ಚಿಕ್ಕಬಳ್ಳಾಪು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಒಕ್ಕಲಿಗರ ಸಂಘ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯನ್ನು ಜೂ.27ರಂದು ಬೆಳಗ್ಗೆ 11.30 ಗಂಟೆಗೆ ನಗರದ ಕನ್ನಡ ಭವನದಲ್ಲಿ ಆಯೋಜಿಸ ಲಾಗಿದೆ.
ಮೆರವಣಿಗೆ ಕಾರ್ಯಕ್ರಮವು ಬೆಳಿಗ್ಗೆ 10 ಗಂಟೆಗೆ ಶ್ರೀ ಕೆಂಪೇಗೌಡ ರವರ ಪಲ್ಲಕ್ಕಿ ಹಾಗೂ ಜಾನಪದ ಕಲಾ ತಂಡಗಳೊಂದಿಗೆ ವಾಪಸಂದ್ರ ಶ್ರೀ ರಂಗನಾಥಸ್ವಾಮಿ ದೇವಾಲಯ ಮುಂಭಾಗದಿಂದ ಕನ್ನಡ ಭವನದವರೆಗೆ ಮೆರವಣಿಗೆ ನಡೆಯಲಿದೆ.
ಆದಿಚುಂಚನಗಿರಿ ಶ್ರೀಕ್ಷೇತ್ರ, ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿ ಯವರ ದಿವ್ಯ ಸಾನಿದ್ಯದಲ್ಲಿ ನೆರವೇರಲಿದೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್(Pradeep Eshwar) ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್(Dr K Sudhakar), ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಂ. ಮಲ್ಲೇಶ್ ಬಾಬು, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್ ಸಂಪಂಗಿ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಡಾ. ಬಿ.ಸಿ. ಮುದ್ದು ಗಂಗಾಧರ್, ಕರ್ನಾಟಕ ರಾಜ್ಯ ಬೀಜ ನಿಗಮ ಅಧ್ಯಕ್ಷ ಆಂಜಿನಪ್ಪ, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾ ಮಂಡಳಿಯ ಅಧ್ಯಕ್ಷ ಬಿ.ಜೆ. ಗಣೇಶ್, ಶಾಸಕರುಗಳಾದ ಡಾ. ಎಂ.ಸಿ. ಸುಧಾಕರ್(Dr M C Sudhakar), ಎಸ್. ಎನ್.ಸುಬ್ಬಾರೆಡ್ಡಿ(S N Subbareddy), ಬಿ.ಎನ್. ರವಿಕುಮಾರ್(B N Ravikumar), ಕೆ. ಹೆಚ್. ಪುಟ್ಟಸ್ವಾಮಿಗೌಡ(K H PuttaswamyGowda), ವಿಧಾನ ಪರಿಷತ್ ಶಾಸಕರುಗಳಾದ ಚಿದಾನಂದ ಎಂ ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಡಾ.ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್. ಶಿವಶಂಕರ್ ರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವ ರೆಡ್ಡಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೋನಪ್ಪರೆಡ್ಡಿ ಮತ್ತು ಡಾ.ರಮೇಶ್ ರವರು ಭಾಗವಹಿಸಲಿದ್ದಾರೆ. ಉಪನ್ಯಾಸವನ್ನು ಸಾಹಿತಿಗಳಾದ ಗೋಪಾಲಗೌಡ ಕಲ್ವಮಂಜಲಿ ಅವರು ನೀಡಲಿದ್ದಾರೆ.
ಜಿಲ್ಲೆ ಮತ್ತು ತಾಲ್ಲೂಕು ಒಕ್ಕಲಿಗರ ಸಂಘದ ಎಲ್ಲಾ ಪದಾಧಿಕಾರಿಗಳು, ಸರ್ಕಾರಿ ನೌಕರರ ಸಂಘ, ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಮಸ್ತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸ ಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.