ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಐದು ಲಕ್ಷ ಸಸಿಗಳನ್ನು ನೆಡುವ ಸಂಬಂಧ ಹೈಕೋರ್ಟ್ ನ್ಯಾ.ಹಂಚಾಟೆ ಸಂಜೀವಕುಮಾರ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಲ್ಲಾ ನ್ಯಾಯಾಲಯ ದಲ್ಲಿ ಸಭೆ ನಡೆಯಿತು.
ಜಿಲ್ಲೆಯ ಎಲ್ಲಾ ಕೈಗಾರಿಕೆಗಳ ವ್ಯವಸ್ಥಾಪಕರು, ಬ್ಯಾಂಕುಗಳ ವ್ಯವಸ್ಥಾಪಕರು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಸಮಾಜ ಸೇವಕರು, ಕಾರ್ಮಿಕ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡು ಅಭಿಪ್ರಾಯ ಹಂಚಿಕೊಂಡರು.
ಇದನ್ನೂ ಓದಿ:Chinthamani News: ಟೊಮೇಟೊ ತೋಟದ ಪೈಪ್‌ಗಳನ್ನು ಕತ್ತರಿಸಿ ಲಕ್ಷಾಂತರ ರೂ. ನಷ್ಟ: ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು
ಈ ವೇಳೆ ಮಾತನಾಡಿ ಜಿಲ್ಲೆಯಾದ್ಯಂತ 5 ಲಕ್ಷ ಗಿಡಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯಿಂದ ಜಿಲ್ಲೆಯಲ್ಲಿ ಉತ್ತಮ ಹಾಗೂ ಅಂತರ್ಜಲ ವೃದ್ಧಿ ಆಗುತ್ತದೆ. ಪರಿಸರ ಕಾಳಜಿ ಯುಳ್ಳ ಎಲ್ಲರೂ ಕೈ ಜೋಡಿಸಬೇಕು. ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ, ಜಿಲ್ಲೆಯ ನ್ಯಾಯಾಧೀಶರು, ವಕೀಲರು ಸಂಘದ ಅಧ್ಯಕ್ಷ ಕೆ.ವಿ.ಅಭಿಲಾಷ್ ಸಭೆಯಲ್ಲಿದ್ದರು.