ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bagepalli MLA SN Subba Reddy: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆಯಾಗಿದ್ದರು. ಆದರೆ, ಚುನಾವಣೆ ವೇಳೆ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟು, ಸುಳ್ಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌ ಕಾಂಗ್ರೆಸ್‌ ಶಾಸಕನ ಆಯ್ಕೆ ಅಸಿಂಧುಗೊಳಿಸಿದೆ.

ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ. -

Prabhakara R
Prabhakara R Feb 16, 2026 3:28 PM

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ (Bagepalli MLA SN Subba Reddy) ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಶಾಸಕರ ಆಯ್ಕೆ ಅಸಿಂಧು ಕೋರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ.ಮುನಿರಾಜು ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಪೀಠವು, ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆಯಾಗಿದ್ದರು. ಆದರೆ, ಚುನಾವಣೆ ವೇಳೆ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ವಿವರಗಳನ್ನು ಮುಚ್ಚಿಟ್ಟು, ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅಲ್ಲೇ ತೆರಿಗೆ ಪಾವತಿ ಬಾಕಿ ಮಾಹಿತಿಯನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಸಿ. ಮುನಿರಾಜು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಜಾಗೊಳಿಸಲು ಎಸ್‌.ಎನ್‌. ಸುಬ್ಬಾರೆಡ್ಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಆದರೆ, ಇದೀಗ ಎಸ್.ಎನ್ ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿಸಿದೆ.

ಇನ್ನು, ಇದೇ ವೇಳೆ ಪರಾಜಿತ ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಅವರು ತಮ್ಮನ್ನು ವಿಜಯಿ ಅಭ್ಯರ್ಥಿ ಎಂದು ಘೋಷಿಸಲು ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಆದರೆ ನ್ಯಾಯಾಲಯವು ಇದಕ್ಕೆ ನಿರಾಕರಿಸಿದೆ. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಆದೇಶ ಪ್ರಕಟ ಮಾಡಿದ ಬಳಿಕ ಹೈಕೋರ್ಟ್‌ನಿಂದ ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೆ ನೋಟಿಸ್ ನೀಡಲಾಗಿದೆ.

ಶಬರಿಮಲೆಗೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರ; ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ವಿಚಾರಣೆ

ಈ ವೇಳೆ ಸುಬ್ಬಾರೆಡ್ಡಿ ಪರ ವಕೀಲರು ಒಂದು ತಿಂಗಳ ಕಾಲ ಆದೇಶ ಅಮಾನತಿನಲ್ಲಿಡಿ ಎಂದು ಮನವಿ ಮಾಡಿದರು. ಆದರೆ ಕೋರ್ಟ್ ಆದೇಶ ಅಮಾನತಿನಲ್ಲಿಡಲು ಅಸಮ್ಮತಿ ವ್ಯಕ್ತಪಡಿಸಿದೆ.