Gudibande News: ಸಾಗುವಳಿ ಚೀಟಿಗಾಗಿ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಪ್ರತಿಭಟನೆ
ಭೂಮಿಯ ಹಕ್ಕು ಕೋರಿ ನಮೂನೆ 50, 53 ಮತ್ತು 57ರ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರೂ, ಸರ್ಕಾರ ವರ್ಷಗಳಿಂದ ಅವುಗಳನ್ನು ಇತ್ಯರ್ಥಪಡಿಸದೆ ನೆನೆಗುದಿಗೆ ಇಟ್ಟಿದೆ. ನಮೂನೆ 57 ರ ಅಡಿಯಲ್ಲಿ ಅರ್ಜಿಗಳನ್ನು ಪಡೆದ ನಂತರ ಸಂಬಂಧಪಟ್ಟ ಇಲಾಖೆಯು ಯಾವುದೇ ಸಭೆಗಳನ್ನು ನಡೆಸುತ್ತಿಲ್ಲ. ಅಧಿಕಾರಿಗಳು ರೈತರ ಪರವಾಗಿ ನಿಲ್ಲುತ್ತಿಲ್ಲ ಎಂದು ಆರೋಪಿಸಿದರು.
ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಭೂಮಿಯನ್ನು ರೈತರಿಗೆ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ವತಿಯಿಂದ ತಹಸೀಲ್ದಾರ್ʼಅವರಿಗೆ ಮನವಿ ಪತ್ರ ಸಲ್ಲಿಸಿದರು. -
ಗುಡಿಬಂಡೆ: ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಭೂಮಿಯನ್ನು ರೈತರಿಗೆ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಸಾರಥ್ಯದಲ್ಲಿ ಬಗರ್ ಹುಕುಂ ಸಾಗುವಳಿದಾರರು ಪಟ್ಟಣದ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಯವರೆಗೆ ಮೆರವಣಿಗೆ ನಡೆಸಿ ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಕರ್ನಾಟಕ ಭೂ ಹಕ್ಕುದಾರರ ವೇದಿಕೆಯ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರೈತರು ಕಳೆದ 30-40 ವರ್ಷಗಳಿಂದ ಜೀವನೋಪಾಯಕ್ಕಾಗಿ ಸರ್ಕಾರಿ ಭೂಮಿಯನ್ನು ನಂಬಿಕೊಂಡು ಸಾಗುವಳಿ ಮಾಡುತ್ತಿದ್ದಾರೆ. ಭೂಮಿಯ ಹಕ್ಕು ಕೋರಿ ನಮೂನೆ 50, 53 ಮತ್ತು 57 ರ ಅಡಿಯಲ್ಲಿ ಅರ್ಜಿ ಗಳನ್ನು ಸಲ್ಲಿಸಿದ್ದರೂ, ಸರ್ಕಾರ ವರ್ಷಗಳಿಂದ ಅವುಗಳನ್ನು ಇತ್ಯರ್ಥಪಡಿಸದೆ ನೆನೆಗುದಿಗೆ ಇಟ್ಟಿದೆ. ನಮೂನೆ 57 ರ ಅಡಿಯಲ್ಲಿ ಅರ್ಜಿಗಳನ್ನು ಪಡೆದ ನಂತರ ಸಂಬಂಧಪಟ್ಟ ಇಲಾಖೆಯು ಯಾವು ದೇ ಸಭೆಗಳನ್ನು ನಡೆಸುತ್ತಿಲ್ಲ. ಅಧಿಕಾರಿಗಳು ರೈತರ ಪರವಾಗಿ ನಿಲ್ಲುತ್ತಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ: Gudibande News: ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿ: ಮುನಿಕೃಷ್ಣ
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತರಿಂದ ಮನವಿ ಸ್ವೀಕರಿಸಿದ ತಹಸಿಲ್ದಾರ್ ಅವರು ಮಾತನಾಡಿ, ನಮೂನೆ 53 ರ ಅಡಿಯಲ್ಲಿ ನಿಯಮಾನುಸಾರ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಈಗಾಗಲೇ 37 ಅರ್ಜಿಗಳು ಸಿದ್ಧವಾಗಿವೆ. ಕೇವಲ ಎರಡು ತಿಂಗಳ ಒಳಗಾಗಿ ಇವುಗಳನ್ನು ಸಂಪೂರ್ಣವಾಗಿ ಇತ್ಯರ್ಥ ಪಡಿಸಲಾಗುವುದು. ಬಳಿಕ ನಮೂನೆ 57 ರ ಅಡಿಯಲ್ಲಿ ಬಂದಿರುವ ಅರ್ಜಿಗಳನ್ನು ಹಂತ ಹಂತ ವಾಗಿ ಪರಿಶೀಲಿಸಿ ಪ್ರಕ್ರಿಯೆಯನ್ನು ಮುಗಿಸಲಾಗುವುದು ಎಂದು ಭರವಸೆ ನೀಡಿದರು.
ಅಧಿಕಾರಿಗಳ ಈ ಭರವಸೆಯ ಬಳಿಕ ರೈತರು ಪ್ರತಿಭಟನೆಯನ್ನು ಹಿಂತೆಗೆದುಕೊಂಡರು. ಹೋರಾಟ ದಲ್ಲಿ ತಾಲೂಕಿನ ನೂರಾರು ಬಗರ್ ಹುಕಂ ಸಾಗುವಳಿದಾರರು ಹಾಗೂ ಕರ್ನಾಟಕ ಭೂ ಹಕ್ಕು ದಾರರ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು.