ಚಿಂತಾಮಣಿ: ಚಿಂತಾಮಣಿಯ ಶಾಸಕ ಡಾ.ಎಂ.ಸಿ.ಸುಧಾಕರ್(Chintamani MLA Dr. M.C. Sudhakar) ಸಚಿವ ಸ್ಥಾನ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಖಂಡ ಜಮೀರ್ ಅಹ್ಮದ್ ಖಾನ್(Zameer Ahmed Khan) ಅವರನ್ನು ಉಪಮುಖ್ಯಮಂತ್ರಿ(Deputy Chief Minister) ಮಾಡಬೇಕು ಎಂದು ಕೈವಾರದಲ್ಲಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಹೈಕಮಾಂಡನ್ನು ಆಗ್ರಹಿಸಿದರು.
ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೈವಾರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಚಿಂತಾ ಮಣಿ ಕ್ಷೇತ್ರದ ಶಾಸಕರಾದ ಡಾ.ಎಂ.ಸಿ. ಸುಧಾಕರ್, ಹಾಗೂ ಹಿರಿಯ ಮುಖಂಡರು ಹಾಲಿ ಶಾಸಕ ರಾದ ಬಿ.ಜೆಡ್.ಜಮೀರ್ ಅಹಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಹೈಕಮಾಂಡ್ ಗೆ ಒತ್ತಾಯಿಸಿದರು.
ಇದನ್ನೂ ಓದಿ: Zameer Ahmed Khan: ಜಮೀರ್ ಅಹಮದ್ ಖಾನ್ʼಗೆ ಡಿಸಿಎಂ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಷ್ಟ
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಅಬ್ದುಲ್ ಸಮ್ಮದ್ ಹಾಗೂ ಮಂಜುನಾಥ್ ರೆಡ್ಡಿ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಎಂ.ಸಿ.ಸುಧಾಕರ್ ಅವರು ಜನಪ್ರಿಯ ನಾಯಕ ರಾಗಿದ್ದು, ಈ ಭಾಗದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಿರುವ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದರು.
ಅದೇ ರೀತಿ, ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾಗಿರುವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರು ಇಡೀ ರಾಜ್ಯಾದ್ಯಂತ ಸಂಚರಿಸಿ, ಪಕ್ಷದ ಪರವಾಗಿ ಭರ್ಜರಿ ಪ್ರಚಾರ ನಡೆಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತ,ಎಂದು ಹಕ್ಕೊತ್ತಾಯ ಮಾಡಿದರು.
ಇದೇ ಸಂದರ್ಭದಲ್ಲಿ ನೆರೆದಿದ್ದ ಮುಖಂಡರು ಡಾ.ಎಂ.ಸಿ.ಸುಧಾಕರ್ ಮತ್ತು ಜಮೀರ್ ಅಹಮದ್ ಖಾನ್ ಅವರ ಭಾವಚಿತ್ರವಿರುವ ಫಲಕಗಳನ್ನು ಪ್ರದರ್ಶಿಸಿ,ನಾಯಕರ ಪರವಾಗಿ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಬಾಬು ಕೆಎನ್,ರವಿ,ಸೈಯದ್ ಅಫ್ಸರ್, ಮುಖಂಡರಾದ ಸೈಯದ್ ಮುಜಾಹಿದ್, ಸೈಯದ್ ಅಮ್ಜದ್, ಅಸ್ಲಾಂ ಪಿಟ್ಟು, ಷಾ ಜಹಾನ್, ಜಬೀ, ಆಸೀಫ್, ನಯಾಜ್, ಆಯಾಜ್, ಅಮೀನ್, ಸೈಯದ್ ತಬರೇಜ್, ಸೇಟು, ಫೈರೋಜ್, ರಿಜ್ವಾನ್, ಶೇಕ್ ನೂರು, ಮುನೀರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.