ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Chikkaballapur News: ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ

ಬಾಲ್ಯ ವಿವಾಹ ಕೇವಲ ಕಾನೂನುಬಾಹಿರ ಕೃತ್ಯವಲ್ಲ. ಅದು ಮಕ್ಕಳ ದೈಹಿಕ, ಮಾನಸಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗುತ್ತದೆ. ಚಿಕ್ಕ ವಯಸ್ಸಿನಲ್ಲೇ ವಿವಾಹ ಬಂಧನಕ್ಕೆ ಒಳಗಾಗುವ ಮಕ್ಕಳು ತಮ್ಮ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಕನಸುಗಳನ್ನು ಕಳೆದುಕೊಳ್ಳುವ ಅಪಾಯ ವಿದೆ. ಹೀಗಾಗಿ ಪೋಷಕರು, ಸಾರ್ವಜನಿಕರು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಪ್ರತಿಯೊಬ್ಬರೂ ಬಾಲ್ಯ ವಿವಾಹ ತಡೆಗೆ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು

ಚಿಕ್ಕಬಳ್ಳಾಪುರ: ಬಾಲ್ಯ ವಿವಾಹ ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಮಕ್ಕಳ ಭವಿಷ್ಯ, ಶಿಕ್ಷಣ ಮತ್ತು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನವನ್ನು ಯಶಸ್ವಿಗೊಳಿಸುವುದು ಸಮಾಜದ ಪ್ರತಿಯೊಬ್ಬರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಪಿ.ರಾಮಲಿಂಗೇಗೌಡ ಹೇಳಿದರು.

ನಗರದ ಶಾಂತನಿಕೇತನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 'ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ'ಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ: Chinthamani News: ಕಾಸಾಪ ಏಕಪಕ್ಷೀಯ ನಿರ್ಧಾರಕ್ಕೆ ಆಕ್ರೋಶ; ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸಮ್ಮೇಳನ ಆಯೋಜನೆ ಆರೋಪ

ಬಾಲ್ಯ ವಿವಾಹ ಕೇವಲ ಕಾನೂನುಬಾಹಿರ ಕೃತ್ಯವಲ್ಲ. ಅದು ಮಕ್ಕಳ ದೈಹಿಕ, ಮಾನಸಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗುತ್ತದೆ. ಚಿಕ್ಕ ವಯಸ್ಸಿನಲ್ಲೇ ವಿವಾಹ ಬಂಧನಕ್ಕೆ ಒಳಗಾಗುವ ಮಕ್ಕಳು ತಮ್ಮ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಕನಸುಗಳನ್ನು ಕಳೆದುಕೊಳ್ಳುವ ಅಪಾಯ ವಿದೆ. ಹೀಗಾಗಿ ಪೋಷಕರು, ಸಾರ್ವಜನಿಕರು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಪ್ರತಿಯೊಬ್ಬರೂ ಬಾಲ್ಯ ವಿವಾಹ ತಡೆಗೆ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ ಸೇರಿದಂತೆ ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕ ಅರಿವು ಮೂಡಿಸಬೇಕು. ಎಲ್ಲಿಯಾದರೂ ಬಾಲ್ಯ ವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

1620545

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ತಮ್ಮ ಸುತ್ತಮುತ್ತ ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿ ಕಂಡುಬಂದರೆ ಧೈರ್ಯವಾಗಿ ವಿರೋಧಿಸಿ, ಸಮಾಜದಲ್ಲಿ ಜಾಗೃತಿ ಮೂಡಿಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ. ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ, ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಅನಗತ್ಯ ಮೊಬೈಲ್ ಬಳಕೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಅವರು, ಮೊಬೈಲ್ ಅನ್ನು ಅಗತ್ಯಕ್ಕೆ ಮಾತ್ರ ಬಳಸಬೇಕು. ಅನಗತ್ಯ ವಿಚಾರಗಳಿಗೆ ಮೊಬೈಲ್ ಗೀಳಿಗೆ ಒಳಗಾಗದೆ ವಿದ್ಯಾಭ್ಯಾಸದತ್ತ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ, ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಅಭಿಲಾಷ್, ಶಿಕ್ಷಣ ಇಲಾಖೆ ಹಾಗೂ ಶಾಂತನಿಕೇತನ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಭಾರತಿ ಶ್ರೀನಿವಾಸ್, ವಕೀಲರ ಸಂಘದ ಕಾರ್ಯದರ್ಶಿ ಟಿ.ಎಂ. ವೆಂಕಟೇಶ್, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.