ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

'Shikshana Seva Ratna' Award: ಕರ್ನಾಟಕ ಪ್ರೆಸ್ ಕ್ಲಬ್‌ನ 2026ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿ: ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಪ್ರೊ.ಶ್ರೀನಿವಾಸಮೂರ್ತಿ ಆಯ್ಕೆ

ಶಿಕ್ಷಣ ಕ್ಷೇತ್ರದಲ್ಲಿ ಎರಡು ದಶಕಗಳಿಂದ ಗಣನೀಯ ಸೇವೆ ಸಲ್ಲಿಸುತ್ತಿರುವ ಶಿಡ್ಲಘಟ್ಟ ತಾಲ್ಲೂಕಿನ ಸುಂದರಹಳ್ಳಿ ಗ್ರಾಮದ ಶಿಕ್ಷಣ ತಜ್ಞ, ಲೇಖಕ ಹಾಗೂ ಅಂಕಣಕಾರ ಪ್ರೊ. ಶ್ರೀನಿವಾಸಮೂರ್ತಿ ಎನ್.ಸುಂದರಹಳ್ಳಿ ಅವರು ಕರ್ನಾಟಕ ಪ್ರೆಸ್ ಕ್ಲಬ್ ನೀಡುವ 2026ನೇ ಸಾಲಿನ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಪ್ರೊ. ಶ್ರೀನಿವಾಸಮೂರ್ತಿ ಆಯ್ಕೆ

-

Profile
Ashok Nayak Sep 12, 2026 8:23 PM

ಚಿಕ್ಕಬಳ್ಳಾಪುರ: ಶಿಕ್ಷಣ ಕ್ಷೇತ್ರದಲ್ಲಿ ಎರಡು ದಶಕಗಳಿಂದ ಗಣನೀಯ ಸೇವೆ ಸಲ್ಲಿಸುತ್ತಿರುವ ಶಿಡ್ಲಘಟ್ಟ ತಾಲ್ಲೂಕಿನ ಸುಂದರಹಳ್ಳಿ ಗ್ರಾಮದ ಶಿಕ್ಷಣ ತಜ್ಞ, ಲೇಖಕ ಹಾಗೂ ಅಂಕಣಕಾರ ಪ್ರೊ. ಶ್ರೀನಿವಾಸಮೂರ್ತಿ ಎನ್.ಸುಂದರಹಳ್ಳಿ ಅವರು ಕರ್ನಾಟಕ ಪ್ರೆಸ್ ಕ್ಲಬ್ ನೀಡುವ 2026ನೇ ಸಾಲಿನ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಜಿ. ತಿಳಿಸಿದ್ದಾರೆ.

ಇದನ್ನೂ ಓದಿ: Dasoha Ratna Award: ಬಸವ ಸಮಿತಿಯಿಂದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರಿಗೆ 'ದಾಸೋಹ ರತ್ನ' ಪ್ರಶಸ್ತಿ ಪ್ರದಾನ

ಪ್ರಸ್ತುತ ಶಿಡ್ಲಘಟ್ಟದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೊ. ಶ್ರೀನಿವಾಸಮೂರ್ತಿ ಅವರು ಶಿಕ್ಷಣ ಸೇವೆಯ ಜತೆಗೆ ಲೇಖಕರಾಗಿ, ಅಂಕಣಕಾರರಾಗಿ ಹಾಗೂ ಸ್ಫೂರ್ತಿದಾಯಕ ಭಾಷಣಕಾರರಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿ ದ್ದಾರೆ.

ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಸೆ.20ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ರಮೇಶ್ ಎಸ್.ಜಿ. ತಿಳಿಸಿದ್ದಾರೆ.