲಿ ವಕೀಲರನ್ನು ಭೇಟಿ ಮಾಡಿ ಬೆಂಬಲ ಕೋರಿದರು.
ಜೆಡಿಎಸ್ ಮತ್ತು ಬಿಜೆಪಿ(BJP) ಕಾರ್ಯಕರ್ತರೊಂದಿಗೆ ನ್ಯಾಯಾಲಯಕ್ಕೆ ಭೇಟಿ ನೀಡಿದ ಅವರು, ವಕೀಲ ರೊಂದಿಗೆ ಚರ್ಚಿಸಿ ಅಭ್ಯರ್ಥಿಯ ಪರ ಮತಯಾಚನೆ ಮಾಡಿದರು.
ಇದನ್ನೂ ಓದಿ: Chikkaballapur News: ಜೈನ್ ಮಿಷನ್ ಆಸ್ಪತ್ರೆಯಲ್ಲಿ ಜಿಲ್ಲೆಯ ಮೊದಲ ಸರ್ಜಿಕಲ್ ತೀವ್ರ ನಿಗಾ ಘಟಕ ಆರಂಭ
ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣಾರೆಡ್ಡಿ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕಾಗಿ 20 ಎಕರೆ ಜಮೀನು ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಜಮೀನು ಲಭ್ಯವಾಗಿರಲಿಲ್ಲ. ಇದೀಗ 15 ಎಕರೆ ಜಮೀನು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚಿನ ಅವಕಾಶಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ಮಂಜುನಾಥ್ ರೆಡ್ಡಿ, ಹಿರಿಯ ವಕೀಲ ಶ್ರೀನಾಥ್, ವಕೀಲರಾದ ರಾಜಾರಾಂ, ನಾ. ಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.