Chikkaballapur News: ಕೈವಾರ ತಾತಯ್ಯನವರು ಸಮಾಜ ಸುಧಾರಕರಾಗಿದ್ದರು: ತಹಸೀಲ್ದಾರ್ ಸುದರ್ಶನ್ ಯಾದವ್
ಪ್ರಪಂಚದಲ್ಲಿಯೇ ಮುಂದೊಂದು ದಿನ ನಡೆಯಬಹು ದಾದ ಪಾಪ ಕೃತ್ಯಗಳ ಪ್ರಾಬಲ್ಯ, ಪ್ರಳಯ ಸಂಪತ್ತಿನ ವಿನಾಶ, ಘೋರ ವೈಪರಿತ್ಯಗಳು, ಭ್ರಷ್ಟಾಚಾರ, ದೌರ್ಜನ್ಯ, ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ನಡೆಯುವ ಅನ್ಯಾಯದ ಘಟನೆಗಳನ್ನು ಶ್ರೀ ಯೋಗಿ ನಾರೇ ಯಣ ಯತೀಂದ್ರ ಅವರು ಕಾಲಜ್ಞಾನದಲ್ಲಿ ತಿಳಿಸಿದ್ದಾರೆ


ಚಿಂತಾಮಣಿ: ಕೈವಾರ ತಾತಯ್ಯನವರು ಸಮಾಜ ಸುಧಾರಕರಾಗಿದ್ದು,ಅವರು ತೋರಿದ ಮಾರ್ಗದಲ್ಲಿ ಪ್ರತಿಯೊಬ್ಬರೂ ಸಾಗಬೇಕಿದೆ.ಅವರು ರಚಿಸಿದ ಕಾಲಜ್ಞಾನದಲ್ಲಿ ಜಗತ್ತು ಅರಿಯಬೇಕಾದ ಅನೇಕ ಅಂಶಗಳಿವೆ.ಅವರ ತತ್ವ,ತೋರಿದ ಮಾರ್ಗದರ್ಶನ ಪಾಲಿಸಿದರೆ ಎಲ್ಲೆಡೆ ಶಾಂತಿ ನೆಲೆಸುವುದರಲ್ಲಿ ಸಂಶಯವಿಲ್ಲ ಎಂದು ತಹಶೀಲ್ದಾರ ಸುದರ್ಶನ್ ಯಾದ ವ್ ಹೇಳಿದರು.
ಚಿಂತಾಮಣಿ ನಗರದ ಶ್ರೀ ನಾಗನಾಥೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಬಲಜಿಗ ಜನಾಂಗ,ತಾಲ್ಲೂಕು ಆಡಳಿತ, ಇವರ ವತಿಯಿಂದ ಆಯೋಜಿಸಲಾಗಿದ್ದ ಕೈವಾರ ತಾತಯ್ಯ ನವರ 299ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು ಕೈವಾರ ತಾತಯ್ಯ ಎಂದೇ ಪ್ರಸಿದ್ಧಿಯಾಗಿರುವ ಶ್ರೀ ಯೋಗಿ ನಾರೇಯಣ ಯತಿಂದ್ರ ಅವರು ಪದ್ಯ, ಕೀರ್ತನೆ ಹಾಗೂ ಸ್ತೋತ್ರಗಳ ಮೂಲಕ ಸಾಹಿತ್ಯ ರೂಪದಲ್ಲಿ ಜನತೆಗೆ ತಿಳಿಸಿ ಕೊಟ್ಟ ಮಹಾನ್ ಯೋಗಿ. ಪ್ರಪಂಚದಲ್ಲಿಯೇ ಮುಂದೊಂದು ದಿನ ನಡೆಯಬಹುದಾದ ಪಾಪ ಕೃತ್ಯಗಳ ಪ್ರಾಬಲ್ಯ, ಪ್ರಳಯ ಸಂಪತ್ತಿನ ವಿನಾಶ, ಘೋರ ವೈಪರಿತ್ಯಗಳು, ಭ್ರಷ್ಟಾ ಚಾರ, ದೌರ್ಜನ್ಯ, ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ನಡೆಯುವ ಅನ್ಯಾ ಯದ ಘಟನೆಗಳನ್ನು ಶ್ರೀ ಯೋಗಿ ನಾರೇಯಣ ಯತೀಂದ್ರ ಅವರು ಕಾಲಜ್ಞಾನದಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಅನೇಕ ಪವಾಡಗಳನ್ನು ಮಾಡಿದ್ದಾರೆ ಎಂದು ಸ್ಮರಿಸಿ ದರು.
ಇನ್ನು ಇದೇ ವೇಳೆ ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚಿನ ಅಂಕಗಳಿಸಿದ್ದ ಬಲಿಜ ಜನಾಂಗದ ವಿದ್ಯಾರ್ಥಿಗಳಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬಲಿಜ ಜನಾಂಗದ ತಾಲ್ಲೂಕ್ ಅಧ್ಯಕ್ಷರಾದ ಮುರುಗಮಲ್ಲ ಲಕ್ಷ್ಮೀ ನಾರಾಯಣರೆಡ್ಡಿ, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ್, ಕುಂಟಿ ಗಡ್ಡ ಲಕ್ಷ್ಮಣ್,ಶಿವಣ್ಣ,ವಿ ಕೃಷ್ಣಪ್ಪ,ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಅಶೋಕ್ ರೆಡ್ಡಿ, ನಗರಸಭಾ ಅಧ್ಯಕ್ಷರಾದ ಜಗನ್ನಾಥ್,ನಗರಸಭಾ ಸದಸ್ಯರಾದ ರಾಜಾ ಚಾರಿ, ಕಲಾವತಿ ಅಂಜಪ್ಪ,ಆರ್ ಎಂ ಜಿ ಶ್ರೀನಿವಾಸ್, ಕಾಗತಿ ಅಶ್ವತಪ್ಪ, ಮಧು, ಶ್ರೀನಿ ವಾಸ್ ಸೇರಿದಂತೆ ಮತ್ತಿತರರು ಇದ್ದರು.