ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕೈವಾರ-ಹುಲಗುಮ್ಮನಹಳ್ಳಿ ರಸ್ತೆ ಅಭಿವೃದ್ಧಿಗೆ ಚಾಲನೆ: 56 ಲಕ್ಷದ ಕಾಮಗಾರಿಗೆ ಸಚಿವ ಡಾ.ಎಂ.ಸಿ.ಸುಧಾಕರ್ ಗುದ್ದಲಿ ಪೂಜೆ

ಸುಮಾರು 56 ಲಕ್ಷಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವರು ಶಾಸ್ತ್ರೋಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮಸ್ಥರ ಬಹುದಿನಗಳ ಬೇಡಿಕೆ ಯಾಗಿದ್ದ ಈ ರಸ್ತೆ ಕಾಮಗಾರಿಯು ಈಗ ಸಾಕಾರಗೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಯೇ ನಮ್ಮ ಆದ್ಯತೆ

ತಾಲೂಕಿನ ಕೈವಾರದಿಂದ ಹುಲಗುಮ್ಮನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಚಾಲನೆ ನೀಡಿದರು. -

Profile
Ashok Nayak May 9, 2026 10:28 PM

ಚಿಂತಾಮಣಿ: ತಾಲೂಕಿನ ಕೈವಾರದಿಂದ ಹುಲಗುಮ್ಮನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್(District In-charge and Higher Education Minister Dr. M.C. Sudhakar) ಚಾಲನೆ ನೀಡಿದರು.

ಸುಮಾರು 56 ಲಕ್ಷಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವರು ಶಾಸ್ತ್ರೋಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಈ ರಸ್ತೆ ಕಾಮಗಾರಿಯು ಈಗ ಸಾಕಾರಗೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಇದನ್ನೂ ಓದಿ: Chinthamani News: ಕಾಗತಿ ಗ್ರಾಮದಲ್ಲಿ ರೈತರಿಗೆ ಒಂದು ದಿನದ ತೋಟಗಾರಿಕೆ ತರಬೇತಿ ಕಾರ್ಯಕ್ರಮ

ನಂತರ ನಡೆದ ಸಭೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ರೈತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಂದ ವಿವಿಧ ಬೇಡಿಕೆಗಳ ಮನವಿಗಳನ್ನು ಸ್ವೀಕರಿಸಿ, ಅವುಗಳನ್ನು ಹಂತ ಹಂತವಾಗಿ ಈಡೇರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಮುನಿ ನಾರಾಯಣಪ್ಪ, ಸಂತೇಕಲ್ಲಹಳ್ಳಿ ಮಹೇಶ್, ಶ್ರೀನಿವಾಸ್, ಚಿನ್ನಪ್ಪ, ಬಾಲರಾಜು, ಮಾಜಿ ಗ್ರಾಮ ಪಂಚಾ ಯತಿ ಸದಸ್ಯರಾದ ಮೌಲಾ, ದೇವರಾಜ್, ಸೇರಿದಂತೆ ಮತ್ತಿತರರು ಇದ್ದರು.